Connect with us

    DAKSHINA KANNADA

    ಪಣಂಬೂರು ಕಡಲ ಕಿನಾರೆ ತ್ಯಾಜ್ಯ ಕಂಡು ಗರಂ ಆದ ದ.ಕ ಡಿಸಿ…

    Published

    on

    ಮಂಗಳೂರು: ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದೆ. ಈ ನಿಟ್ಟಿನಲ್ಲಿ ಬೀಚ್ ಗಳ ಸ್ವಚ್ಛತೆ ಹಾಗೂ ಸೂಕ್ತ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ತಿಳಿಸಿದ್ದಾರೆ.


    ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ , ಕ್ರೆಡೈ ಮಂಗಳೂರು ಮತ್ತು ಶಕ್ತಿ ನಗರದ ಶಕ್ತಿ ಶಿಕ್ಷಣ ಸಮೂಹ ಸಂಸ್ಥೆಗಳ ಜಂಟಿ ಸಹಭಾಗಿತ್ವದಲ್ಲಿ ಪಣಂಬೂರು ಬೀಚ್ ನಲ್ಲಿ ಸ್ವಚ್ಛ ಸುಂದರ ಬೀಚ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಪಶ್ಚಿಮ ಘಟ್ಟದ ತಪ್ಪಲಿನ ಪ್ರದೇಶ ಹಾಗೂ ನದಿ,ಕಡಲ ತೀರವನ್ನು ಹೊಂದಿದೆ.

    ತುಳುನಾಡಿನ ಸಮೃದ್ಧವಾದ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಜಿಲ್ಲೆಯ ಬೀಚ್‌ಗಳು ಹಾಗೂ ಇಲ್ಲಿನ ಪ್ರವಾಸಿ ತಾಣಗಳಿಗೆ ದೇಶ ವಿದೇಶದಿಂದ ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.


    ಆದುದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಹೂಡಿಕೆಗೆ ಸರ್ಕಾರ ಅವಕಾಶ ಕಲ್ಪಿಸುತ್ತಿದೆ. ಈ ನಿಟ್ಟಿನಲ್ಲಿ ಬೀಚ್ ಗಳ ಸಚ್ಛತೆಗಾಗಿ ಸಾಮೂಹಿಕ ಸಹಭಾಗಿತ್ವದಲ್ಲಿ ತೊಡಗಿಸಿಕೊಂಡಿರುವುದು ಮಾದರಿಯಾಗಿದೆ ಎಂದು ದ‌.ಕ ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.

    ಇದೇ ವೇಳೆ ಅವರು ಕಡಲ ಕಿನಾರೆಗಳಲ್ಲಿ ಇರುವ ಕೆಲವು ಫಾಸ್ಟ್ ಫುಡ್ ಅಂಗಡಿ ಮಾಲಕರು ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಗಲೀಜು ಮಾಡಿರುವುದನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದರು.

    ಪರವಾನಗಿ ಪಡೆಯದೇ ಅಂಗಡಿಗಳನ್ನು ನಡೆಸುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೆಲವು ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

     

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಸೌದಿ ಅರೇಬಿಯಾದಲ್ಲಿ ಭೀಕರ ಕಾರು ಅ*ಪಘಾತ; ಉಳ್ಳಾಲದ ತಾಯಿ – ಮಗು ಮೃ*ತ್ಯು

    Published

    on

    ಉಳ್ಳಾಲ: ಸೌದಿ ಅರೇಬಿಯಾದ ಧಮಾಮ್ ಬಳಿ ಶುಕ್ರವಾರ(ಸೆ.20) ನಡೆದ ಭೀಕರ ರಸ್ತೆ ಅಪ*ಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ತಾಯಿ, ಮಗು ಸಾ*ವನ್ನಪ್ಪಿದ್ದಾರೆ.


    ಹೈದರ್ ಉಳ್ಳಾಲ್ ಅವರ ಪುತ್ರಿ ಸಫಾ ಫಾತಿಮಾ (30) ಹಾಗೂ ಎರಡೂವರೆ ವರ್ಷದ ಮೊಮ್ಮಗ ಮೃತ ದು*ರ್ದೈವಿಗಳು. ಶುಕ್ರವಾರ ಸಂಜೆ ವೇಳೆ ಮದೀನದಿಂದ ಕಾರಿನಲ್ಲಿ ಸಫಾ ಫಾತಿಮಾ ತನ್ನ ಪತಿ ಮಲಪುರಂ ಆರಿಕೋಡ್ನ ಸುಹೈಲ್ (35) ಮತ್ತು ಸಹೋದರ ಮುಹವಿಯ(23) ಜೊತೆಗೆ ದಮಾಮ್ ನಲ್ಲಿರುವ ಹೈದರ್ ಉಳ್ಳಾಲ್ ಅವರ ಮನೆಗೆ ತೆರಳುತ್ತಿದ್ದರು.
    ಈ ವೇಳೆ ಕಾರು ಅ*ಪಘಾತವಾಗಿದ್ದು, ಕಾರಿನಲ್ಲಿದ್ದ ಸುಹೈಲ್, ಮಕ್ಕಳಾದ ಅಬ್ದುಲ್ ಮಲಿಕ್ (7), ಅಬ್ದುಲ್ ರಹಿಮಾನ್ (6) ಹಾಗೂ ಅಹ್ಮದ್ (5) ತೀವ್ರ ಗಾ*ಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ

    Continue Reading

    DAKSHINA KANNADA

    ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾ*ತ; ಸವಾರ ಸಾ*ವು

    Published

    on

    ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾ*ತ ಸಂಭವಿಸಿ ಆಕ್ಟಿವಾ ಸವಾರ ಮೃ*ತಪಟ್ಟಿರುವ ಘಟನೆ ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದಿದೆ.

    ಇಂದಿರಾ ನಗರ ನಿವಾಸಿ ಗಣೇಶ್ ಪ್ರಭು ಮೃ*ತಪಟ್ಟವರು. ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿ*ಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಣೇಶ್ ಆಕ್ಟಿವಾ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು, ಗಂ*ಭೀರ ಗಾ*ಯಗೊಂಡಿದ್ದರು.

    ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ. ಮೃ*ತ ಗಣೇಶ್ ಹೋಳಿಗೆ ವ್ಯಾಪಾರಿಯಾಗಿದ್ದರು ಎಂದು ತಿಳಿದುಬಂದಿದೆ.

    Continue Reading

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    Trending