Sunday, November 27, 2022

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ತಯಾರಿ ಸಿದ್ಧತೆಗೆ ಅಗತ್ಯ ಕ್ರಮ ವಹಿಸಲು ಡಿ.ಸಿ ರಾಜೇಂದ್ರ ಸೂಚನೆ

ಮಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರೀಕ್ಷಾ ಪೂರ್ವ ಅಭ್ಯಾಸ ಮಾಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ ರಾಜೇದ್ರ ಕೆ ವಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಅವರು ಇತ್ತೀಚೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳ ಪರಿಶೀಲನೆ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.

ಮುಂಬರುವ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಬೇಕು, ಮಕ್ಕಳ ಕಲಿಕೆಯನ್ನು ಪ್ರೋತ್ಸಾಹಿಸಲು ಅವರ ವಾಸಸ್ಥಾನದ ಸಮೀಪವಿರುವ ಸಮುದಾಯ ಭವನ ಅಥವಾ

ಗ್ರಾಮ ಪಂಚಾಯತ್‌ನ ಸಭಾಂಗಣದಲ್ಲಿ ಒಬ್ಬರು ಜವಾಬ್ದಾರಿ ಅಧಿಕಾರಿ ಅಥವಾ ನಿವೃತ್ತ ಶಿಕ್ಷಕರ ನೇತೃತ್ವದಲ್ಲಿ ಹೆಚ್ಚಿನ ಪರೀಕ್ಷಾಭ್ಯಾಸಗಳನ್ನು ಆಯೋಜಿಸುವುದಾದಲ್ಲಿ ಅದಕ್ಕೆ ಸೂಕ್ತ ಅವಕಾಶ ಮಾಡಿ ಕೊಡಲಾಗುವುದು ಎಂದರು.

ಹಿಂದೆ ಕಳಪೆ ಸಾಧನೆ ಮಾಡಿದ ಶಾಲೆಗಳ ಪಟ್ಟಿ ಹಾಗೂ ಪ್ರಸಕ್ತ ಸಾಲಿನಲ್ಲಿ 10ನೇ ತರಗತಿಯಲ್ಲಿ ಗೈರು ಹಾಜರಾಗುತ್ತಿರುವ ಮಕ್ಕಳ ಶಾಲಾವಾರು ಪಟ್ಟಿ ಒದಗಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ,

ಪ್ರತಿ ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವಲಯದಲ್ಲಿ ವಾರ್ಷಿಕ ಪರೀಕ್ಷೆಗೆ ಪೂರಕವಾಗುವ ವಿಶೇಷ ಚಟುವಟಿಕೆಯ ಮೂಲಕ ಅಭ್ಯಾಸ ಮಾಡಲು ಅಥವಾ ಸಾಹಿತ್ಯ ಅಭಿವೃದ್ಧಿ ಪಡಿಸುವುದಾದರೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುಧಾಕರ್, ಜಿಲ್ಲೆಯ ಎಲ್ಲಾ 7 ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆಯಲ್ಲಿದ್ದರು.

 

LEAVE A REPLY

Please enter your comment!
Please enter your name here

Hot Topics

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸಿದ್ರೆ ಭಾರತದಲ್ಲಿ 30 ಮಕ್ಕಳು ಜನಿಸ್ತಾರೆ-ಕೇಂದ್ರ ಸಚಿವ

ನವದೆಹಲಿ: ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ...