DAKSHINA KANNADA
ಕರಾವಳಿಯಲ್ಲಿ ಚಂಡಮಾರುತ ಭೀತಿ : ಬೈಂದೂರಿನಲ್ಲಿ ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ..!
ಕುಂದಾಪು : ಕರಾವಳಿಯಲ್ಲಿ ಮಳೆಯ ಆರ್ಭಟ ತೀವ್ರಗೊಂಡಿದೆ. ಉಡುಪಿ ಜಿಲ್ಲೆಯ ಬೈಂದೂರು ನಾವುಂದ ಗ್ರಾಮದ ಹಳೆ ಹೆದ್ದಾರಿ ಸಮೀಪವಿರುವ ಶ್ರೀಮತಿ ಗಾಣಿಗರ ಎಂಬವರ ಮನೆ ಮೇಲೆ ಮರವೂಂದು ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ.
ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ, ನಾವುಂದ ಗ್ರಾಮಸ್ಥರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಮನೆಯಲ್ಲಿ ವಾಸವಾಗಿದ್ದ ಮೂರು ಜನರ ಪೈಕಿ ತಾಯಿ,ಮಗು & ಅಜ್ಜಿ ಮತ್ತು ಶ್ರೀಮತಿಗಾಣಿಗರವರನ್ನು ಮನೆಯಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.ಮನೆಯಲ್ಲಿರುವ ಅಜ್ಜಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಸದಸ್ಯರು ಸುಲೋಚನ ಗಾಡಿಗ, ರಾಜೇಶ್ ಪೂಜಾರಿ, ಪಂಚಾಯತ್ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ :
ಬಂಗಾಳಕೊಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ, ಮೀನುಗಾರರು ಮೀನುಗಾರಿಕೆಗೆ ಕಡಲಿಗೆ ಇಳಿಯದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದಾರೆ.
ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಪುತ್ತೂರು,ಉಪ್ಪಿನಂಗಡಿ,ಕಡಬ ಸುಬ್ರಹ್ಮಣ್ಯ,ಸುಳ್ಳ,ಹರಿಹರ ಬೆಳ್ತಂಗಡಿ,ಧರ್ಮಸ್ಥಳ,ನಾರಾವಿ ಬಂಟ್ವಾಳ,ಸುರತ್ಕಲ್ ಮೂಡಬಿದಿರೆ ಪ್ರದೇಶದಲ್ಲಿ ಶನಿವಾರವು ಉತ್ತಮ ಮಳೆಯಾಗಿದೆ.
ಕರಾವಳಿಗೆ ಇಂದು” ರೆಡ್ ಅಲರ್ಟ್” ಘೋಷಣೆಯಾಗಿದ್ದು 8 ಮತ್ತು 9ರಂದು “ಆರೆಂಜ್ ಅಲರ್ಟ್” ಘೋಷಣೆಯಾಗಿದೆ.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!