Connect with us

LATEST NEWS

ಜೂಜಾಟ ಡ್ರಗ್ಸ್ ಪ್ರಕರಣಗಳಿಗೆ ಕಡಿವಾಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಸಚಿವ ಬಸವರಾಜ್ ಬೊಮ್ಮಾಯಿ 

Published

on

ಜೂಜಾಟ ಡ್ರಗ್ಸ್ ಪ್ರಕರಣಗಳಿಗೆ ಕಡಿವಾಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಸಚಿವ ಬಸವರಾಜ್ ಬೊಮ್ಮಾಯಿ..!

ಬೆಂಗಳೂರು,ಡಿ.8- ರಾಜ್ಯದಲ್ಲಿ ಹೆಚ್ಚುತ್ತಿರುವ ಜೂಜಾಟ ಮತ್ತು ಡ್ರಗ್ಸ್ ಪ್ರಕರಣಗಳಿಗೆ ಕಡಿವಾಣ ಹಾಕಿ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಜರುಗಿಸುವ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಮ್ಮ ಸರ್ಕಾರ ಡ್ರಗ್ ಮಾಫಿಯಾ ವಿರುದ್ಧ ಸಮರ ಸಾರಿದ್ದು, ಅನೇಕ ಒತ್ತಡಗಳು ನಮ್ಮ ಮೇಲೆ ಬಂದಿವೆ. ಆದರೆ ನಾವು ಯಾವುದೇ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ.

ಈ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಹಾಲಿ ಇರುವ ಕಾನೂನಿಗೆ ತಿದ್ದುಪಡಿ ಮಾಡಲಾಗುವುದು ಎಂದು ಹೇಳಿದರು.

ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಈಶ್ವರ್ ಖಂಡ್ರೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಜೂಜಾಟ ಒಂದು ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ಕಡಿವಾಣ ಹಾಕಲೇಬೇಕಾದ ಅಗತ್ಯವಿದೆ. ಹಿಂದಿನ ಸರ್ಕಾರಗಳಿಗಿಂತಲೂ ನಮ್ಮ ಸರ್ಕಾರ ಬಿಗಿಯಾದ ಕ್ರಮ ತೆಗೆದುಕೊಂಡಿದೆ.

ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ಮಾಡುವ ಸಂಬಂಧ ಈಗಾಗಲೇ ರಾಷ್ಟ್ರೀಯ ಕಾನೂನು ಕಾಲೇಜಿನ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಕಾನೂನು ರಾಜ್ಯದಲ್ಲಿ ಜಾರಿಯಾಗಲಿದೆ. ಇದು ಕೇವಲ ಕಾನೂನಿನಿಂದ ಮಾತ್ರ ತಡೆಯಲು ಸಾಧ್ಯವಿಲ್ಲ. ಜನರಲ್ಲೂ ಜಾಗೃತಿ ಬರಬೇಕೆಂದು ಮನವಿ ಮಾಡಿದರು.

ಡ್ರಗ್ಸ್ ಪ್ರಕರಣಗಳನ್ನು ಬೇರುಮಟ್ಟದಿಂದ ಕಿತ್ತುಹಾಕುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಬಿಗಿಯಾದ ಕಾನೂನು ತರಲು ಮಾತುಕತೆ ನಡೆಸಲಾಗಿದೆ. ಸರ್ಕಾರ ತೆಗೆದುಕೊಂಡಿರುವ ಕಾನೂನು ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಗುಡುಗಿದರು.

ಎನ್‍ಡಿಪಿಎಸ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಅಧಿಕಾರ ನಮಗಿಲ್ಲ. ಅದು ಸಂಸತ್‍ನಲ್ಲಿ ತಿದ್ದುಪಡಿ ಮಾಡಬೇಕು. ಈ ಕಾಯ್ದೆಯಡಿ ಕ್ರಮ ಜರುಗಿಸಲು ನಮಗೆ ಅವಕಾಶವಿದೆ ಎಂದರು.

ಎನ್‍ಡಿಪಿಎಸ್ ಕಾಯ್ದೆಯಡಿ 2017ರಲ್ಲಿ 1126 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 1095 ಪ್ರಕರಣಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿದ್ದು, 197 ಪ್ರಕರಣಗಳಿಗೆ ಶಿಕ್ಷೆಯಾಗಿದೆ. 2018ರಲ್ಲಿ 1031 ಪ್ರಕರಣಗಳು ದಾಖಲಾಗಿದ್ದರೆ, 951 ಪ್ರಕರಣಗಳ ವಿರುದ್ಧ ಚಾರ್ಜ್‍ಶೀಟ್ ದಾಖಲಾಗಿ 167 ಮಂದಿಗೆ ಶಿಕ್ಷೆಯಾಗಿದೆ.

2019ರಲ್ಲಿ 1161 ಪ್ರಕರಣಗಳ ಪೈಕಿ 1374 ಪ್ರಕರಣಗಳಿಗೆ ಚಾರ್ಜ್‍ಶೀಟಾಗಿದ್ದು, 256 ಪ್ರಕರಣಗಳಿಗೆ ಶಿಕ್ಷೆಯಾಗಿದೆ. 2020ರಲ್ಲಿ 3852 ಪ್ರಕರಣಗಳಲ್ಲಿ 2285 ಚಾರ್ಜ್‍ಶೀಟ್, 233 ಪ್ರಕರಣಗಳಿಗೆ ಶಿಕ್ಷೆಯಾಗಿವೆ. ಈವರೆಗೆ ಬೆಂಗಳೂರಿನಲ್ಲಿ ಮಾತ್ರ ಎಫ್‍ಎಸ್‍ಎಲ್ ಮಾತ್ರ ಇತ್ತು.

ಇಲ್ಲಿ ವರದಿ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಇದಕ್ಕಾಗಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗಿದೆ. ಡ್ರಗ್ಸ್ ಪ್ರಕರಣಗಳ ತನಿಖೆಯನ್ನು ತೀವ್ರಗೊಳಿಸಲು ನಾರ್ಕೋಟಿಕ್ ಲ್ಯಾಬ್‍ಗಳನ್ನು ಹೆಚ್ಚಳ ಮಾಡಲಾಗುವುದು. ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳಿ-ಧಾರವಾಡ ಅವಳಿ ನಗರಗಳಲ್ಲಿ ಲ್ಯಾಬ್ ತೆರೆಯಲಾಗುವುದು ಎಂದರು.

ಎನ್‍ಡಿಪಿಎಸ್ ಕಾಯ್ದೆಯಡಿ ಕೆಲವರನ್ನು ಬಂಧಿಸಿರುವ ಪರಿಣಾಮ ಈವರೆಗೂ ಯಾವುದೇ ನ್ಯಾಯಾಲಯದಿಂದ ಜಾಮೀನು ಸಿಕ್ಕಿಲ್ಲ. ಎನ್‍ಡಿಪಿಎಸ್ ಕಾಯ್ದೆಯಡಿ ಬಂಧಿಸಿದರೆ ಒಂದು ವರ್ಷ ಅವರಿಗೆ ಯಾವುದೇ ನ್ಯಾಯಾಲಯದಿಂದ ಜಾಮೀನು ಸಿಗುವುದಿಲ್ಲ.

ನಮ್ಮ ಮೇಲೆ ಅನೇಕ ಕಡೆ ಒತ್ತಡಗಳು ಬಂದರೂ ನಾವು ಯಾರ ಮೇಲೂ ಕರುಣೆ ತೋರದೆ ನಿರ್ದಾಕ್ಷಿಣ್ಯವಾಗಿ ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೊ ಅದನ್ನು ತೆಗೆದುಕೊಂಡಿದ್ದೇವೆ. ಸರ್ಕಾರ ಈ ಪಿಡುಗಿನ ವಿರುದ್ಧ ಸಮರವನ್ನೇ ಸಾರಿದ್ದು, ಇದರಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.

ಕಲಬುರಗಿ, ಬೀದರ್ ಸೇರಿದಂತೆ ಗಡಿ ಭಾಗಗಳಲ್ಲಿ ರಿಕ್ರಿಯೇಷನ್ ಕ್ಲಬ್‍ಗಳು ಕಾನೂನು ಬಾಹಿರವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಇದನ್ನು ಮುಚ್ಚಲು ಸಂಬಂಧಪಟ್ಟ ಅಕಾರಿಗಳಿಗೆ ಸೂಚನೆ ಕೊಡಲಾಗಿದೆ. ಇನ್ನು ಕೆಲವು ಕಡೆ ಸಿಂಥೆಟಿಕ್ ಡ್ರಗ್ ಕೂಡ ಸಿಗುತ್ತಿದೆ. ಶಾಲಾಕಾಲೇಜುಗಳ ಬಳಿ ಇದರ ಬಳಕೆ ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಈಗಾಗಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದರು.

ಮೈಸೂರು, ಬೆಂಗಳೂರು ಸೇರಿದಂತೆ ಹಲವು ಕಡೆ ಹುಕ್ಕಾ ಬಾರ್‍ಗಳು ಕೂಡ ತಲೆ ಎತ್ತಿರುವುದು ಗಮನಕ್ಕೆ ಬಂದಿದೆ. ಇವುಗಳ ಮೇಲೆ ನಿಗಾವಹಿಸುವಂತೆ ಅಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮುಂದಿನ ಪೀಳಿಗೆ ಸಮೂಹ ಶಾಪ ಹಾಕದಂತೆ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

ವೀಸಾ ಅವಧಿ  ಮುಗಿದು ಕಾನೂನು ಬಾಹಿರವಾಗಿ ಇದ್ದರೆ ಅಂಥವರ ಮೇಲೂ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ನೈಜೀರಿಯಾ ಸೇರಿದಂತೆ ಬೇರೆ ಬೇರೆ ದೇಶಗಳ ಪ್ರಜೆಗಳು ರಾಜ್ಯದಲ್ಲಿ ಕಾನೂನು ಬಾಹಿರವಾಗಿ ತಳವೂರಿದ್ದರು. ಅಂಥವರನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿದ್ದೇವೆ ಎಂದರು. ಇದಕ್ಕೂ ಮುನ್ನಾ ಸದಸ್ಯರಾದ ಈಶ್ವರ್ ಖಂಡ್ರೆ, ನಾಗೇಂದ್ರ, ಪ್ರಿಯಾಂಕ ಖರ್ಗೆ ಸೇರಿದಂತೆ ಮತ್ತಿತರರು ಮಾತನಾಡಿ, ಡ್ರಗ್ಸ್ ಮಾಫಿಯಾವನ್ನು ಬೇರು ಮಟ್ಟದಿಂದ ಕಿತ್ತುಹಾಕಬೇಕೆಂದು ಆಗ್ರಹಿಸಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾರರ ಚೀಟಿಯಲ್ಲಿ ಕ್ಯೂಆರ್‌ ಕೋಡ್! ಮಂಗಳೂರು ದಕ್ಷಿಣ ಉತ್ತರದಲ್ಲಿ ಅನುಷ್ಠಾನ

Published

on

ಮಂಗಳೂರು: ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣ ಆಯೋಗ ಕೊನೇ ಹಂತದ ಕಸರತ್ತು ಮುಂದುವರಿಸಿದೆ. ನಗರದ ಜನತೆಗೆ ಮತಗಟ್ಟೆಗಳ ಮಾಹಿತಿ ನೀಡಲು ಚುನಾವಣೆ ಸ್ಲಿಪ್‌ಗಳಲ್ಲಿ ಕ್ಯೂಆರ್ ಓಡ್ ನೀಡಲಾಗಿದ್ದು, ಆ ಮೂಲಕ ಮತದಾನ ಕೇಂದ್ರದ ಮಾಹಿತಿ ನೀಡಲು ಮುಂದಾಗಿದೆ.

ಕರ್ನಾಟಕದಲ್ಲಿ ಇದು ಮೊದಲ ಪ್ರಯೋಗವಾಗಿದ್ದು, ದ.ಕ. ಜಿಲ್ಲೆಯ ನಗರಕ್ಕೆ ಹೊಂದಿಕೊಂಡಿರುವ ಎರಡು ಕ್ಷೇತ್ರಗಳಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ಇದರಂತೆ ಮಂಗಳೂರು ದಕ್ಷಿಣ ಹಾಗೂ ಉತ್ತರ ಕ್ಷೇತ್ರದಲ್ಲಿ ಸ್ಲಿಪ್ ಮೂಲಕ ಮತದಾರರಿಗೆ ಮತಗಟ್ಟೆಯ ವಿವರ ಒದಗಿಸಲಾಗುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆಯಾಗುವ ನಿರೀಕ್ಷೆ ಹೊಂದಲಾಗಿದೆ.

ಮತದಾರರ ಸ್ಲಿಪ್‌ನಲ್ಲಿ ಮತಗಟ್ಟೆಯ ವಿವರ ನಗರದಲ್ಲಿನ ಅನೇಕರಿಗೆ ಮತಗಟ್ಟೆಯ ಬಗ್ಗೆ ಮಾಹಿತಿ ಇರುವುದಿಲ್ಲ. ಮತದಾನಕ್ಕಾಗಿ ಮತಗಟ್ಟೆಗಳನ್ನು ಅರಸಿಕೊಂಡು ಹೋಗಬೇಕಾಗುತ್ತದೆ. ಇದನ್ನು ನೀಗಿಸಲು ಕ್ಯೂಆರ್ ಕೋಡ್ ನೀಡಲಾಗಿದ್ದು, ಸ್ಕ್ಯಾನ್ ಮಾಡಿದ ವೇಳೆ ಮಯಗಟ್ಟೆಯ ಲೊಕೇಷನ್ ಪಡೆಯಬಹುದು. ಈ ಮೂಲಕ ಮತಗಟ್ಟೆ ಹುಡುಕಿ ತೆರಳುವುದನ್ನು ತಪ್ಪಿಸಲು ಸಾಧ್ಯವಾಗಲಿದೆ.

Continue Reading

DAKSHINA KANNADA

ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..

Published

on

ಉಡುಪಿ: ಬಡಗುತಿಟ್ಟು ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67ವ) ಇಹಲೋಕ ತ್ಯಜಿಸಿದ್ದಾರೆ. ಅಲ್ಪಕಾಲದಿಂದ ಅಸೌಖ್ಯದಿಂದಿದ್ದ ಇವರು ಬೆಂಗಳೂರಿನಲ್ಲಿರುವ ಪುತ್ರನ  ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಮನೆಯಲ್ಲಿ ಇಂದು(ಎ.25) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ ಕೀರ್ತಿ ಅವರದ್ದಾಗಿತ್ತು.

bharadeshwara

ಭಾಗವತಿಕೆಯಲ್ಲಿ ಗಾನ ಕೋಗಿಲೆ ಎನಿಸಿಕೊಂಡ ಧಾರೇಶ್ವರ:

ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳದಲ್ಲಿ ನಿವೃತ್ತಿ ಹೊಂದಿದ್ದರು. ಆರಂಭದಲ್ಲಿ ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಭಾಗವತರಾಗಿ ಪ್ರಖ್ಯಾತಿಗೊಂಡಿದ್ದರು. ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ  ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು.

ಮುಂದೆ ಓದಿ..; ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು. ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗ, ಯಕ್ಷ ಅಭಿಮಾನಿಗಳನ್ನು ಅಗಲಿದ್ದಾರೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Continue Reading

DAKSHINA KANNADA

ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್‌ಗೆ ಗಡಿಪಾರು..!

Published

on

ಪುತ್ತೂರು:  ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್‌ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್‌ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

akshaya rajaputh

ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

ಅಕ್ಷಯ್‌ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.

Continue Reading

LATEST NEWS

Trending