Monday, August 15, 2022

ಮೇ 16 ಕ್ಕೆ ಕರಾವಳಿಗೆ ಅಪ್ಪಳಿಸಲಿದೆ ತೌಕ್ತೆ ಚಂಡಮಾರುತ : 2-3 ದಿನ ಭಾರೀ ಮಳೆ ಸಾಧ್ಯತೆ..!

ಬೆಂಗಳೂರು : ಮೇ 16 ರಂದು ಕರಾವಳಿಗೆ ತೌಕ್ತೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಹೀಗಾಗಿಯೇ ಮಂಗಳೂರಿನಲ್ಲಿ ಕರಾವಳಿ ಕಾವಲುಪಡೆ ಇಂದಿನಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರದ ಜೊತೆಗೆ, ಕರ್ನಾಟಕ, ಕೇರಳ, ಲಕ್ಷದ್ವೀಪ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಮುಂದಿನ 2-3 ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಭಾರತೀಯ ಹವಾಮಾನ ಇಲಾಖೆ, ಅರಬ್ಬೀ ಸಮುದ್ರದಲ್ಲಿ ಎದ್ದಿರುವಂತ ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ, ಮುಂದಿನ ಎರಡು ಮೂರು ದಿನಗಳು ಮೇ.14,15, 16 ರಂದು ಕೇರಳ, ಲಕ್ಷದ್ವೀಪ ಭಾಗದಲ್ಲಿ ಭಾರೀ ಮಳೆ ಸುರಿಯುವ ಸಂಭವ ಇದೆ ಎಂದು ತಿಳಿಸಿದೆ.

ಮೇ.15ರ ಸುಮಾರಿಗೆ ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಏಳಿರುವ ತೌಕ್ತೆ ಚಂಡಮಾರುತದ ಪರಿಣಾವಾಗಿ, ಮೇ.16ರ ಸುಮಾರಿಗೆ ಕೇರಳ, ಕರ್ನಾಟಕ, ಲಕ್ಷದ್ವೀಪ, ಗೋವಾ ಹಾಗೂ ಮಹಾರಾಷ್ಟ್ರ ಭಾಗಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ತಿಳಿಸಿದೆ.

ಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಉತ್ತರ ಕನ್ನಡ, ಚಿತ್ರದುರ್ಗದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯವಾದ ಕೇರಳ, ಅಸ್ಸಾಂ, ಸಿಕ್ಕಿಂ, ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಮಳೆ ಹೆಚ್ಚಾಗಲಿದೆ. ಜೂನ್ 1ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 15ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರಿನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದ್ದು, ಮೇ 16ರಂದು ಚಂಡಮಾರುತದಿಂದ ಭಾರೀ ಮಳೆ ಉಂಟಾಗಲಿದೆ

 

LEAVE A REPLY

Please enter your comment!
Please enter your name here

Hot Topics

ಮಾಲ್‌ನಲ್ಲಿ ಸಾವರ್ಕರ್​ ಫೋಟೋ ಹಾಕಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಆರೋಪಿ ಬಂಧನ

ಶಿವಮೊಗ್ಗ: ಸಿಟಿ ಸೆಂಟರ್ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್​ ಫೋಟೋ ಹಾಕಿದ್ದನ್ನು ವಿರೋಧ ವ್ಯಕ್ತಪಡಿಸಿದ್ದ ಆಸೀಫ್​ನನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸದ್ಯ ನ್ಯಾಯಾಲಯ ಆ. 26ರವರೆಗೆ ಆಸೀಫ್​ನನ್ನು ನ್ಯಾಯಾಂಗ ಬಂಧನದಲ್ಲಿ...

ಆ.18ರಂದು ಮಕ್ಕಳ “ಶ್ರೀಕೃಷ್ಣ ವೇಷ” ಸ್ಪರ್ಧೆ-ಪ್ರದೀಪ್ ಕಲ್ಕೂರ

ಮಂಗಳೂರು: ಮಂಗಳೂರು ನಗರದ ಕದ್ರಿ ಶ್ರಿ ಮಂಜುನಾಥೇಶ್ವರ ದೇವಾಲಯದ ಅಂಗಳದಲ್ಲಿ ಆಗಸ್ಟ್ 18ರಂದು ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ "ಶ್ರೀಕೃಷ್ಣ ವೇಷ" ಸ್ಪರ್ಧೆ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕಲ್ಕೂರ...

ವಿಟ್ಲ: ‘ಪನೋಲಿಬೈಲ್ದ ಶ್ರೀ ಕಲ್ಲುರ್ಟಿ’ ತುಳುಭಕ್ತಿಗೀತೆ ರಿಲೀಸ್

ವಿಟ್ಲ: ಇತಿಹಾಸ ಪ್ರಸಿದ್ಧ ಪಣೋಲಿಬೈಲು ಕ್ಷೇತ್ರದ 'ಪನೋಲಿಬೈಲ್ದ ಶ್ರೀ ಕಲ್ಲುರ್ಟಿ' ಎಂಬ ತುಳುಭಕ್ತಿ ಗೀತೆ ' ಶನಿವಾರ ಪಣೋಲಿಬೈಲು ಕ್ಷೇತ್ರದಲ್ಲಿ ಅನಾವರಣಗೊಂಡಿತು.ಈ ಸಂದರ್ಭದಲ್ಲಿ ಕ್ಷೇತ್ರದ ಅನುವಂಶಿಕ ಅರ್ಚಕರಾದ ವಾಸುದೇವ ಮೂಲ್ಯ, ಅರ್ಚಕ ನಾರಾಯಣ...