Friday, July 1, 2022

ಕಣ್ಣೂರಿನಲ್ಲಿ ಸಿಪಿಎಂ ಕಾರ್ಯಕರ್ತನ ತಂಡದಿಂದ ಬರ್ಬರ ಹತ್ಯೆ

ಕಣ್ಣೂರು: ಸಿಪಿಎಂ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಕಣ್ಣೂರಿನ ತಲಶೇರಿ ಸಮೀಪದ ಪುನ್ನಾಳ್ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.

ಸಿಪಿಎಂ ಕಾರ್ಯಕರ್ತ ಹರಿದಾಸನ್ ( 54) ಮೃತಪಟ್ಟವರು.

ಮೀನುಗಾರಿಕೆಯ ಕೆಲಸ ಮುಗಿಸಿ ಇಂದು ಮುಂಜಾನೆ ಮನೆಗೆ ಮರಳುತ್ತಿದ್ದಾಗ ಮನೆ ಸಮೀಪ ತಂಡದಿಂದ ದಾಳಿ ನಡೆಸಿದ್ದು, ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಬಂದಾಗ ತಂಡವು ವಾಹನದಲ್ಲಿ ಪರಾರಿಯಾಗಿದೆ.

ಗಂಭೀರ ಗಾಯಗೊಂಡ ಹರಿದಾಸನ್ ರವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಆಗಲೇ ಮೃತಪಟ್ಟಿದ್ದರು. ಎರಡು ಬೈಕ್ ಗಳಲ್ಲಿ ಬಂದ ತಂಡವು ಈ ಕೃತ್ಯ ನಡೆಸಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಬಾವಿಗೆ ಹಾರಿ ಯುವತಿ ಜೀವಾಂತ್ಯ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ.ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ.ಶರ್ಮಿಳಾರವರು ಸುಮಾರು 8 ತಿಂಗಳಿನಿಂದ...

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರಕಾರ: ಪುತ್ತೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ...

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...