Thursday, August 11, 2022

ಮಂಗಳೂರು: ಇಂಧನ ದರ ಏರಿಕೆ ಖಂಡಿಸಿ ಸಿಪಿಐಎಂನಿಂದ ಪ್ರತಿಭಟನೆ

ಮಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಔಷಧಿ ಮತ್ತಿತರ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಸರಕಾರದ ನಡೆಯನ್ನು ವಿರೋಧಿಸಿ ಸಿಪಿಐಎಂನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನ ನಡೆಯಿತು.


ಈ ವೇಳೆ ಪ್ರತಿಭಟನೆಯನ್ನುದ್ದೇಶಿಸಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳಾದ ಯಾದವ ಶೆಟ್ಟಿಯವರು ಮಾತನಾಡಿ ‘ಜೀವನಾವಶ್ಯಕ ವಸ್ತುಗಳಾದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಔಷಧಿ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರು ಕಂಗಾಲಾಗಿದ್ದ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕೂಡಲೇ ಸರಕಾರ ಎಚ್ಚುತ್ತುಕೊಂಡು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ಸಿಪಿಎಂನ ಪ್ರಮುಖರಾದ ಸುನೀಲ್ ಕುಮಾರ್ ಬಜಾಲ್ , ಜೆ .ಬಾಲಕೃಷ್ಣ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು ,ಜಯಂತಿ ನಾಯಕ್ ,

ಜಯಂತಿ ಬಿ. ಶೆಟ್ಟಿ ,ಪದ್ಮಾವತಿ ಶೆಟ್ಟಿ ,ಸದಾಶಿವ ದಾಸ್, ಬಿ ಕೆ ಇಮ್ತಿಯಾಜ್, ಮನೋಜ್ ವಾಮಂಜೂರು ಸೇರಿಂತೆ ಇನ್ನಿತರ ಹಲವಾರು ಮಂದಿ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು..

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...

ಆ.14 ರಂದು ಮಂಗಳೂರು ಪುರಭವನದಲ್ಲಿ ನಾಟಕ ಪ್ರದರ್ಶನ ಮತ್ತು ಮೆಗಾ ಮ್ಯಾಜಿಕ್

ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.14 ರ ಭಾನುವಾರ ಸಂಜೆ 5 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು...

ತೊಕ್ಕೊಟ್ಟುವಿನಲ್ಲಿ ಬೈಕ್‌-ಕಾರು ಢಿಕ್ಕಿ: ಸವಾರ ಗಂಭೀರ

ಉಳ್ಳಾಲ: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...