Connect with us

    DAKSHINA KANNADA

    ಸೈಬರ್ ಕ್ರೈಂ ಕಾರ್ಯಾಚರಣೆ; ಕೇರಳದ ಆರೋಪಿಗಳಿಬ್ಬರು ಅರೆಸ್ಟ್

    Published

    on

    ಮಂಗಳೂರು : ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯಿಂದ ಕೊಟ್ಯಂತರ ರೂ. ದೋಚಿದ ಆರೋಪಿಗಳನ್ನು ಮಂಗಳೂರು ನಗರ ಸೆನ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಬ0ಧಿತರನ್ನು ಕೇರಳದ ಪಾಲಕ್ಕಾಡ್ ಮಲಪ್ಪುರಂ ವರಿಯಂಕುಲo ಜಾಫರ್ ಕೆ (49 ) ಮತ್ತು ಕೋಝಿಕೋಡ್ ಚೊಕ್ಕತ್‌ನ ಆಕಾಶ್ ಎ (22) ಎಂದು ಗುರುತಿಸಲಾಗಿದೆ.

    ಮೊದಲ ಪ್ರಕರಣ  :

    ಪ್ರಕರಣದಲ್ಲಿ ಅಪಚಿರಿತ ವ್ಯಕ್ತಿ ವಾಟ್ಸ್ ಆಪ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿ ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ ಸ್ಟೋಕ್ ಫ್ರಂಟ್ ಲೈನ್ ಎಂಬ ಲಿಂಕ್‌ನ್ನು ಕಳುಹಿಸಿ ಪಿರ್ಯಾದಿದಾರರಿಂದ ಹಂತ ಹಂತವಾಗಿ ಒಟ್ಟು 10,84,017 ರೂ. ಹಣ ವಂಚಿಸಿರುವುದಾಗಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಈ ಪ್ರಕರಣಕ್ಕೆ ಸಂಬoದಿಸಿದoತೆ ಪೊಲೀಸರು ತನಿಖೆ ಕೈಗೊಂಡಾಗ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರವನ್ನು ಸಂಗ್ರಹಿಸಿ ನೋಡಿದಾಗ ಕೇರಳ ಮೂಲದ ಆರೋಪಿ ಜಾಫರ್ ಕೆ ಎಂಬಾತನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವುದು ಕಂಡುಬoದಿತ್ತು. ಪೊಲೀಸರು ಡಿ.23ರಂದು ಕೇರಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ಧಾರೆ. ಇನ್ನೊಂದು ಪ್ರಕರಣದಲ್ಲಿ ಅಪರಿಚಿತ ವ್ಯಕ್ತಿಯು ಟ್ರಾಯ್‌ನಿಂದ ಪ್ರತಿನಿಧಿಸಿ ಕರೆ ಮಾಡುವುದಾಗಿ ತಿಳಿಸಿ ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬ್ರ ರಿಜಿಸ್ಟರ್ ಆಗಿದ್ದು, ಮುಂಬೈನ ಅಂಧೇರಿ(ಇ)ಯಲ್ಲಿ ಹಲವು ಕಾನೂನು ಬಾಹಿರ ಚಟುವಟಿಕೆ ಗಳಲ್ಲಿ ಒಳಗೊಂಡಿದ್ದು, ಮಾರ್ಕೆಟಿಂಗ್ ನೆಪದಲ್ಲಿ ನಿಮಗೆ ಸಂಬಂಧಿಸಿದ ಮೊಬೈಲ್ ನಂಬ್ರದಿoದ ಕಾಲ್ ಮಾಡಿ ಕಿರುಕುಳ ಕೊಡುತ್ತಿರುವುದರ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು ಕೂಡಲೇ ಅಂಧೇರಿ(ಇ) ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಇಲ್ಲದಿದ್ದಲ್ಲಿ ನಿಮ್ಮ ಮೊಬೈಲ್ ನಂಬ್ರ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂದು ವಂಚನೆಗೊಳಗಾದ ವ್ಯಕ್ತಿಗೆ ತಿಳಿಸಿದ ಎನ್ನಲಾಗಿದೆ.

    ಎರಡನೇ ಪ್ರಕರಣ :

    ಅಂಧೇರಿಯ ಕೆನರಾ ಬ್ಯಾಂಕ್‌ನಲ್ಲಿ ನಿಮ್ಮ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು, ಇದಕ್ಕೆ ಐಡೆಂಟಿಟಿ ಬಳಸಿ ಸಿಮ್ ಖರೀದಿಸಿರುವುದಾಗಿಯೂ, ಆ ಕಾರಣದಿಂದ ನಿಮ್ಮನ್ನು ಬಂಧಿಸಿ ಜೈಲುಗಟ್ಟುವುದಾಗಿ ಡಿಜಿಟಲ್ ಆರೆಸ್ಟ್ ಮಾಡುವುದಾಗಿ ಬೆದರಿಸಿ ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು ರೂ.1,71,00,000 ಹಣವನ್ನು ಪಡೆದು ವಂಚನೆ ಮಾಡಿರುವ ಬಗ್ಗೆ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಈ ಪ್ರಕರಣಕ್ಕೆ ಸಂಬoಧಿಸಿ ಪೊಲೀಸರು ತನಿಖೆ ಕೈಗೊಂಡಾಗ ಆರೋಪಿ ಆಕಾಶ್ ಎ ಎಂಬಾತನು ತನ್ನ ಬ್ಯಾಂಕ್ ಖಾತೆಯನ್ನು ಸೈಬರ್ ಅಪರಾಧಕ್ಕೆ ಉಪಯೋಗಿಸಿಕೊಂಡಿರುವುದು ಬೆಳಕಿಗೆ ಬಂದಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ಕೇರಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಡಿಸಿಪಿಗಳಾದ ಸಿದ್ದಾರ್ಥ ಗೋಯಲ್ ಮತ್ತು ರವಿ ಶಂಕರ್ ಮಾರ್ಗದರ್ಶನದಲ್ಲಿ ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ ಮತ್ತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಸತೀಶ್ ಎಂ ಪಿ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು. ಪ್ರಕರಣದಲ್ಲಿ ಉಳಿದ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಆಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.

    DAKSHINA KANNADA

    ಕಡಬ : ಮೇಯುತ್ತಿದ್ದ ದನದ ಕಾಲು ಕ*ಡಿದ ಪಾ*ಪಿ

    Published

    on

    ಕಡಬ : ಪಕ್ಕದ ಮನೆಯ ವ್ಯಕ್ತಿಯೊಬ್ಬ ಮೇಯಲು ಬಿಟ್ಟಿದ್ದ ದನದ ಕಾಲನ್ನು ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ಕಡಬದ ತಾಲೂಕು ರಾಮಕುಂಜ ಗ್ರಾಮದ ಕೊಂಡ್ಯಾಡಿಯಲ್ಲಿ ನಡೆದಿದೆ.

    ಕೊಂಡ್ಯಾಡಿ ನಿವಾಸಿ ಕೃಷಿಕೆ ರಾಜೀವಿ ಎಂಬುವವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ. ಅಬ್ಬಾಸ್ ಎಂಬ ವ್ಯಕ್ತಿ ಆರೋಪಿ ಎಂದು ಗುರುತಿಸಲಾಗಿದೆ.

    ಡಿ.22 ರ ಮಧ್ಯಾಹ್ನ ಎರಡು ಗಂಟೆಗೆ ಕೊಟ್ಟಿಗೆಯಿಂದ ದನವನ್ನು ತೋಟದಲ್ಲಿ ಮೇಯಲು ಬಿಟ್ಟಿದ್ದು, ದನ ಸಂಜೆಯಾದರೂ ಮರಳಿ ಮನೆಗೆ ಬಾರದೇ ಇದ್ದುದ್ದನ್ನು ಕಂಡು ಹುಡುಕಾಟ ಮಾಡಿದಾಗ ಪಕ್ಕದ ಮನೆ ಅಬ್ಬಾಸ್‌ ಎಂಬುವವರ ತೋಟದಲ್ಲಿ ಕಾ*ಲಿಗೆ ಗಂ*ಭೀರ ಗಾ*ಯಗೊಂಡ ಸ್ಥಿತಿಯಲ್ಲಿ ದನ ಬಿದ್ದಿತ್ತು.’ನಾನೇ ಕ*ತ್ತಿಯಲ್ಲಿ ಕ*ಡಿದದ್ದು, ಏನೀವಾಗ? ನಿನಗೆ ಏನು ಮಾಡಲಿಕ್ಕೆ ಆಗುತ್ತೆ? ನೀನು ಸ್ವಲ್ಪ ಬೇಗ ಬಂದಿರುವೆ, ಇಲ್ಲದಿದ್ದರೆ ಇವತ್ತು ಮಾಂ*ಸ ಮಾಡಿ ಬಿಡುತ್ತಿದ್ದೆ’ ಎಂದು ತುಳುವಿನಲ್ಲಿ ಬೈದಿದ್ದಾರೆ. ‘ಹೇಗಿದ್ದರೂ ದನ ಸಾ*ಯುತ್ತೆ ಅಲ್ವ. ಅದರ ನಂತರ ನಾನೇ ತಗೊಂಡು ಹೋಗುತ್ತೇನೆ. ಪದಾರ್ಥಕ್ಕಾದರೂ ಆಗುತ್ತದೆ’ ಎಂದು ಹೇಳಿದ್ದಾರೆ.

    ‘ನನ್ನ ಆದಾಯದ ಮೂಲಕ್ಕೆ ತೊಂದರೆಯಾಗಿದೆ’ ಎಂದು ಸಂತ್ರಸ್ತ ಮಹಿಳೆ ಅಬ್ಬಾಸ್‌ ಮೇಲೆ ಪ್ರಕರಣ ದಾಖಲು ಮಾಡಿ ಕಾನೂನು ಕ್ರಮ ಜರುಗಿಸಲು ದೂರಿನಲ್ಲಿ ಕೇಳಿಕೊಂಡಿದ್ದಾಳೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

    Continue Reading

    DAKSHINA KANNADA

    ಕಂಟೈನರ್ ಹಾಗೂ ಸ್ಕೂಟಿ ನಡುವೆ ಭೀ*ಕರ ಅ*ಪಘಾತ; ಇಬ್ಬರ ದು*ರ್ಮರಣ

    Published

    on

    ಸಂಪಾಜೆ: ಭೀ*ಕರ ರಸ್ತೆ ಅ*ಪಘಾತಕ್ಕೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಬ*ಲಿಯಾದ ಘಟನೆ ಸಂಪಾಜೆಯ ಚೆಡಾವು ಎಂಬಲ್ಲಿ ಸಂಭವಿಸಿದೆ.

    ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಕಂಟೈನರ್ ಹಾಗೂ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ನಡುವೆ ಅ*ಪಘಾತ ಸಂಭವಿಸಿತ್ತು.

    ಈ ಭೀ*ಕರ ಅ*ಪಘಾತದಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಎಂ.ಚಿದಾನಂದ ಆಚಾರ್ಯ ಎಂಬವರು ಸ್ಥಳದಲ್ಲೇ ಮೃ*ತ ಪಟ್ಟಿದ್ದಾರೆ. ಅವರ ಜೊತೆ ಸಹ ಸವಾರೆಯಾಗಿ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಗಂ*ಭೀರ ಗಾ*ಯಗೊಂಡು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫ*ಲಕಾರಿಯಾಗದೆ ಅವರೂ ಕೂಡಾ ಮೃ*ತ ಪಟ್ಟಿದ್ದಾರೆ. ಮೃ*ತರು ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದುಕೇರಿ ನಿವಾಸಿಗಳು ಎಂಬ ಮಾಹಿತಿ ಲಭ್ಯವಾಗಿದೆ. ಸ್ಕೂಟಿಗೆ ಡಿ*ಕ್ಕಿ ಹೊಡೆದ ಕಂಟೈನರ್ ರಸ್ತೆ ಬಿಟ್ಟು ಕೆಲ ಮೀಟರ್ ಗಳಷ್ಟು ದೂರ ಕಾಡಿನ ಒಳಗೆ ಚಲಿಸಿದೆ. ರಸ್ತೆಯ ಬದಿಯಲ್ಲಿ ಅಳವಡಿಸಿದ್ದ ಕಬ್ಬಿಣದ ತಡೆ ಬೇಲಿ ಕೂಡಾ ಮುರಿದು ಬಿದ್ದಿದ್ದು, ಸ್ಕೂಟಿ ಸಂಪೂರ್ಣ ನು*ಜ್ಜುಗುಜ್ಜಾಗಿ ಹೋಗಿದೆ.

    ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತದ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಡ್ರಾಯಿಂಗ್ ಗ್ರೇಡ್ ಪರೀಕ್ಷೆ; ಬಾಲವಿಕಾಸ ಶಾಲೆ ವಿದ್ಯಾರ್ಥಿಗಳು ಮೇಲುಗೈ

    Published

    on

    ವಿಟ್ಲ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಲ್ಲೇಶ್ವರಂ, ಬೆಂಗಳೂರು ಆಯೋಜಿಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ 45 ವಿದ್ಯಾರ್ಥಿಗಳು ಭಾಗವಹಿಸಿದ್ದು,ಶೇ 100 ಫಲಿತಾಂಶ ಲಭಿಸಿದೆ.

    ಪುತ್ತೂರು ನಲ್ಲಿ ನವೆಂಬರ್ 21, 22,ಮತ್ತು 23 ರಂದು ಈ ಪರೀಕ್ಷೆ ನಡೆದಿತ್ತು.  ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ.

    ಲೋವರ್ ಗ್ರೇಡ್ ವಿಭಾಗದಲ್ಲಿ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು‌, 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಹೈಯರ್ ಗ್ರೇಡ್ ವಿಭಾಗದಲ್ಲಿ 33 ವಿದ್ಯಾರ್ಥಿಗಳು ಭಾಗವಹಿಸಿದ್ದು,15 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಚಿತ್ರಕಲಾ ಶಿಕ್ಷಕರಾದ ಅರುಣ್ ಕುಮಾರ್ ಹಾಗೂ ಕಾರ್ತಿಕ್ ಕುಮಾರ್ ರವರು ತರಬೇತಿ ನೀಡಿರುತ್ತಾರೆ.

    Continue Reading

    LATEST NEWS

    Trending