BELTHANGADY
ಬೆಳ್ತಂಗಡಿಯಲ್ಲಿ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ಸ್ಪರ್ಶ : ಓರ್ವ ಸಾವು – ಮತ್ತೊರ್ವ ಗಂಭೀರ ಗಾಯ..!
ಬೆಳ್ತಂಗಡಿ : ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ಸ್ಪರ್ಶವಾಗಿ ಓರ್ವ ಸಾವನ್ನಪ್ಪಿ ಮತ್ತೊರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಂಭವಿಸಿದೆ.
ಕಾರ್ಮಿಕ ಸಂಘದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಕಟ್ಟುತ್ತಿದ್ದ ಈ ದುರ್ಘಟನೆ ಸಂಭವಿಸಿದೆ.
ಈ ಸಂದರ್ಭ ಇಬ್ಬರಿಗೆ ವಿದ್ಯುತ್ ತಂತಿ ಸ್ವರ್ಶಿಸಿ ಗಂಭೀರ ಗಾಯಗೊಂಡಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದರಲ್ಲಿ ಓರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಬೆಳ್ತಂಗಡಿ ಕೋರ್ಟ್ ನಿವಾಸಿ ವ್ಯಾಸರಾಯ ಅಚಾರ್ಯ ಅವರ ಪುತ್ರ ಗೂಡ್ಸ್ ವಾಹನ ಚಾಲಕ ಪ್ರಶಾಂತ್ ಅಚಾರ್ಯ (32) ಸಾವನ್ನಪ್ಪಿದವರು .
ಬೆಳ್ತಂಗಡಿ ತಾಲೂಕು ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಸಂಜೀವ ಅಚಾರ್ಯ ಅವರ ಮಗನಾದ ಸತೀಶ್(25) ಗಂಭೀರ ಗಾಯಗಾಯಗೊಂಡಿದ್ದಾರೆ.
ಖಾಸಗಿ ಪ್ರಿಂಟರ್ಸ್ ಗೆ ಕಾರ್ಯಕ್ರಮದ ಬ್ಯಾನರ್ ಹಾಕಲು ಸಂಘದವರು ಕಾಂಟ್ರಕ್ಟ್ ನೀಡಿದ್ದು ಅದರಂತೆ ಗೂಡ್ಸ್ ಆಟೋದಲ್ಲಿ ಬ್ಯಾನರ್ ತಂದು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಮಂಗಳವಾರ ಸಂಜೆ ಅಳವಡಿಸುತ್ತಿದ್ದರು.
ಸಂಜೆ 7 ಗಂಟೆ ಸುಮಾರಿಗೆ ಬ್ಯಾನರ್ ನ ಕಬ್ಬಿಣ ರಾಡ್ ವಿದ್ಯುತ್ ಲೈನ್ ನ ತಂತಿಗೆ ತಾಗಿದ್ದು ಈ ವೇಳೆ ಕೆಲಸದ ಇಬ್ಬರು ಯುವಕರಿಗೆ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ.
ಸ್ಥಳೀಯರ ಸಹಕಾರದಲ್ಲಿ ಇಬ್ಬರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ ಓರ್ವ ಸಾವನ್ನಪ್ಪಿದ್ದು ಇನ್ನೊಬ್ಬ ಗಂಭೀರ ಸ್ಥಿತಿಯಲ್ಲಿದ್ದಾನೆ.
ಘಟನೆ ಮಾಹಿತಿ ಪಡೆದು ಸಾವಿರಾರು ಮಂದಿ ಜಮಾಯಿಸಿದ್ದರು.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ದುರ್ಘಟನೆಯ ಮಾಹಿತಿ ಪಡೆದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಕೂಡಲೇ ಆಸ್ಪತ್ರೆಗೆ ಧಾವಿಸಿ ಬಂದಿದ್ದು ವೈದ್ಯರರೊಂದಿಗೆ ಮಾತುಕತೆ ನಡೆಸಿದ್ದಾರೆ. ಜೊತೆಗೆ ಮೃತರ ಮತ್ತು ಗಾಯಾಳುವಿನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BELTHANGADY
ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ
ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.
ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!
ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.
- FILM6 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ