ಕರಾವಳಿಗೆ ಮತ್ತೆ ಚಂಡಮಾರುತದ ಭೀತಿ :ಅಗಸ್ಟ್ 20 ವರೆಗೆ ಅರೆಂಜ ಅಲರ್ಟ್..!
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ಕೂಡ ಮಳೆ ಹೆಚ್ಚಳವಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆ. 20ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆ. 20ರವರೆಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಹಾಸನ, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಆ. 20ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ನಿನ್ನೆಯಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದ್ದು, ಮಳೆ ಮತ್ತು ಪ್ರವಾಹದಿಂದಾಗಿ ನಿನ್ನೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ಇನ್ನು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಆ. 19ರ ಬಳಿಕ ಇಲ್ಲಿ ಮಳೆಯ ಪ್ರಮಾಣ ತಗ್ಗಲಿದೆ. ಒಟ್ಟಾರೆ ಆ. 21ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ನಿನ್ನೆ ಸುರಿದ ಮಳೆಯಿಂದ ರಾಯಚೂರಿನಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ.
ಜುರಾಲಾ ಡ್ಯಾಂನ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಲ್ವರು ಜಲಸಮಾಧಿಯಾಗಿದ್ದಾರೆ. ಈ ಮೂಲಕ ಒಂದೇ ದಿನ ಐವರು ಸಾವನ್ನಪ್ಪಿದಂತಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಆ. 20ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆ. 21ರ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ. ಬೆಳಗಾವಿಯಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ರಾಯಚೂರು, ಬಾಗಲಕೋಟೆ, ಹಾವೇರಿ, ಯಾದಗಿರಿ, ವಿಜಯಪುರ, ಧಾರವಾಡ ಮುಂತಾಧ ಜಿಲ್ಲೆಗಳ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಬೀದರ್, ಕಲಬುರ್ಗಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಆ. 20ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆ. 21ರ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.