ಮಂಗಳೂರು : ಟೀಂ ಇಂಡಿಯಾ ಕ್ರಿಕೆಟಿಗ ಮನೀಶ್ ಪಾಂಡೆ ಮತ್ತು ಆಶ್ರಿತಾ ಶೆಟ್ಟಿ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದಕ್ಕೆ ಪೂರಕವಾಗಿ ಈ ಇಬ್ಬರೂ ಪರಸ್ಪರ ಇನ್ ಸ್ಟಾಗ್ರಾಮ್ ನಲ್ಲಿ ಅನ್ ಫಾಲೋ ಮಾಡಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾದ ಆಟಗಾರರ ಡಿವೋರ್ಸ್ ಪರ್ವ ಜಾಸ್ತಿಯಾಗಿದೆ. ಶಿಖರ್ ಧವನ್, ಯಜ್ವೇಂದ್ರ ಚಹಲ್, ಹಾರ್ದಿಕ್ ಪಾಂಡ್ಯ ಸಂಬಂಧ ಕೊನೆಗೊಂಡಿತು. ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ವಿಚ್ಛೇದನದ ಸುದ್ದಿಯೂ ಕೇಳಿ ಬರುತ್ತಿದೆ. ಇದರ ನಡುವೆ ಮತ್ತೊಬ್ಬ ಭಾರತೀಯ ಕ್ರಿಕೆಟಿಗ ಮನೀಶ್ ಪಾಂಡೆ ಮತ್ತು ಅವರ ಪತ್ನಿ ಆಶ್ರಿತಾ ಶೆಟ್ಟಿ ದಾಂಪತ್ಯದಲ್ಲಿಯೂ ಬಿರುಕು ಮೂಡಿದ್ದು, ಇಬ್ಬರೂ ದೂರವಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಡಿವೋರ್ಸ್ ಗೆ ಮುಂದಾದ್ರ ಕನ್ನಡಿಗ ಮನೀಶ್ ಪಾಂಡೆ
ಕನ್ನಡಿಗ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಮನೀಶ್ ಪಾಂಡೆ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ವದಂತಿ ಇಷ್ಟು ವೇಗವಾಗಿ ಎಲ್ಲೆಡೆ ಹಬ್ಬಲು ಕಾರಣವೂ ಇದ್ದು, ಈ ಸ್ಟಾರ್ ಜೋಡಿ ತಮ್ಮ ಅಧಿಕೃತ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಪರಸ್ಪರ ಅನ್ ಫಾಲೋ ಮಾಡಿದ್ದಾರೆ. ಇದರ ಜೊತೆಗೆ ಇಬ್ಬರ ಖಾತೆಯಿಂದಲೂ ಇಬ್ಬರು ಜೊತೆಗಿರುವ ಫೋಟೋಗಳನ್ನು ಡಿಲೀಟ್ ಮಾಡಲಾಗಿದೆ. ಹೀಗಾಗಿ ಈ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಈ ಇಬ್ಬರು ಕೂಡ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈಗ ಹಬ್ಬಿರುವ ವದಂತಿಗೆ ಈ ಸ್ಟಾರ್ ದಂಪತಿಗಳು ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
ಇದನ್ನೂ ಓದಿ: ಅದು ನಿಜವಾಗಿರಬಹುದು… ಡಿವೋರ್ಸ್ ವದಂತಿ ಬಗ್ಗೆ ಕೊನೆಗೂ ಮೌನ ಮುರಿದ ಚಹಲ್ !
ಪಾಂಡೆ-ಆಶ್ರಿತಾ ದಾಂಪತ್ಯ ಜೀವನ:
ಮನೀಶ್ ಪಾಂಡೆ ಹಾಗೂ ಆಶ್ರಿತಾ ಶೆಟ್ಟಿ 2019ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕನ್ನಡಿಗರಾಗಿರುವ ಈ ಜೋಡಿ ಇಬ್ಬರೂ ಕರ್ನಾಟಕದವರಾಗಿದ್ದಾರೆ. ಪಾಂಡೆ ಪತ್ನಿ ಅವರು ಮಂಗಳೂರಿನವರಾಗಿದ್ದು, ಆಶ್ರಿತಾ ತಮಿಳು ಮತ್ತು ತುಳು ಚಿತ್ರಗಳಲ್ಲೂ ಕೆಲಸ ಮಾಡಿದ್ದಾರೆ.
ಇನ್ನು, ಕಳೆದ ಬಾರಿ ಐಪಿಎಲ್ 2024ರ ವೇಳೆ ಆಶ್ರಿತಾ ಅವರು ಪಾಂಡೆ ಬೆಂಬಲಿಸಲು ಒಮ್ಮೆಯೂ ಮೈದಾನಕ್ಕೆ ಬಂದಿರಲಿಲ್ಲ. ಅಲ್ಲದೇ ಮನೀಶ್ ಪಾಂಡೆ ಐಪಿಎಲ್ 2024ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದರು. ಅಲ್ಲದೇ ತಂಡವು ಪ್ರಶಸ್ತಿ ಗೆದ್ದುಕೊಂಡಿತ್ತು. ಆದರೆ ಆಶ್ರಿತಾ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪೋಸ್ಟ್ ಹಾಕಿರಲಿಲ್ಲ.
ಮನೀಶ್ ವೃತ್ತಿಜೀವನ
ಇನ್ನು ಮನೀಶ್ ಪಾಂಡೆ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. 2015ರಲ್ಲಿ ಟೀಂ ಇಂಡಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಮನೀಶ್ ಗೆ ತಂಡದಲ್ಲಿ ಖಾಯಂ ಸ್ಥಾನ ಗಿಟ್ಟಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಅಲ್ಪಾವಧಿಯಲ್ಲೇ ಕೊನೆಗೊಂಡಿತು. ಭಾರತದ ಪರ ಇದುವರೆಗೆ 29 ಏಕದಿನ ಪಂದ್ಯಗಳನ್ನಾಡಿರುವ ಮನೀಶ್ ಇದರಲ್ಲಿ 566 ರನ್ ಕಲೆಹಾಕಿದ್ದರೆ, 39 ಟಿ20 ಪಂದ್ಯಗಳಲ್ಲಿ 709 ರನ್ ಗಳಿಸಿದ್ದಾರೆ. ದೇಶೀ ಕ್ರಿಕೆಟ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಮನೀಶ್ ಅವರನ್ನು ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಗೆ ತಂಡದಿಂದ ಕೈಬಿಡಲಾಗಿತ್ತು.