Friday, August 12, 2022

ಬಂಟ್ವಾಳ: ಗೋಕಳ್ಳತನ-ದನದ ಮಾಂಸ ಸಹಿತ ಆರೋಪಿಗಳು ವಶಕ್ಕೆ

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ ನಡೆದಿದೆ.


ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಗೋಳ್ತಮಜಲು ನಿವಾಸಿಗಳಾದ ಮಹಮ್ಮದ್ ಮತ್ತು ಸಾಧಿಕ್ ಎಂಬವರನ್ನು ಬಂಧಿಸಲಾಗಿದೆ. ಗೋಳ್ತಮಜಲು ಮಹಮ್ಮದ್ ಎಂಬವರ ಮನೆಯಲ್ಲಿ ಕದ್ದು ತಂದ ದನಗಳನ್ನು ವಧೆ ಮಾಡಿದ ಬಳಿಕ, ಮಾಂಸಗಳನ್ನು ಮಾರಾಟ ಮಾಡಲಾಗುತ್ತಿತ್ತು.

ಈ ಬಗ್ಗೆ ಸ್ಥಳೀಯರಿಂದ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ ‌ಐ.ಅವಿನಾಶ್ ನೇತೃತ್ವದ ನಗರ ಠಾಣಾ ಪೊಲೀಸರ ತಂಡ ಮುಂಜಾವಿನ ವೇಳೆ ದಾಳಿ ನಡೆಸಿ, ಮಾಂಸ ಸಹಿತ ಆರೋಪಿಗಳು ಬಂಧಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

ವಿಶೇಷ ವರದಿಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು...

ಬೆಳ್ತಂಗಡಿ: ಅನ್ಯಕೋಮಿನ ಜೋಡಿ ಪತ್ತೆ-ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ.ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್‌ಗೆ ರೂಮ್ ಬುಕ್ಕಿಂಗ್...

ದುಬೈನಿಂದ ಬಂದಿಳಿದ ಓರ್ವನ ನಿಕ್ಕರ್‌ನಲ್ಲಿತ್ತು 43 ಲಕ್ಷದ ಚಿನ್ನ: ಮತ್ತೋರ್ವನಲ್ಲಿ 5 ಲಕ್ಷ ರೂ ಮೌಲ್ಯದ ಫಾರಿನ್‌ ಕರೆನ್ಸಿ..!

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಹಾಗೂ ವಿದೇಶಿ ಕರೆನ್ಸಿ ಸಾಗಾಟ ಪ್ರಕರಣಗಳು ನಡೆದಿವೆದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರು ಒಳ...