Connect with us

LATEST NEWS

6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ

Published

on

ಮಂಗಳೂರು/ಸಿಡ್ನಿ : ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಅಂತ್ಯಗೊಂಡಿದೆ.

ಎರಡನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವು 181 ರನ್​ಗಳಿಗೆ ಆಲೌಟ್ ಆದರೆ, ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು.

ಪ್ರಥಮ ಇನಿಂಗ್ಸ್​ನಲ್ಲಿ ರಿಷಭ್ ಪಂತ್ ಅವರ 40 ರನ್​ಗಳ ಹಾಗೂ ಜಸ್​ಪ್ರೀತ್ ಬುಮ್ರಾ ಅವರ 22 ರನ್​ಗಳ ಕೊಡುಗೆಯೊಂದಿಗೆ ಭಾರತ ತಂಡವು 185 ರನ್​ಗಳಿಸಿ ಆಲೌಟ್ ಆಗಿತ್ತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ಬ್ಯಾಟರ್​ಗಳ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿ ಮುಂದೆ ರನ್​ಗಳಿಸಲು ಪರದಾಡಿದರು. ಪರಿಣಾಮ ಆಸೀಸ್ ಪಡೆ ತವರು ಮೈದಾನದಲ್ಲಿ ಕೇವಲ 181 ರನ್​​ಗಳಿಗೆ ಆಲೌಟ್ ಆಯಿತು.

ಇದನ್ನೂ ಓದಿ: ಮೈದಾನ ತೊರೆದ ಬುಮ್ರಾ; ತಂಡದ ಹೊಣೆ ಯಾರ ಹೆಗಲಿಗೆ ?

ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ತಲಾ 3 ವಿಕೆಟ್ ಪಡೆದರೆ, ನಿತೀಶ್ ಕುಮಾರ್ ರೆಡ್ಡಿ ಹಾಗೂ ಜಸ್​ಪ್ರೀತ್ ಬುಮ್ರಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

ದ್ವಿತೀಯ ಇನಿಂಗ್ಸ್
ಮೊದಲ ಇನಿಂಗ್ಸ್​ನಲ್ಲಿ 4 ರನ್​ಗಳ ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 13 ರನ್​ಗಳಿಸಿ ಔಟಾದರೆ, ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ (22) ಕೂಡ ವಿಕೆಟ್ ಒಪ್ಪಿಸಿದರು.

ಇನ್ನು ಶುಭ್ ಮನ್ ಗಿಲ್ (13) ಹಾಗೂ ವಿರಾಟ್ ಕೊಹ್ಲಿ (6) ಬಂದ ವೇಗದಲ್ಲೇ ಹಿಂತಿರುಗಿದರು. ಪರಿಣಾಮ ಟೀಮ್ ಇಂಡಿಯಾ 78 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡಿತು.

ರಿಷಭ್ ಪಂತ್ ಸಿಡಿಲಬ್ಬರದ ಬ್ಯಾಟಿಂಗ್
ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಕಣಕ್ಕಳಿದ ರಿಷಭ್ ಪಂತ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆಸ್ಟ್ರೇಲಿಯಾ ಬೌಲರ್ ಗಳನ್ನು ಮನಸೋ ಇಚ್ಛೆ ದಂಡಿಸಿದ ಪಂತ್ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 33 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್ ಗಳೊಂದಿಗೆ 61 ರನ್ ಸಿಡಿಸಿದರು.

ಆದರೆ ರಿಷಭ್ ಪಂತ್ ಔಟಾದ ಬೆನ್ನಲ್ಲೇ ನಿತೀಶ್ ಕುಮಾರ್ ರೆಡ್ಡಿ (4) ಸುಲಭ ಕ್ಯಾಚ್ ನೀಡಿ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಜೊತೆಗೂಡಿದ ರವೀಂದ್ರ ಜಡೇಜಾ (8) ಹಾಗೂ ವಾಷಿಂಗ್ಟನ್ ಸುಂದರ್ (6) 2ನೇ ದಿನದಾಟದ ಅಂತ್ಯದವರೆಗೆ ಬ್ಯಾಟಿಂಗ್ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.

ಅದರಂತೆ ಟೀಮ್ ಇಂಡಿಯಾ ದ್ವಿತೀಯ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 141 ರನ್ ಕಲೆಹಾಕಿದೆ. ಈ ಮೂಲಕ ದ್ವಿತೀಯ ಇನಿಂಗ್ಸ್ ನಲ್ಲಿ ಒಟ್ಟು 145 ರನ್ ಗಳ ಮುನ್ನಡೆಯನ್ನು ಪಡೆದುಕೊಂಡಿದೆ.

 

DAKSHINA KANNADA

ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’

Published

on

ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’ ಕಾರ್ಯಕ್ರಮವು ಡಾ. ಪಿ. ದಯಾನಂದ ಪೈ -ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿಯಲ್ಲಿ ಜನವರಿ 3 ರಂದು ನಡೆದಿದೆ.

ಹಿರಿಯ ವಿದ್ಯಾರ್ಥಿಗಳ ಸಂಘದ ದಶಮಾನೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಲೋಗೋ ಅನಾವರಣ ಹಾಗೂ ಸ್ತಾತಕೋತ್ತರ ವಿದ್ಯಾರ್ಥಿಗಳಿಗೆ ನೆಟ್/ಕೆ.ಸೆಟ್ ಪರೀಕ್ಷೆಯ ಪೂರ್ವ ತಯಾರಿಯನ್ನು ಏರ್ಪಡಿಸಲಾಗಿತ್ತು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿನ ಸಮಾಜ ಶಾಸ್ತ್ರ ವಿಭಾಗದ ಸಹ ಪ್ರಾದ್ಯಪಕ, ಮಂಗಳೂರು ವಿಶ್ವವಿದ್ಯಾನಿಲದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾಗಿರುವ ಡಾ. ಶೇಷಪ್ಪ ಕೆ. ಲೋಗೋ ಅನವಾರಣಗೊಳಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಗಾಂದಿನಗರ ಮಂಗಳೂರು ಇಲ್ಲಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಕರಾಗಿರುವ ಶ್ರೀ. ಯತೀನ್ ಸಂಪನ್ಮೂಲ ವ್ಯಕ್ತಿಯಾಗಿ ಹಾಜರಿದ್ದರು. ದಯಾನಂದ ಕಾಲೇಜಿನ ಪ್ರಾಂಶುಪಾಲರಾದ ಫ್ರೊ. ಜಯಕರ ಭಂಡಾರಿ ಎಂ. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.

 

ಕಾಲೇಜಿನ ಐಕ್ಯೂಎಸಿಯ ಸಂಯೋಜಕ ದೇವಿಪ್ರಸಾದ್, ಸ್ತಾತಕೋತ್ತರ ವಿಭಾಗದ ಸಂಯೋಜಕ ಡಾ. ಲೋಕೇಶನಾಥ್, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕರಾಗಿರುವ ನಾಗರಾಜ್ ಎಂ. , ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧೀರಜ್ ಕುಮಾರ್ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ತುಷಾರ್ ಕೆ. ವೇದಿಯಲ್ಲಿ ಉಪಸ್ಥಿತರಿದ್ದರು.

Continue Reading

LATEST NEWS

ಇಬ್ಬರು ಮಕ್ಕಳನ್ನು ಕೊಂ*ದು ನೇ*ಣಿಗೆ ಶರಣಾದ ದಂಪತಿ

Published

on

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂ*ದು ದಂಪತಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃ*ತಪಟ್ಟವರು.

ರಾತ್ರಿ(ಜ.5) ಇಬ್ಬರು ಮಕ್ಕಳನ್ನು ಹ*ತ್ಯೆ ಮಾಡಿದ ದಂಪತಿ ಬಳಿಕ ಮನೆಯಲ್ಲೇ ನೇ*ಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಣ ಏನು?

ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಮೊದ ಮಗು ಅನುಪ್ರಿಯಾಗೆ ಆರೋ*ಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು ಎನ್ನಲಾಗಿದೆ.

ಮನೆಗೆ ಮೂರು ಜನ ಕೆಲಸಗಾರರನ್ನು ನೇಮಿಸಲಾಗಿತ್ತು. ಇಬ್ಬರು ಅಡುಗೆಗೆ ನಿಯೋಜನೆಗೊಂಡಿದ್ದರೆ, ಒಬ್ಬರು ಮಗು ನೋಡಿಕೊಳ್ಳಲು ಇದ್ದರು. ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗಲಿದ್ದೇವೆ. ಬೇಗ ಕೆಲಸಕ್ಕೆ ಬನ್ನಿ ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರಂತೆ. ಹೀಗಾಗಿ ಇಂದು(ಜ.6) ಬೆಳಗ್ಗೆ ಕೆಲಸದವರು ಮನೆಗೆ ಬಂದಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಭಾನುವಾರವೂ ಪ್ಯಾಕಿಂಗ್ ಮಾಡಲು ಕೆಲಸದವರನ್ನು ಕರೆಸಿಕೊಂಡಿದ್ದರಂತೆ.

ಇದನ್ನೂ ಓದಿ : ಬಾಯ್ ಫ್ರೆಂಡ್ ಗಾಗಿ ಹುಡುಗಿಯರಿಬ್ಬರ ಬೀದಿ ಜಗಳ

ಮೊದಲ ಮಗು ವಿಶೇಷ ಚೇತನವಾಗಿದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ತಿಳಿಸಿರುವ ಬಗ್ಗೆ ವರದಿಯಾಗಿದೆ.

Continue Reading

LATEST NEWS

ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಬಂಪರ್ ಗ್ಯಾರೆಂಟಿ !

Published

on

ಮಂಗಳೂರು/ನವದೆಹಲಿ : ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಗ್ಯಾರೆಂಟಿ ಯೋಜನೆ ಘೋಷಿಸಿದೆ.

 

ಕರ್ನಾಟಕದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಜನರಿಗೆ ನೀಡಲಿರುವ ಯೋಜನೆಯನ್ನು ಅನಾವರಣಗೊಳಿಸಿದರು.

ಇದನ್ನೂ ಓದಿ: ಬಾಯ್ ಫ್ರೆಂಡ್ ಗಾಗಿ ಹುಡುಗಿಯರಿಬ್ಬರ ಬೀದಿ ಜಗಳ

ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರೆಂಟಿಗಳು ಪ್ರಗತಿಯಲ್ಲಿದ್ದು, ಈಗ ಈ ಯೋಜನೆಯು ದೆಹಲಿಯಲ್ಲೂ ವಿಸ್ತರಿಸಲಿದೆ.

ಗ್ಯಾರೆಂಟಿ ಯೋಜನೆ ಕುರಿತು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ಡಿಕೆಶಿ, ‘ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಪ್ಯಾರಿ ದೀದಿ’ ಯೋಜನೆ ಜಾರಿ ಮಾಡಲಿದ್ದೇವೆ. ಇದರ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುತ್ತೇವೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಮಾಡಿದ ಹಾಗೆಯೇ ಮೊದಲ ಸಚಿವ ಸಂಪುಟದ ಸಭೆಯಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು’ ಎಂದರು.

 

Continue Reading

LATEST NEWS

Trending

Exit mobile version