Thursday, February 9, 2023

ಪುತ್ತೂರು: ಬಸ್ ನಿಲ್ದಾಣದ ಬಳಿ ಡಾ. M.K ಪ್ರಸಾದ್ ಹೆಸರಿನಲ್ಲಿ ಕಟೌಟ್: ‘ಲವ್ ಜಿಹಾದ್’ಗೆ ಬಲಿಯಾಗದಂತೆ ಎಚ್ಚರಿಕೆ ಸಂದೇಶ..!!

ಇತ್ತೀಚೆಗಷ್ಟೇ ದೆಹಲಿಯಲ್ಲಿ ನಡೆದ ಶ್ರದ್ಧಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇದೊಂದು ಲವ್ ಜಿಹಾದ್ ಎಂದು ಕೂಡಾ ಹೇಳಲಾಗುತ್ತಿದೆ. ಈ ಕಾರಣಕ್ಕೆ ಹಿಂದೂ ಹುಡುಗಿಯರು ಜಾಗೃತರಾಗಬೇಕೆನ್ನುವ ಉದ್ದೇಶದಲ್ಲಿ ಪುತ್ತೂರಿನ ವ್ಯಕ್ತಿಯೋರ್ವರು ಹಾಕಿರುವ ಬ್ಯಾನರ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಪುತ್ತೂರು:  ಡಾ.ಎಂ.ಕೆ. ಪ್ರಸಾದ್ ರವರ ಹೆಸರಿನಲ್ಲಿ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಅರಣ್ಯ ಇಲಾಖೆಯ ಕಛೇರಿಯ ಬಳಿ ಕಟೌಟ್ ವೊಂದನ್ನು ಹಾಕಲಾಗಿದೆ.

“ಹಿಂದೂ ಯುವತಿ ಶ್ರದ್ದಾಳ ಹತ್ಯೆ, ದೇಹವನ್ನು 35 ತುಂಡು ಮಾಡಿದರು ಕಾರಣ ‘ಲವ್ ಜಿಹಾದ್’ ನೀವು ಇದಕ್ಕೆ ಬಲಿಯಾಗಬೇಡಿ” ಎಂದು ಆ ಕಟೌಟ್ ನಲ್ಲಿ ಬರೆಯಲಾಗಿದ್ದು, ಕೆಳಗೆ ಡಾ.ಎಂ.ಕೆ. ಪ್ರಸಾದ್ ಪುತ್ತೂರು ಎಂದು ಬರೆದು ಕಟೌಟ್ ಅಳವಡಿಸಲಾಗಿದೆ.

‘ಲವ್ ಜಿಹಾದ್’ ಗೆ ಬಲಿಯಾಗುತ್ತಿರುವ ಹಿಂದೂ ಹೆಣ್ಣು ಮಕ್ಕಳನ್ನು ಜಾಗ್ರತರಾಗುವಂತೆ ಮಾಡಲು ಕಟೌಟ್ ಅನ್ನು ಅಳವಡಿಸಲಾಗಿದೆ ಎನ್ನಲಾಗುತ್ತಿದೆ..

ಈ ಬ್ಯಾನರ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

 

LEAVE A REPLY

Please enter your comment!
Please enter your name here

Hot Topics

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...