Connect with us

LATEST NEWS

ಪ್ರಿಯತಮೆಯ ಕೊಂದು ಆಕೆಯ ಮೃತದೇಹವನ್ನು ಸ್ಟೇಟಸ್ ಹಾಕಿದ ಕ್ರೂರಿ..!

Published

on

ಚೆನ್ನೈ: ಪ್ರೇಮಿಯೊಬ್ಬ ತಮ್ಮ ಪ್ರಿಯತಮೆಯನ್ನೇ ಕೊಲೆ ಮಾಡಿ ಆಕೆಯ ಮೃತದೇಹವನ್ನು ಆಕೆಯದೇ ವಾಟ್ಸಪ್ ಸ್ಟೇಟಸ್ ಗೆ ಹಾಕಿರುವ ಘಟನೆ ಚೆನ್ನೈಯಲ್ಲಿ ನಡೆದಿದೆ.

ಹತ್ಯೆಯಾದ ಯುವತಿಯನ್ನು ಕೇರಳದ ಕೊಲ್ಲಂನ ಫೌಸಿಯಾ (20) ಎಂದು ಗುರುತಿಸಲಾಗಿದೆ. ಆಶಿಕ್ (20) ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಫೌಸಿಯಾನನ್ನು ಆರೋಪಿ ಆಶಿಕ್ ಕೊಲೆ ಮಾಡಿ ಆಕೆಯ ವಾಟ್ಸಪ್ ಸ್ಟೇಟಸ್ ಗೆ ಹಾಕಿದ್ದಾನೆ. ಇದನ್ನು ಗಮನಿಸಿದ ಆಕೆಯ ಸ್ನೇಹಿತರು ಪೊಲೀಸರಿಗೆ  ಮಾಹಿತಿ ನೀಡಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಪೋಲಿಸರು ತನಿಖೆ ನಡೆಸಿ ಲಾಡ್ಜ್‌ನ ಸಿಸಿಟಿವಿ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಫೌಸಿಯಾ ಕ್ರೋಮ್‍ಪೇಟೆಯ ಕಾಲೇಜೊಂದರಲ್ಲಿ ಎರಡನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದು, ನ್ಯೂ ಕಾಲೋನಿಯ ಹಾಸ್ಟೆಲ್‍ನಲ್ಲಿ ವಾಸವಾಗಿದ್ದಳು. ಫೌಸಿಯಾ ಹಾಗೂ ಆಶಿಕ್ ಐದು ವರ್ಷಗಳಿಂದ ಸಂಬಂಧ ಹೊಂದಿದ್ದು, ಇಬ್ಬರೂ ಮದುವೆಯಾಗಿದ್ದರು ಎಂದು ತಿಳಿದು ಬಂದಿದೆ. ಅಲ್ಲದೇ ಇವರಿಗೆ ಅಪ್ರಾಪ್ತ ವಯಸ್ಸಿನಲ್ಲೇ ಮಗು ಜನಿಸಿದ್ದು, ಅದರೆ ಆ ಮಗುವನ್ನು ಚಿಕ್ಕಮಗಳೂರಿನಲ್ಲಿ ದತ್ತು ನೀಡಿದ್ದರು. ಬಳಿಕ ಆಶಿಕ್ ಜೊತೆ ಬೇರೊಂದು ಮಹಿಳೆಯ ಫೋಟೋ ಇದ್ದ ವಿಚಾರವಾಗಿ ಇವರಿಬ್ಬರ ನಡುವೆ ಜಗಳ ಶುರುವಾಗಿದೆ. ಬಳಿಕ ಕೋಪಗೊಂಡ  ಆತ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆತ ತನಿಖೆಯ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

ಈ ವೇಳೆ ಕತ್ತುಹಿಸುಕಿ ಕೊಂದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಎರಡು ವರ್ಷಗಳ ಹಿಂದೆ ಫೌಸಿಯಾ ಇತರ ಮಹಿಳೆಯರೊಂದಿಗೆ ಆಶಿಕ್‍ನ ಸಂಬಂಧದ ಬಗ್ಗೆ ತಿಳಿದು ಕೇರಳ ಪೊಲೀಸರಿಗೆ ದೂರು ನೀಡಿದ್ದಳು. ಅಲ್ಲದೇ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿದ್ದಳು. ಜೈಲಿನಿಂದ ಹೊರಬಂದ ಕೂಡಲೇ ಕ್ಷಮೆಯಾಚಿಸಿ ಆಕೆಯೊಂದಿಗೆ ಮತ್ತೆ ಸಂಬಂಧ ಬೆಳೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

LATEST NEWS

ಮಂಗಳೂರು : ಕಾಂಗ್ರೆಸ್ ಭಯೋತ್ಪಾದಕರ ಪರವಾಗಿರೋ ಪಕ್ಷ : ನಳಿನ್ ಕುಮಾರ್ ಕಟೀಲ್ ಆಕ್ರೋಶ

Published

on

ಮಂಗಳೂರು : ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಘೋಷಣೆ ಹಾಕೋದು ಕಂಡು ಬಂದಿದೆಯಾದ್ರೂ ಘೋಷಣೆ ಹಾಕಿದವರ ಬಂಧನ ಆಗುವುದು ಕಾಣುತ್ತಿಲ್ಲ. ರಾಜ್ಯದ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಎರಡೂ ಕೂಡಾ ಈ ವಿಚಾರಕ್ಕೆ ವಿರೋಧ ಕೂಡಾ ವ್ಯಕ್ತಪಡಿಸಿಲ್ಲ. ಇದರಿಂದ ಕಾಂಗ್ರೆಸ್‌ ಮಾನಸಿಕತೆ ಹಾಗೂ ತುಷ್ಠೀಕರಣಕ್ಕಾಗಿ ದೇಶದ್ರೋಹಿಗಳಿಗೂ ಬೆಂಬಲ ನೀಡುತ್ತದೆ ಎನ್ನುವುದು ಸಾಬೀತಾಗಿದೆ. ಕಾಂಗ್ರೆಸ್ ಭಯೋತ್ಪಾದಕರ ಪರವಾಗಿ ಇದೆ ಅನ್ನೋದು ಈ ಹಿಂದೆಯೂ ಸಾಬೀತಾಗಿದ್ದು, ಕಳೆದ ಬಾರಿ ಗೆದ್ದಾಗ ವಿಜಯೋತ್ಸವದಲ್ಲಿ ಬೆಳಗಾವಿ ಉತ್ತರ ಕನ್ನಡದಲ್ಲಿ ಪಾಕಿಸ್ತಾನ ಧ್ವಜ ಬಳಕೆ ಮಾಡಿದ್ದರು. ಅವರನ್ನೂ ಬಂಧಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನಿಷ್ಟ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಆದ್ರೂ ಇದನ್ನು ಖಂಡಿಸ ಬೇಕಿತ್ತಾದ್ರೂ ಅವರೂ ಮೌನವಾಗಿದ್ದಾರೆ. ಅವರೂ ಪಾಕಿಸ್ತಾನ ಪರ ಇದ್ದಾರೆ ಅನ್ನೋದು ಸ್ಪಷ್ಟವಾಗಿದೆ. ಹೀಗಾಗಿ ತಕ್ಷಣ ಅವರನ್ನು ರಾಜ್ಯಸಭಾ ಸದಸ್ಯ ಸ್ಥಾನದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ. ಪಾಕ್ ಪರ ಘೋಷಣೆಯ ವಿಚಾರ ಬಿಜೆಪಿ ಜೆಡಿಎಸ್ ಮಾಡಿಲ್ಲ. ಮಾಧ್ಯಮಗಳು ವರದಿ ಮಾಡಿದ್ದನ್ನೂ ನಾವು ಗಮನಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಮಾಧ್ಯಮದ ಮೇಲೆ ಸರ್ಕಾರಕ್ಕೆ ನಂಬಿಕೆ ಇಲ್ಲವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

Continue Reading

DAKSHINA KANNADA

ಮಂಗಳೂರು ಮೇಯರ್ ಫೋನ್‌ ಇನ್ ಕಾರ್ಯಕ್ರಮ; ಬಿಲ್‌ಗಳನ್ನು ಆನ್‌ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಜಾರಿ

Published

on

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಜನರ ಸಮಸ್ಯೆ ಆಲಿಸಲು ಮೇಯರ್ ಇಂದು ಫೋನ್‌ ಇನ್ ಕಾರ್ಯಕ್ರಮ ನಡೆಸಿದ್ದಾರೆ. ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು ಅವರು ಪ್ರತಿ ತಿಂಗಳು ಈ ಫೋನ್ ಇನ್ ಕಾರ್ಯಕ್ರಮ ನಡೆಸಿ ಜನಸ್ನೇಹಿ ಆಡಳಿತ ನೀಡಲು ಪ್ರಯತ್ನಿಸಿದ್ದಾರೆ. ಫೋನ್ ಮೂಲಕ ಬರುವ ದೂರುಗಳನ್ನು ಸ್ವೀಕರಿಸಿ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಸಮಸ್ಯೆಯನ್ನು ತಕ್ಷಣ ಬಗೆ ಹರಿಸಲು ಇದರಿಂದ ಸಾಧ್ಯವಾಗಿದೆ. ಕಳೆದ ತಿಂಗಳು ನಡೆದಿದ್ದ ಫೋನ್‌ ಇನ್ ಕಾರ್ಯಕ್ರಮದಲ್ಲಿ ಸುಮಾರು 27 ದೂರುಗಳಲ್ಲಿ 24 ದೂರುಗಳನ್ನು ತಕ್ಷಣ ಬಗೆ ಹರಿಸಿದ್ದಾರೆ. ಈ ಬಾರಿಯೂ ಕೂಡಾ ಸುಮಾರು 26 ಕರೆಗಳು ಬಂದಿದ್ದು ಬಹುತೇಕ ಕರೆಗಳು ನಗರದ ಸ್ವಚ್ಚತೆ , ಸ್ವಯಂ ಘೋಷಿತ ಆಸ್ತಿ ತೆರಿಗೆ , ಹಾಗೂ ಲೈಸೆನ್ಸ್‌ ವಿಚಾರವಾಗಿತ್ತು.

ನಗರದ ಪಂಪ್‌ವೆಲ್‌ನ ಮಹಾವೀರ ವೃತ್ತವನ್ನು ಸುಂದರವಾಗಿಸಿದ್ರೂ ಅಲ್ಲಿ ಅಲೆಮಾರಿ ಕುಟುಂಬಗಳು ನಗರ ಸೌಂದರ್ಯ ಕೆಡಿಸಿರುವ ಬಗ್ಗೆ ದೂರು ಬಂದಿದೆ. ಅವರನ್ನು ಪೊಲೀಸರ ಸಹಾಯದಿಂದ ತೆರವು ಗೊಳಿಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.

ಅಲ್ಲದೇ, ಆಸ್ತಿ ತೆರಿಗೆ ವಿಚಾರದಲ್ಲಿ ಜನರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಎಲ್ಲಾ ಬಿಲ್‌ಗಳನ್ನು ಆನ್‌ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ನಾಳೆ ನಡೆಯುವ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಮೇಯರ್ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಜನಸ್ನೇಹಿ ಆಡಳಿತ ನೀಡಲು ಪೋನ್ ಇನ್ ಕಾರ್ಯಕ್ರಮ ಸಹಕಾರಿಯಾಗಿದ್ದು, ಜನರು ಸಮಸ್ಯೆಗಳನ್ನು ಗಮನಕ್ಕೆ ತಂದಾಗ ತಕ್ಷಣ ಕ್ರಮ ಕೈಗೊಳ್ಳಲು ಸಹಕಾರಿ ಆಗುತ್ತದೆ ಎಂದು ಅವರು ಹೇಳಿದ್ದಾರೆ.

Continue Reading

bangalore

ವಿಧಾನ ಪರಿಷತ್ ನಲ್ಲಿ ಕೋಲಾಹಲ..ಕೈ ಕೈ ಮಿಲಾಯಿಸೋ ಹಂತಕ್ಕೆ ಹೋದ ನಾಯಕರು

Published

on

ಬೆಂಗಳೂರು : ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ವಿಧಾನ ಪರಿಷತ್ ಕಲಾಪದಲ್ಲೂ ಭಾರೀ ಕೋಲಾಹಲ ಹುಟ್ಟು ಹಾಕಿತು.


ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ವಿಷಯ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದರು. ಪಾಕಿಸ್ತಾನ ಪರ ಘೋಷಣೆ ಹಾಕಿರುವ ವಿಚಾರಕ್ಕೆ ಕಿಡಿಕಾರಿದ ಪರಿಷತ್​ ಸದಸ್ಯ ಎನ್​ ರವಿಕುಮಾರ್ ​​ ಇದು “ದೇಶದ್ರೋಹಿ ಸರ್ಕಾರ” ಎಂದರು. ಇದರಿಂದ ಕೆರಳಿದ ಕಾಂಗ್ರೆಸ್​​​ ಸದಸ್ಯ ಅಬ್ದುಲ್ ಜಬ್ಬಾರ್ “ಅವನ ಬಾಯಿ ಬಂದ್ ಮಾಡಿ” ಎಂದು ರವಿಕುಮಾರ್​ ಅವರನ್ನು ಏಕವಚನದಲ್ಲೇ ಉಲ್ಲೇಖಿಸಿದ್ದು, ಪರಿಷತ್ ನಲ್ಲಿ ಕೋಲಾಹಲ ಎಬ್ಬಿಸಿತು. ಅಬ್ದುಲ್ ಜಬ್ಬಾರ್ ಮಾತಿಗೆ ರೊಚ್ಚಿಗೆದ್ದ ಬಿಜೆಪಿ ಸದಸ್ಯರು ಏಕವಚನದಲ್ಲಿ ಮಾತಾಡಿದರೆ ಸರಿ ಇರಲ್ಲವೆಂದರು. ಬಳಿಕ ರವಿಕುಮಾರ್ ಎದ್ದು ಅಬ್ದುಲ್​ ಜಬ್ಬರ್​ ಬಳಿ ಹೋದರು. ರವಿಕುಮಾರ್ ಜೊತೆ ತುಳಸಿ ಮುನಿರಾಜುಗೌಡ ಮುನ್ನುಗ್ಗಿ ಹೋದರು. ಎರಡೂ ಕಡೆಯ ಸದಸ್ಯರು ಸಭಾಪತಿಗಳ ಮುಂದೆಯೇ ಕೈಕೈ ಮಿಲಾಯಿಸಲು ಮುಂದಾದರು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಮಾರ್ಷಲ್‌ಗಳು ಹರಸಾಹಸಪಟ್ಟರು. ಮಧ್ಯ ಪ್ರವೇಶಿಸಿದ ಸಚಿವ ಹೆಚ್‌.ಕೆ.ಪಾಟೀಲ್‌ ಎರಡೂ ಕಡೆಯವರನ್ನು ಸಮಾಧಾನಪಡಿಸಿ ಕ್ಷಮೆ ಕೇಳುವಂತೆ ಸಲಹೆ ನೀಡಿದರು. ಇದಕ್ಕೆ ಎನ್​. ರವಿಕುಮಾರ್​ ದೇಶದ ಪರವಾಗಿ ಮಾತನಾಡಿದ್ದೇನೆ, ಅದು ಕ್ಷಮೆ ಕೇಳುವ ವಿಷಯವಾ ಎಂದರು. ಇತ್ತ ಅಬ್ದುಲ್ ಜಬ್ಬಾರ್ ನಿಮ್ಮ ಮೂಲಕ ನಾನು ಆಡಿದ ಮಾತು ವಾಪಸ್ ಪಡೆಯುತ್ತೇನೆ ಎಂದರು.

Continue Reading

LATEST NEWS

Trending