Connect with us

    DAKSHINA KANNADA

    ವಿದೇಶದಲ್ಲಿ ಉದ್ಯೋಗ ಬಯಸುವವರೇ ಎಚ್ಚರ.! ಕಾಂಬೋಡಿಯಾದಲ್ಲಿ ಸೈಬರ್‌ ವಂಚನೆಗೆ ಬಲಿಯಾಗಿದ್ದ ದ.ಕ. ಜಿಲ್ಲೆಯ ಮೂವರ ರಕ್ಷಣೆ

    Published

    on

    ಮಂಗಳೂರು: ಸಾಫ್ಟ್ ವೇರ್‌ ಕಂಪೆನಿಗಳಲ್ಲಿ ಉದ್ಯೋಗಕ್ಕೆಂದು ಕಾಂಬೋಡಿಯಾ ದೇಶಕ್ಕೆ ತೆರಳಿ ಅಲ್ಲಿ ಸೈಬರ್‌ ವಂಚಕರ ಜಾಲದಲ್ಲಿ ಸಿಲುಕಿದ್ದ ಭಾರತದ ಸುಮಾರು 250 ಮಂದಿಯನ್ನು ವಿದೇಶಾಂಗ ಇಲಾಖೆ ಪತ್ತೆ ಹಚ್ಚಿ ರಕ್ಷಣೆ ಮಾಡಿದೆ. ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದ್ದಾರೆ ಎಂದು ತಿಳಿದುಬಂದಿದೆ.

    ಈ ಮೂವರು ಕೆಲ ತಿಂಗಳುಗಳಹಿಂದೆ ಆಂಧ್ರಪ್ರದೇಶದ ಏಜೆಂಟ್‌ ಓರ್ವನ ಮೂಲಕ ಕಾಂಬೋ ಡಿಯಾಕ್ಕೆ ತೆರಳಿದ್ದರು. ಅಲ್ಲಿ ಐಟಿ ಕಂಪೆನಿಯ ಉದ್ಯೋಗದ ನೆಪದಲ್ಲಿ ಅವರನ್ನು ಸೈಬರ್‌ ವಂಚಕರ ಬಳಿ ಉದ್ಯೋಗಕ್ಕೆ ನಿಯೋಜಿಸಲಾಗಿತ್ತು. ಅಲ್ಲಿ ಅವರಿಂದ ಫೇಸ್‌ಬುಕ್‌, ವಾಟ್ಸಾಪ್‌, ಇನ್‌ಸ್ಟಾಗ್ರಾಂಗಳಲ್ಲಿ ಹುಡುಗಿಯ ಹೆಸರಿನಲ್ಲಿ ನಕಲಿ ಪ್ರೊಫೈಲ್‌ ಸೃಷ್ಟಿಸುವುದು, ಷೇರು ಮಾರುಕಟ್ಟೆ, ಕ್ರಿಪ್ಟೋದಲ್ಲಿ ಹೂಡಿಕೆ ನೆಪದಲ್ಲಿ ಭಾರತೀಯರಿಗೆ ಕರೆ ಮಾಡಿ ವಂಚಿಸುವ ಕೆಲಸಗಳನ್ನು ಮಾಡಿಸಲಾಗುತ್ತಿತ್ತು.

    “ಏಜೆಂಟ್‌ ಓರ್ವ ಕಾಂಬೋಡಿ ಯಾದಲ್ಲಿ ಐಟಿ ಉದ್ಯೋಗವಿದೆ ಎಂದು ನಂಬಿಸಿ ಟೂರಿಸ್ಟ್‌ ವೀಸಾ ದಲ್ಲಿ ನಮ್ಮನ್ನು ಕಳುಹಿಸಿದ್ದ. ಅಲ್ಲಿ ಹೋದಾಗಲೇ ವಂಚನೆ ಬೆಳಕಿಗೆ ಬಂದಿದ್ದು. ದಿನದ 12 ಗಂಟೆ ಕಾಲ ಗುಲಾಮರಂತೆ ದುಡಿಸಿಕೊಳ್ಳಲಾಗು ತ್ತಿತ್ತು. ದಿನಕ್ಕೆ ಇಷ್ಟು ಲಕ್ಷವನ್ನು ಸಂಗ್ರಹಿಸಿ ಕೊಡುವಂತೆ ಹಿಂಸಿಸಲಾಗುತ್ತಿತ್ತು.ಕೆಲವೊಮ್ಮೆ ಆ ಹಣದಲ್ಲಿ ಸ್ವಲ್ಪ ನೀಡುತ್ತಿದ್ದರು. ಪಾಸ್‌ಪೋರ್ಟ್‌ ಅನ್ನು ತಮ್ಮಲ್ಲೇ ಇಟ್ಟುಕೊಂಡಿದ್ದರು ಎಂದು ವಂಚನೆ ಗೊಳಗಾಗಿ ಭಾರತಕ್ಕೆ ತಲುಪಿರುವ ದಕ್ಷಿಣ ಕನ್ನಡ ಜಿಲ್ಲೆಯ ಸ್ಟೀವನ್‌ ಪೊಲೀಸರಿಗೆ ತಿಳಿಸಿದ್ದಾರೆ.

    ಭಾರತೀಯರನ್ನು ವಂಚಿಸಲು ಭಾರತೀಯರ ಬಳಕೆ
    ಕಾಂಬೋಡಿಯಾ, ಮಲೇಶ್ಯಾ ಮೊದಲಾದೆಡೆ ಇರುವ ವಂಚಕರು ಭಾರತದ ಯುವಕರನ್ನು ಕರೆಸಿಕೊಂಡು ಅವರನ್ನು ಸೈಬರ್‌ ವಂಚನೆಗೆ ಬಳಸಿಕೊಳ್ಳುತ್ತಾರೆ. ಯಾವ ರೀತಿಯ ಕೆಲಸದಲ್ಲಿ ಹೆಚ್ಚು ಚುರುಕಾಗಿದ್ದಾರೆ ಎಂಬುದನ್ನು ಗುರುತಿಸಿ ಅದೇ ರೀತಿಯ ಹೊಣೆಗಾರಿಕೆ ನೀಡುತ್ತಾರೆ. ಯಾವ ರಾಜ್ಯದ ಭಾಷೆ ತಿಳಿದಿದೆಯೋ ಅದೇ ರಾಜ್ಯದ ಜನರನ್ನು ವಂಚಿಸಲು ಅವರನ್ನು ಬಳಸಲಾಗುತ್ತದೆ. ಇದೇ ರೀತಿ ಕರ್ನಾಟಕದಿಂದ 5 ಮಂದಿ ಯುವಕರು ವಂಚನೆಯ ಜಾಲದಲ್ಲಿ ಸಿಲುಕಿದ್ದು, ಈಗ ರಕ್ಷಿಸಲಾಗಿದೆ.

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ಅಧಿಕಾರಿಯೋರ್ವರು ವಾಟ್ಸಾಪ್‌ನಲ್ಲಿ ಬಂದಿದ್ದ ಸಂದೇಶವನ್ನು ನಂಬಿ ಹೂಡಿಕೆ ಮಾಡಿ 67 ಲ.ರೂ. ಕಳೆದುಕೊಂಡಿದ್ದರು. ಆ ಬಗ್ಗೆ ಒಡಿಶಾದಲ್ಲಿ ಪ್ರಕರಣ ದಾಖಲಾಗಿತ್ತು. ಸೈಬರ್‌ ಪೊಲೀಸರು ಈ ವಂಚನಾ ಜಾಲದ ಬೆನ್ನು ಹತ್ತಿದಾಗ ಕಾಂಬೋಡಿಯಾದ ವಂಚಕರ ನಂಟು ಬಯಲಿಗೆ ಬಂದಿತು. ತನಿಖೆ ಮುಂದುವರಿಸಿದಾಗ ಇಡೀ ಜಾಲದ ವಿವರ ತಿಳಿಯಿತು. ಈ ಮಾಹಿತಿಯನ್ನು ಪೊಲೀಸರು ಭಾರತೀಯ ವಿದೇಶಾಂಗ ಇಲಾಖೆ ಜತೆ ಹಂಚಿಕೊಂಡರು. ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒಟ್ಟು 250 ಮಂದಿಯನ್ನು ರಕ್ಷಿಸಿದ್ದಾರೆ.

    DAKSHINA KANNADA

    ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ; ಓರ್ವ ಸಾ*ವು

    Published

    on

    ಮಂಗಳೂರು/ಆನೇಕಲ್ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ ಹೊಡೆದು, ಸವಾರ ಸ್ಥಳದಲ್ಲಿಯೇ ಮೃ*ತಪಟ್ಟಿರುವ ಘಟನೆ ತಮಿಳುನಾಡು ಗಡಿ ಪ್ರದೇಶವಾದ ಹೊಸೂರು ಸಮೀಪದ ಸೂಳಗಿರಿ ಬಳಿ ನಡೆದಿದೆ. ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ನಿವಾಸಿ ಅರ್ಚಕ ಶ್ರೀನಿವಾಸ್ ಮೃ*ತ‌ ದುರ್ದೈವಿ.

    ದೇವಾಲಯದ ಅರ್ಚಕರಾಗಿದ್ದ ಶ್ರೀನಿವಾಸ್, ಪೂಜೆಯ ನಿಮಿತ್ತ ಬೈಕ್‌ ಮೂಲಕ ಆನೇಕಲ್‌ನಿಂದ ಹೋಗುತ್ತಿದ್ದರು. ಈ ವೇಳೆ ತಮಿಳುನಾಡಿನ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃ*ತಪಟ್ಟರೆ, ರಾಘವೇಂದ್ರ ಎಂಬುವವರಿಗೆ ಗಂಭೀರ ಗಾ*ಯವಾಗಿದೆ.

    ಇದನ್ನೂ ಓದಿ : ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು

    ಅಪಘಾ*ತದ ರಭಸಕ್ಕೆ ಬೈಕ್‌ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮ*ರಣೋತ್ತರ ಪರೀಕ್ಷೆಗಾಗಿ ಮೃ*ತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

    Continue Reading

    DAKSHINA KANNADA

    ಬಿಜೆಪಿ ಹೈಕಮಾಂಡಿಂದ ಭರ್ಜರಿ ಗಿಫ್ಟ್ ; ನಳೀನ್ ಕುಮಾರ್ ಕಟೀಲ್ ಸುತ್ತಾಟ ಮತ್ತೆ ಆರಂಭ !

    Published

    on

    ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ದ.ಕ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಎಂಪಿ ಚುನಾವಣೆಯಲ್ಲಿ ಟಿಕೆಟ್ ಸಿಗದೆ ವಂಚಿತರಾದ ಬಳಿಕ ಅಷ್ಟಾಗಿ ರಾಜಕೀಯ ವಿಚಾರದಲ್ಲಿ ಪ್ರಚಲಿತದಲ್ಲಿರಲಿಲ್ಲ. ಆದರೆ ಇದಿಗ ಕಟೀಲ್ ಮತ್ತೆ ಸುದ್ದಿಯಲ್ಲಿದ್ದಾರೆ.


    ನಳೀನ್ ಕುಮಾರ್‌ಗೆ ಗುಡ್ ನ್ಯೂಸ್;
    ಬಿಜೆಪಿಯು ನಳೀನ್ ಕುಮಾರ್ ಕಟೀಲ್ ಅವರನ್ನು ಒಡಿಶಾ ರಾಜ್ಯದ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಅಂದಹಾಗೆ ಒಡಿಶಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸದಸ್ಯತ್ವದ ಗುರಿಯನ್ನು ನೀಡಿದ್ದು, ಕೇಂದ್ರ ನಾಯಕತ್ವ ನಳಿನ್ ಕುಮಾ‌ರ್ ಕಟೀಲ್‌ಗೆ ಈ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
    ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಸೆ.17ರಂದು ಒಡಿಶಾಗೆ ತೆರಳಲಿದ್ದು, ಅಲ್ಲಿ ಒಂದು ವಾರ ಕಾಲ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

     

    Continue Reading

    DAKSHINA KANNADA

    ಮಂಗಳೂರಿನ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

    Published

    on

    ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್‌ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದು*ಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭಾನುವಾರ(ಸೆ.15) ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ.

    ಎರಡು ಬೈಕ್‌ ಗಳಲ್ಲಿ ಬಂದ ನಾಲ್ಕು ಮಂದಿ ದು*ಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿಗಳಿಗೆ ಹಾನಿಯಾಗಿದೆ.

    ಸುರತ್ಕಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇಂದು(ಸೆ.16) ಈದ್ ಮಿಲಾದ್  ಹಬ್ಬ. ಹಾಗಾಗಿ ಸುರತ್ಕಲ್ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    Continue Reading

    LATEST NEWS

    Trending