ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದಕ್ಕೆ ಅವರ ಹೆಸರಲ್ಲಿ ತಿಥಿ ಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೊನ್ನೆ ತಾನೇ ನಡೆದಸ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಪಕ್ಷಕ್ಕೆ ಓಟು ಹಾಕಿದ್ದೇನೆ ಎಂದು ಬಹಿರಂಗಪಡಿಸಿದ್ದರು. ಈ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದು, ಅಲ್ಲದೇ ಪಕ್ಷ ಬಿಟ್ಟು ಹೋಗಲಿ ಎಂದು ವಾಗ್ದಾಳಿ ನಡೆಸಿದ್ದರು.
ನಿನ್ನೆ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗೆ ಬಂದು ಸ್ಪಧಿಸಿ ಗೆಲ್ಲಲಿ. ಅವನು ಗೆದ್ದರೆ ನನ್ನ ಜೀವನಪೂರ್ತಿ ಆತನ ಮನೆಯಲ್ಲೇ ಕೂಲಿ ಕೆಲಸ ಮಾಡುವೆ ಎಂದು ಓಪನ್ ಚಾಲೆಂಜ್ ಮಾಡಿದ್ದರು.
ಇವರ ಆಕ್ರೋಶ ಮತ್ತೊಂದು ಹಂತಕ್ಕೆ ತಲುಪಿದ್ದು, ಶ್ರೀನಿವಾಸ್ ತಿಥಿ ಕಾರ್ಡ್ ಮಾಡಿ ಹಂಚಿದ್ದಕ್ಕೆ ಪ್ರತಿಯಾಗಿ ಎಚ್ಡಿಕೆ ವೈಕುಂಠ ಸಮಾರಾಧನೆಯ ಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾ ಮೂಲಕ ಹಂಚಲಾಗುತ್ತಿದೆ.
ಜೂನ್ 22ರಂದು ಬಿಡದಿಯ ತೋಟದ ಮನೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ತಿಥಿ ಕಾರ್ಯ ಇದೆ ಎಂದು ಕಾರ್ಡ್ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ದುಃಖತಪ್ತರು ಎಂದು ರಾಧಿಕಾ ಕುಮಾರಸ್ವಾಮಿ ಹೆಸರನ್ನೂ ಹಾಕಲಾಗಿದೆ.
ಅಷ್ಟೇ ಅಲ್ಲದೆ ಇಂದು ತುಮಕೂರಲ್ಲಿ ಶ್ರೀನಿವಾಸ್ರ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್ ಪರ ಇವರ ಅಭಿಮಾನಿಗಳೂ ಕೂಡಾ ಪ್ರತಿಭಟನೆ ನಡೆಸಿದ್ದರು.
ಮಂಗಳೂರು : ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬೆಂಗಳುರು – ಮಂಗಳೂರು ನಡುವೆ ಡಿಸೆಂಬರ್ 23 ಹಾಗೂ 27 ರಂದು ವಿಶೇಷ ರೈಲು ಸಂಚರಿಸಲಿದೆ. ಮತ್ತೆ ಪುನಃ ಅದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.
ಕೆಲಸದ ನಿಮಿತ್ತ ಮಂಗಳೂರಿನ ಹಲವು ಜನ ಬೆಂಗಳೂರಿನಲ್ಲಿ ವಾಸವಿದ್ದಾರೆ. ಇದೀಗ ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿದ್ದು, ಊರಿಗೆ ಮರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಅವರಿಗೆಲ್ಲಾ ಅನುಕೂಲವಾಗಲೆಂದು ಈ ವಿಶೇಷ ರೈಲು ಸಂಚಾರವನ್ನು ಅಳವಡಿಸಿದ್ದು, ಹಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇದರ ಫಲಾನುಭವಿಗಳಾಗಲಿದ್ದಾರೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್ಸೈಟ್ಗೆ ಭೇಟಿ ನೀಡಿ. NTES ಅಪ್ಲಿಕೇಶನ್ ಬಿಳಸಿ ಅಥವಾ 139 ನಂಬರಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ವಡೆದುಕೊಳ್ಳಬಹುದು.
ಮಂಗಳೂರು/ಮೈಸೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ದರ್ಶನ್ ಸೇರಿ ಕೆಲವರು ಜೈಲಿನಿಂದ ರಿಲೀಸ್ ಆಗಿದ್ದಾರೆ. 7 ಮಂದಿ ಆರೋಪಿಗಳಿಗೆ ಸೆರೆವಾಸದಿಂದ ಮುಕ್ತಿ ಸಿಕ್ಕಿದೆ. ಇದರ ಮಧ್ಯೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ದಾಸ ಮೈಸೂರಿನಲ್ಲಿ ರಿಲ್ಯಾಕ್ಸ್ ಮೋಡ್‌ಗೆ ಜಾರಿದ್ದಾರೆ.
ದರ್ಶನ್ ಗೆ ರೆಗ್ಯುಲರ್ ಬೇಲ್ ಸಿಕ್ಕಿದ್ದರೂ ಕೂಡ ಮೈಸೂರಿಗೆ ಹೋಗಲು ಅವಕಾಶ ಇರಲಿಲ್ಲ. ಇದರಿಂದ ದರ್ಶನ್ ಗೆ ಮೈಸೂರಿನ ಫಾರ್ಮ್ ಹೌಸ್ ಕಡೆ ಹೋಗಲು ತುಡಿತ ಹೆಚ್ಚಾಗಿತ್ತು. ಇದೇ ನಿಟ್ಟಿನಲ್ಲಿ ಸೆಷನ್ಸ್ ಕೋರ್ಟ್ ಗೆ ದಾಸ ಅರ್ಜಿ ಸಲ್ಲಿಸಿದರು. ಕೋರ್ಟ್ ಕೂಡ ದರ್ಶನ್ ಗೆ ಅನುಮತಿ ನೀಡಿತ್ತು. ಡಿಸೆಂಬರ್ 20ರಿಂದ ಜನವರಿ 05ರವರೆಗೆ 2ವಾರ ಪಮಿರ್ಷನ್ ಕೊಟ್ಟಿದೆ.
ಫಾರ್ಮ್ ಹೌಸ್ ನಲ್ಲಿ ದಾಸನ ಬೆನ್ನು ನೋವು ಮಾಯಾ !
ದರ್ಶನ್ ಗೆ ಕೋರ್ಟ್ ಅನುಮತಿ ಕೊಟ್ಟ ಬೆನ್ನಲ್ಲೇ ನಿನ್ನೆ ಬೆಳಗ್ಗೆ ದರ್ಶನ್ ಮೈಸೂರಿಗೆ ಪ್ರಯಣಿಸಿದ್ದಾರೆ. ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ವಿನೀಶ್ ಕ್ಯಾಟವೇರಿ ಫಾರ್ಮ್ ಹೌಸ್ನಲ್ಲಿ ರೆಸ್ಟ್ ಮಾಡುತ್ತಿದ್ದಾರೆ. ಫಾರ್ಮ್ ಹೌಸ್ನಲ್ಲಿ ಪ್ರಾಣಿಗಳ ಜೊತೆ ಕಾಲಕಳೆಯುತ್ತ ದರ್ಶನ್ ಓಡಾಡುತ್ತಿದ್ದಾರೆ. ತೋಟದ ಕೆಲಸ ಮಾಡಿಸುತ್ತ ಬೆನ್ನುನೋವನ್ನೇ ಮರೆತಂತೆ ಕಾಣಿಸಿಕೊಂಡಿದ್ದಾರೆ.
ಇಷ್ಟುದಿನ ಜೈಲಿನಲ್ಲಿ ಬಂಧಿಯಾಗಿದ್ದ ದರ್ಶನ್ ಈಗ ರಿಲ್ಯಾಕ್ಸ್ ಆಗಿದ್ದಾರೆ. ಆದರೆ ದಾಸನಿಗೆ ಮತ್ತೆ ಶಾಕ್ ಕೊಡಲು ಪೊಲೀಸ್ ಇಲಾಖೆ ಪ್ರಕರಣವನ್ನು ಸುಪ್ರೀಂಕೋರ್ಟ್ ಗೆ ಕೊಂಡೊಯ್ಯಲು ಸಜ್ಜಾಗಿದೆ.
ಮಂಗಳೂರು/ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್, ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ (One8 Commune) & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.
ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ರೂಪದ ವಿವರಣೆ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.