Friday, July 1, 2022

ಸಿಲಿಂಡರ್ ಸ್ಫೋಟದಿಂದ ಕಿತ್ತು ಹೋದ ಮನೆಯ ಹೆಂಚು-ಅಜ್ಜ-ಮೊಮ್ಮಗಳಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಿಸಿ ಅಜ್ಜ ಮತ್ತು ಮೊಮ್ಮಗಳಿಗೆ ಗಂಭೀರ ಗಾಯವಾದ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ರಸ್ತೆಯ ಯರೇಹಳ್ಳಿ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದೆ.

ಮರುಳ ಸಿದ್ದಪ್ಪ ಮತ್ತು ಅವರ ಮೊಮ್ಮಗಳು ಚೈತನ್ಯ ಅವಘಡದಲ್ಲಿ ಗಾಯಗೊಂಡವರಾಗಿದ್ದಾರೆ.

ಮನೆಯಲ್ಲಿ ಮಗಳು ಮತ್ತು ಅಳಿಯನೊಂದಿಗೆ ವಾಸವಿದ್ದ ಮರುಳ ಸಿದ್ದಪ್ಪ ಮಧ್ಯಾಹ್ನ ಅಡುಗೆ ಮಾಡಲು ಹೋದಾಗ ಅನಿಲ ಸೋರಿಕೆಯಾಗಿ ಸಿಲಿಂಡರ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಮನೆಯಿಂದ ಹೊರಗೆ ಓಡಿ ಬರುವಷ್ಟರಲ್ಲಿಯೇ ಸಿಲಿಂಡರ್ ಸ್ಫೋಟಿಸಿ ಎಡಭುಜಕ್ಕೆ ಸುಟ್ಟ ಗಾಯವಾಗಿದೆ. ಮನೆಯ ಚಾವಣಿ, ಹೆಂಚುಗಳು ಹಾರಿ ಹೋಗಿವೆ.

ಅಷ್ಟೇ ಅಲ್ಲದೆ ಜಗುಲಿಯಲ್ಲಿ ಆಟವಾಡುತ್ತಿದ್ದ ಮೊಮ್ಮಗಳು ಚೈತನ್ಯಳ ತಲೆಯ ಮೇಲೆ ಹೆಂಚು ಬಿದ್ದು ಗಾಯವಾಗಿದೆ. ಅಷ್ಟರಲ್ಲಿ ಗ್ರಾಮಸ್ಥರು ಗಾಯಾಳುಗಳನ್ನು ಬೀರೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು.

ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ.
ಹುಲ್ಲೇಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ಎಂ.ಲಕ್ಷ್ಮಣಪ್ಪ ಸ್ಥಳಕ್ಕೆ ಭೇಟಿ ನೀಡಿದರು.

ಅಗ್ನಿಶಾಮಕ ಠಾಣಾಧಿಕಾರಿ ಬಸವರಾಜಪ್ಪ, ಸಿಬ್ಬಂದಿ ಗುರುಪಾದಸ್ವಾಮಿ, ಕೆ ಮಂಜುನಾಥ್, ಎಚ್.ಎಂ.ಶಿವಪ್ರಸಾದ್, ಸಾದಿಕ್ ಬಾಷಾ ಬೆಂಕಿ ನಂದಿಸಲು ಸಹಕರಿಸಿದರು.

LEAVE A REPLY

Please enter your comment!
Please enter your name here

Hot Topics

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರಕಾರ: ಪುತ್ತೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ...

ಮಂಗಳೂರು: ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೊಗ್ಲಿಂಗ್ ಸ್ಮರಣೆ

ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಇಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು.ಕನ್ನಡದ ಪ್ರಥಮ ಪತ್ರಿಕೆ...