ಕ್ವಾರಂಟೈನ್ ನಿಂದ ಹೊರ ಬಂದು ಸುತ್ತಾಡಿದರೆ ಕ್ರಿಮಿನಲ್ ಕೇಸ್: ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ
ಕ್ವಾರಂಟೈನ್ ನಿಂದ ಹೊರ ಬಂದು ಸುತ್ತಾಡಿದರೆ ನಿರ್ದಕ್ಷಿಣ್ಯವಾಗಿ ಕ್ರಿಮಿನಲ್ ಕೇಸ್: ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ
ಉಡುಪಿ: ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದವರಿಗೆ ಸರ್ಕಾರಿ ಕ್ವಾರಂಟೈನ್ ಕಡ್ಡಾಯವಾಗಿದೆ.
ಕ್ವಾರಂಟೈನ್ ಕೇಂದ್ರದಿಂದ ಹೊರಗೆ ಬಂದು ಸುತ್ತಾಡಿದರೆ ನಿರ್ದಕ್ಷಿಣ್ಯವಾಗಿ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಹೊರದೇಶ -ರಾಜ್ಯಗಳಿಂದ ಆರು ಸಾವಿರ ಮಂದಿ ಉಡುಪಿ ಜಿಲ್ಲೆ ಆಗಮಿಸಿದ್ದಾರೆ. ಎಲ್ಲರನ್ನೂ ಜಿಲ್ಲೆಗೆ ಸ್ವಾಗತ ಮಾಡಿ ಕ್ವಾರಂಟೈನ್ ಮಾಡಿದ್ದೇವೆ.
ಆದ್ರೆ ಕ್ವಾರಂಟೈನ್ ನಲ್ಲಿರುವವರು ಹೊರಗಡೆ ಓಡಾಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ.
ಹೋಟೆಲ್, ಹಾಸ್ಟೆಲ್, ಶಾಲೆಗಳಿಂದ ಹೊರಬರುತ್ತಿದ್ದಾರೆ ಎಂಬ ಮಾಹಿತಿಯಿದೆ. ಕ್ವಾರಂಟೈನ್ ನಲ್ಲಿರುವವರು ಹೊರಗೆ ಬರುವುದು, ಓಡಾಡುವುದು, ಎಪಿಡೆಮಿಕ್ ಅ್ಯಕ್ಟ್ ಗೆ ವಿರುದ್ಧವಾಗಿದೆ.
ಇಂತವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದ ಜಿಲ್ಲಾಧಿಕಾರಿಗಳು ಸೆಕ್ಷನ್ 188 ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಪ್ರವೇಶಕ್ಕೆ ಕೊಟ್ಟ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಮನವಿ ಮಾಡಿದ ಜಿಲ್ಲಾಧಿಕಾರಿಗಳು, ನಿಮ್ಮಿಂದಾಗಿ ಉಡುಪಿಯ ಜನರಿಗೆ ರೋಗ ಹರಡಬಾರದು ಎಂದು ಕಿವಿ ಮಾತು ಹೇಳಿದ್ದಾರೆ.
LATEST NEWS
ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿಅ*ಗ್ನಿ ಅವಘ*ಡ
ಉಡುಪಿ : ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು(ಸೆ.23) ಬೆಳಗ್ಗೆ ಅ*ಗ್ನಿ ಅವಘ*ಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅ*ಗ್ನಿಶಾಮಕ ದಳದ ತಂಡ ಬೆಂ*ಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾರಂಭದಲ್ಲಿ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂ*ಕಿ ಹೊತ್ತಿಕೊಂಡಿದೆ. ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.