LATEST NEWS
ಮೊಬೈಲ್‌ಗೆ ಸಿಮ್ ಹಾಕಿದಾಕ್ಷಣ ಬ್ಯಾಂಕ್ ಅಕೌಂಟ್‌ನಿಂದ ಕೋಟಿಗಟ್ಟಲೆ ಹಣ ಮಾಯ
Published
5 hours agoon
ಮಂಗಳೂರು/ಬೆಂಗಳೂರು: ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಹೊಸ ಮೊಬೈಲ್ ಕಳಿಸಿ, ಅದರ ಮೂಲಕ ಸೈಬರ್ ವಂಚಕರು 2.80 ಕೋಟಿ ರೂ. ದೋಚಿದ್ದಾರೆ. ಇದು ಸೈಬರ್ ಕ್ರೈಂ ಖದೀಮರ ಹೊಸ ಪ್ಲಾನ್ ಆಗಿದೆ.
ಕರ್ನಾಟಕದ ರಾಜಧಾನಿಯಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನದಿನಕ್ಕೆ ಹೆಚ್ಚುತ್ತಿವೆ. ಸೈಬರ್ ವಂಚಕರು ಹೊಸ ಹೊಸ ಮಾರ್ಗಗಳ ಮುಖಾಂತರ ವಂಚನೆ ಮಾಡುತ್ತಿದ್ದಾರೆ. ಬೆಂಗಳೂರಿನ ಟೆಕ್ಕಿಯೊಬ್ಬರ ವಿಳಾಸಕ್ಕೆ ಸೈಬರ್ ವಂಚಕರು ನೀವು ಹೊಸ ಸಿಮ್ ಖರೀದಿ ಮಾಡಿದ್ದೀರಿ, ಅದಕ್ಕೆ ಗಿಫ್ಟ್ ಎಂದು ಮೊಬೈಲ್ ಕಳುಹಿಸಿದ್ದರು. ಗಿಫ್ಟ್ ಸ್ವೀಕರಿಸಿದ ಟೆಕ್ಕಿ ಸಿಮ್ನ್ನು ಮೊಬೈಲ್ನಲ್ಲಿ ಹಾಕಿದ್ದಾರೆ. ಸಿಮ್ ಹಾಕಿದ ಕೆಲವೇ ಗಂಟೆಗಳಲ್ಲಿ ಹಣ ಮಾಯವಾಗಿದೆ.
ಇದನ್ನೂ ಓದಿ : ಕುಡಿಯಬಾರದು ಎಂದು ಬುದ್ಧಿವಾದ ಹೇಳಿದಕ್ಕೆ ಅಪ್ಪನನ್ನೇ ಕೊಂ*ದ ದುಷ್ಟ ಮಗ
ಸೈಬರ್ ವಂಚಕರು ಮೊಬೈಲ್ನಲ್ಲಿ ಮೊದಲೇ ಕೆಲವು ಆ್ಯಪ್ಗಳನ್ನು ಇನ್ಸ್ಟಾಲ್ ಮಾಡಿದ್ದರು. ಟೆಕ್ಕಿ ಮೊಬೈಲ್‌ಗೆ ಸಿಮ್ ಹಾಕುತ್ತಿದ್ದಂತೆ, ಹಲವು ಸಂದೇಶಗಳು ಬಂದಿವೆ. ಈ ಮೊಬೈಲ್‌ಗೆ ಬರುವ ಸಂದೇಶಗಳು ಮತ್ತು ಒಟಿಪಿಗಳು ತಮಗೂ ಬರುವಂತೆ ವಂಚಕರು ಸೆಟ್ ಮಾಡಿದ್ದರು. ಸಂದೇಶಗಳು ಮತ್ತು ಒಟಿಪಿ ಮೂಲಕ ಟೆಕ್ಕಿಯ ಬ್ಯಾಂಕ್ ಖಾತೆ ಮಾಹಿತಿ ಪಡೆದಿದ್ದಾರೆ. ನಂತರ ಟೆಕ್ಕಿಯ ಬ್ಯಾಂಕ್ ಅಕೌಂಟ್ ಸೇರಿ ಎಲ್ಲವನ್ನು ಪರಿಶೀಲಿಸಿದ್ದಾರೆ. ಕೊನೆಗೆ ಬ್ಯಾಂಕ್ ಎಫ್ಡಿಯಲ್ಲಿ ಇಟ್ಟಿದ್ದ 2.80 ರೂ. ಅನ್ನು ಖದೀಮರು ಎಗರಿಸಿದ್ದಾರೆ. ವೈಟ್ಫೀಲ್ಡ್ ಸೆನ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ರಾಜ್ಯದ 11 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ; ಎಲ್ಲೆಲ್ಲಿ ?
Published
4 minutes agoon
19/01/2025By
NEWS DESK3ಮಂಗಳೂರು/ಬೆಂಗಳೂರು : ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಸುರಿದ ಮಳೆ ಅಚ್ಚರಿ ಮೂಡಿಸಿದೆ. ಈ ನಡುವೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು (KSNDMC) ಹವಾಮಾನ ಇಲಾಖೆ ಮುನ್ಸೂಚನೆಯನ್ನು ಉಲ್ಲೇಖಿಸಿ ಎಚ್ಚರಿಕೆ ನೀಡಿದೆ. ‘ರಾಜ್ಯದ ದಕ್ಷಿಣ ಒಳಭಾಗ, ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಉತ್ತರದ ಜಿಲ್ಲೆಗಳ ಶುಷ್ಕ ಗಾಳಿ ಇರಲಿದೆ. ರಾಜ್ಯದಾದ್ಯಂತ ಸಾಧಾರಣದಿಂದ ಮಂಜು ಮತ್ತು ಅಲ್ಲಲ್ಲಿ ತುಂತುರು ಮಳೆ ಇರುತ್ತದೆ’ ಎಂದು ಹೇಳಿದೆ.
ಎಲ್ಲೆಲ್ಲಿ ಮಳೆ ?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತೀವ್ರ ಚಳಿ ಇರಲಿದೆ ಎಂದು ತಿಳಿಸಿದೆ.
LATEST NEWS
ಮದುವೆ ತಯಾರಿ ನಡೆಯುತ್ತಿರುವಾಗಲೇ ಅ*ಪಘಾ*ತ; ಇಂಜಿನಿಯರ್ ವಧು ವಿ*ಧಿವಶ
Published
10 minutes agoon
19/01/2025ಮಂಗಳೂರು/ಮಂಡ್ಯ: ಎರಡು ಬೈಕ್ಗಳು ಪರಸ್ಪರ ಡಿಕ್ಕಿಯಾಗಿ ನರೇಗಾ ಮಹಿಳಾ ಇಂಜಿನಿಯರ್ ಸಾ*ವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ನಡೆದಿದೆ.
ಮೃ*ತ ಯುವತಿಯನ್ನು ಶರಣ್ಯ ಗೌಡ (25) ಎಂದು ಗುರುತಿಸಲಾಗಿದೆ.
ಮೂಲತಃ ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದ ಶರಣ್ಯ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆದ್ರೆ, ಕೆಲಸ ಮುಗಿಸಿ ಸ್ವಗ್ರಾಮ ಬಳೆಹೊನ್ನಿಗನದಿಂದ ಹಲಗೂರಿಗೆ ಹೋಗುತ್ತಿದ್ದಾಗ ಈ ದು*ರ್ಘಟನೆ ಸಂಭವಿಸಿದೆ. ಇನ್ನೊಂದು ನೋ*ವಿನ ವಿಚಾರ ಅಂದ್ರೆ ಶರಣ್ಯ ಗೌಡಗೆ ಮುಂದಿನ ತಿಂಗಳು ಫೆಬ್ರವರಿ 16ರಂದು ಮದುವೆ ನಿಶ್ಚಿಯವಾಗಿತ್ತು. ಆದರೆ ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲೇ ದು*ರಂತ ಅಂ*ತ್ಯ ಕಂಡಿದ್ದಾರೆ.
ಇದನ್ನೂ ಓದಿ : ಕಾರಿಗೆ ದಿಢೀರ್ ಬೆಂ*ಕಿ; ಹಸೆಮಣೆ ಏರಬೇಕಿದ್ದ ವರ ಸು*ಟ್ಟು ಬೂ*ದಿ
ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಸ್ವಗ್ರಾಮದಿಂದ ಹಲಗೂರಿಗೆ ಹೋಗ್ತಿದ್ದಾಗ ಬೈಕ್ ಗಳ ನಡುವೆ ಮುಖಾಮುಖಿ ಡಿ*ಕ್ಕಿಯಾಗಿದೆ. ಈ ದುರ್ಘಟನೆಯಲ್ಲಿ ತೀವ್ರ ರ*ಸ್ತಸ್ರಾವದಿಂದ ಶರಣ್ಯ ಸ್ಥಳದಲ್ಲೇ ಪ್ರಾ*ಣ ಬಿಟ್ಟಿದ್ದಾಳೆ. ಈ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು/ವಾಷಿಂಗ್ಟನ್ : ಭಾರತದಲ್ಲಿ, ಚೀನಾ ಮೂಲದ ಮೊಬೈಲ್ ಅಪ್ಲಿಕೇಶನ್ ಟಿಕ್ ಟಾಕ್ ಗೆ 2020ರಲ್ಲಿ ನಿಷೇಧ ಹೇರಿತ್ತು. ಭಾರತದ ನಂತರ ಅಮೆರಿಕದಲ್ಲೂ ಟಿಕ್ ಟಾಕ್ ಆ್ಯಪ್ ನಿಷೇಧಿಸಲಾಗಿದೆ.
ಭಾನುವಾರ ಆ್ಯಪಲ್ ಮತ್ತು ಗೂಗಲ್ ಪ್ಲೇಸ್ಟೋರ್‌ನಿಂದ ಆ್ಯಪ್ ಕಾಣೆಯಾಗಿದೆ. ಅಮೆರಿಕದಲ್ಲಿ ಸುಮಾರು 170 ಮಿಲಿಯನ್ ಜನರು ಟಿಕ್ ಟಾಕ್ ಆ್ಯಪ್ ಬಳಕೆ ಮಾಡುತ್ತಿದ್ದರು.
ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಅಧಿಕಾರವಹಿಸಿಕೊಳ್ಳಲಿದ್ದು, ನಿಷೇಧಗೊಂಡ ಟಿಕ್ ಟಾಕ್ ಆ್ಯಪ್ 90 ದಿನಗಳವರೆಗೆ ಬಳಕೆಗೆ ಸಿಗುವಂತೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಭದ್ರತೆಗೆ ಟಿಕ್ ಟಾಕ್ ಆ್ಯಪ್ ಧಕ್ಕೆಯುಂಟು ಮಾಡುತ್ತಿದೆ ಎಂದು ಭದ್ರತಾ ಏಜೆನ್ಸಿಗಳು ಹೇಳಿದೆ. ಹೀಗಾಗಿ ಆ್ಯಪ್ ಬಳಕೆಗೆ ನಿಷೇಧ ಹೇರಲಾಗಿದೆ.
ಇದನ್ನೂ ಓದಿ: ಪೆಟ್ರೋಲ್ ಟ್ಯಾಂಕರ್ ಸ್ಪೋ*ಟ: 70 ಮಂದಿ ಸಾ*ವು
ಶನಿವಾರ ರಾತ್ರಿ ಹೊತ್ತಿಗೆ ಟಿಕ್ ಟಾಕ್ ಆ್ಯಪ್ ತೆರೆದಾಗ ‘ದುರದೃಷ್ಟವಶಾತ್ ಅಮೆರಿಕದಲ್ಲಿ ಟಿಕ್ ಟಾಕ್ ಅನ್ನು ನಿಷೇಧಿಸುವ ಕಾನೂನನ್ನು ಜಾರಿಗೊಳಿಸಲಾಗಿದೆ, ಇದರರ್ಥ ನೀವು ಸದ್ಯಕ್ಕೆ ಟಿಕ್ ಟಾಕ್ ಅನ್ನು ಬಳಸಲಾಗುವುದಿಲ್ಲ. ಟಿಕ್ ಟಾಕ್ ಅನ್ನು ಮರುಸ್ಥಾಪಿಸಲು ನಮ್ಮೊಂದಿಗೆ ಕೆಲಸ ಮಾಡುವುದಾಗಿ ಅಧ್ಯಕ್ಷ ಟ್ರಂಪ್ ಸೂಚಿಸಿದ್ದಾರೆ. ಅವರು ಅಧಿಕಾರ ವಹಿಸಿಕೊಂಡ ನಂತರ ದಯವಿಟ್ಟು ಟ್ಯೂನ್ ಮಾಡಿ’ ಎನ್ನುವ ಸಂದೇಶ ಬಳಕೆದಾರರಿಗೆ ಕಾಣಿಸಿದೆ.
LATEST NEWS
ಕಾರಿಗೆ ದಿಢೀರ್ ಬೆಂ*ಕಿ; ಹಸೆಮಣೆ ಏರಬೇಕಿದ್ದ ವರ ಸು*ಟ್ಟು ಬೂ*ದಿ
ಭೀಕರ ರಸ್ತೆ ಅ*ಪಘಾತ; ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಕುಟುಂಬಕ್ಕೆ ಆ*ಘಾತ
ಮದುವೆಯಾಗುವ ಹೊಸ್ತಿಲಲ್ಲಿ ಇರುವ ಯುವ ಸಮೂಹಕ್ಕೆ ಕಿವಿಮಾತು..
ಪೆಟ್ರೋಲ್ ಟ್ಯಾಂಕರ್ ಸ್ಪೋ*ಟ: 70 ಮಂದಿ ಸಾ*ವು
ಸೈಫ್ ಮೇಲೆ ಹ*ಲ್ಲೆ ಪ್ರಕರಣ; ಪ್ರಮುಖ ಆರೋಪಿ ಬಾಂಗ್ಲಾ ಪ್ರಜೆ ಅರೆಸ್ಟ್
ಗೌತಮಿ ಬಳಿಕ ಮನೆಯಿಂದ ಹೊರಬಂದ ಸ್ಪರ್ಧಿ ಇವರೇನಾ?
Trending
- BIG BOSS6 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS5 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS5 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
- BIG BOSS6 days ago
ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?
Pingback: ಸೈಫ್ ಮೇಲೆ ಹ*ಲ್ಲೆ ಪ್ರಕರಣ; ಪ್ರಮುಖ ಆರೋಪಿ ಬಾಂಗ್ಲಾ ಪ್ರಜೆ ಅರೆಸ್ಟ್ - NAMMAKUDLA NEWS - ನಮ್ಮಕುಡ್ಲ ನ್ಯೂಸ್