Tuesday, January 26, 2021

ಕ್ರೂಜರ್-ಕಾರು ಮುಖಾಮುಖಿ ಡಿಕ್ಕಿ ನಾಲ್ವರು ಸ್ಥಳದಲ್ಲೇ ದುರ್ಮರಣ..!

ಕ್ರೂಜರ್-ಕಾರು ಮುಖಾಮುಖಿ ಡಿಕ್ಕಿ ನಾಲ್ವರು ಸ್ಥಳದಲ್ಲೇ ದುರ್ಮರಣ 

ಹುಬ್ಬಳ್ಳಿ : ಕ್ರೂಜರ್ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಗದಗ-ಹುಬ್ಬಳ್ಳಿ ರಸ್ತೆಯ ಕೊಂಡಿಕೊಪ್ಪ ಕ್ರಾಸ್ ಬಳಿ ಇಂದು ಸಂಭವಿಸಿದೆ.ರಾಯಚೂರು ಜಿಲ್ಲೆಯ ಮಾನ್ವಿಯ ವಿಠ್ಠಲ ನಗರದ ನಿವಾಸಿಗಳಾದ ಸಣ್ಣ ಗಂಗಣ್ಣ, ನಾಗಮ್ಮ, ಹನುಮಂತು ಮತ್ತು ಈರಣ್ಣ ಮೃತ ದುರ್ದೈವಿಗಳು.

ಮಾನ್ವಿಯಿಂದ ಕಾರವಾರದ ಹಲಗಾ ಗ್ರಾಮಕ್ಕೆ ಪಾರ್ಶ್ವ ವಾಯು  ಚಿಕಿತ್ಸೆಗೆಂದು ಹೊರಟಿದ್ದರು. ಅಣ್ಣಿಗೇರಿ ಪಟ್ಟಣದ ಬಳಿಯ ಕೊಂಡಿಕೊಪ್ಪ ಕ್ರಾಸ್ ಬಳಿ ಕ್ರೂಜರ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಘಟನೆಗೆ ಕ್ರೂಜರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.

ಅಪಘಾತದಲ್ಲಿ ಸಣ್ಣೀರಣ್ಣ ಮತ್ತು ಲಕ್ಷ್ಮೀ ಗಾಯಗೊಂಡಿದ್ದಾರೆ. ಕ್ರೂಜರ್‍ನ ಚಾಲಕ ಮಲ್ಲಪ್ಪ ಗಿಡ್ಡನ್ನವರ್ ತೀವ್ರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.