ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಯಾರೋ ಅಪರಿಚಿತರು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ ಘಟನೆ ಮಾ. 23 ರಂದು ನಡೆದಿದ್ದು ಪ್ರಕರಣದ ಓರ್ವ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿ ಉಮರ್ ಫಾರೂಕ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅದರಂತೆ ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಿರುತ್ತದೆ.
ಉಳಿದ 3 ಆರೋಪಿಗಳು ತಲೆಮರೆಸಿಕೊಂಡಿದ್ದು ಶೋಧ ಕಾರ್ಯ ನಡೆಯುತ್ತಿದೆ.