Connect with us

    DAKSHINA KANNADA

    ಮಂಗಳೂರು: ರಜೆ ಕಡ್ಡಾಯ ಪಾಲನೆಗೆ ದ.ಕ ಜಿಲ್ಲಾಧಿಕಾರಿ ತಾಕೀತು

    Published

    on

    ಮಂಗಳೂರು: ಜಿಲ್ಲೆಯಲ್ಲಿ ಪ್ರಸಕ್ತವಾಗಿ ಅತಿ ಹೆಚ್ಚು ಪ್ರಮಾಣದ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗುತ್ತಿದೆ, ಅದನ್ನು ಸಂಬಂಧಿಸಿದ ಕಾಲೇಜುಗಳ ಆಡಳಿತ ಮಂಡಳಿವರು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಿಗೆ ತಾಕೀತು ಮಾಡಿದರು.


    ಅವರು ನಿನ್ನೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿ ವಿಕೋಪ ನಿರ್ವಹಣೆಯಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ವ್ಯವಸ್ಥೆಯನ್ನು ಮೊದಲು ಸಮೀಕ್ಷೆ ಮಾಡಬೇಕು, ಅವರುಗಳು ಹಳ್ಳಿ, ಹಾಸ್ಟೇಲ್ ನಿಂದ ಅಥವಾ ಇತರೆ ವ್ಯವಸ್ಥೆಗಳು ಸೇರಿದಂತೆ ಕಾಲೇಜಿಗೆ ಹೇಗೆ ಬರುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಬೇಕು, ಜಿಲ್ಲಾಡಳಿತ ರಜೆ ಘೋಷಿಸಿದಾಗ ಕಡ್ಡಾಯವಾಗಿ ರಜೆ ನೀಡಲೇಬೇಕು,

    ಉಲ್ಲಂಘಿಸಿದ್ದಲ್ಲೀ ವಿಪತ್ತು ನಿರ್ವಹಣಾ ಅಧಿನಿಯಮದ 24-34ರ ನಿಯಮಗಳನುಸಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲಾಡಳಿತ ಒಂದು ಭಾರಿ ಆದೇಶ ಹೊರಡಿಸಿದರೆ ಅದು ಅಧಿಕೃತ ಹಾಗೂ ಅಂತಿಮ ಅದನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಎಚ್ಚರಿಕೆ ನೀಡಿದರು.

    ಈ ಸಂದರ್ಭದಲ್ಲಿ ಮಂಗಳೂರು ಮಹಾ ನಗರ ಪಾಲಿಕೆ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್, ಮಂಗಳೂರು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ಗುರುಪ್ರಸಾದ್, ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಸೇರಿದಂತೆ ವಿವಿಧ ಕಾಲೇಜಿನ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.

    BIG BOSS

    ಕೊಣಾಜೆ: 3 ವರ್ಷದ ಬಾಲೆಗೆ ಕಿ*ರುಕುಳ ನೀಡಿದ 70ರ ಅಜ್ಜ ಅರೆಸ್ಟ್

    Published

    on

    ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ,‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.

    ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ

    Published

    on

    ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.

    ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.

    ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    Trending