Wednesday, October 5, 2022

ಕಾರವಾರ: ಮೀನು ಹಿಡಿಯುತ್ತಿದ್ದ ಬಾಲಕ ಮೊಸಳೆ ದಾಳಿಯಿಂದ ಸಾವು

ಕಾರವಾರ: ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಮೊಸಳೆಯೊಂದು ಎಳೆದುಕೊಂಡು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದ ಸಮೀಪ ಹರಿಯುವ ಕಾಳಿ ನದಿಯಲ್ಲಿ ಸಂಭವಿಸಿದೆ.

ವಿನಾಯಕ ನಗರದ ನಿವಾಸಿ 15 ವರ್ಷದ ಮೊಹೀನ್ ಮೊಹಮ್ಮದ್ ಗುಲ್ಬರ್ಗ ಮೊಸಳೆ ದಾಳಿಗೆ ಒಳಗಾದವನು. ಆತ ದಾಂಡೇಲಿಯ ಹಳಿಯಾಳ ರಸ್ತೆಯ ಕಾಳಿ ನದಿ ದಂಡೆಯಲ್ಲಿ ಬೆಳಿಗ್ಗೆ ಮೀನು ಹಿಡಿಯಲು ಕುಳಿತಿದ್ದ.

ಇದ್ದಕ್ಕಿದ್ದಂತೆ ದಾಳಿ ಮಾಡಿದ ಮೊಸಳೆಯು ಅವನನ್ನು ಕಚ್ಚಿ ನೀರಿಗೆ ಎಳೆದೊಯ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಜಂಗಲ್ ಲಾಡ್ಜ್ ರೆಸಾರ್ಟ್ ಸಿಬ್ಬಂದಿ ಬಾಲಕನಿಗಾಗಿ ಶೋಧ ಕಾರ್ಯ ನಡೆಸಿ ಶವ ಮೇಲೆತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...