Connect with us

DAKSHINA KANNADA

ಮಂಗಳೂರು: ಡೆಂಗ್ಯೂ ರೋಗದ ಬಗ್ಗೆ ಎಚ್ಚೆತ್ತುಕೊಳ್ಳುವಂತೆ ಅಧಿಕಾರಿಗಳಿಗೆ ದ.ಕ ಡಿಸಿ ವಾರ್ನಿಂಗ್

Published

on

ಮಂಗಳೂರು: ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗ ಕಂಡುಬರುವ ಕಾರಣ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು.

ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿವಿಧ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗವು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಸಂಭವ ಇದೆ, ಆದ ಕಾರಣ ಈಡಿಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಸೊಳ್ಳೆ ಪರದೆಯನ್ನು ಕಡ್ಡಾಯವಾಗಿ ಬಳಸಬೇಕು ಅಥವಾ ಸೊಳ್ಳೆ ಬತ್ತಿ, ಮುಲಾಮು, ಇತ್ಯಾದಿ ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು ಉತ್ತಮ.

ಈಡಿಸ್ ಲಾರ್ವಾ ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಾರ್ವಜನಿಕರು ಸಹಕಾರಿಸುವುದರೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ನೀಡುವ ಸಲಹೆಗಳನ್ನು ಪಾಲಿಸಬೇಕು, ಸೊಳ್ಳೆಗಳು ಕಚ್ಚದಂತೆ ಮೈತುಂಬಾ ಬಟ್ಟೆಧರಿಸಬೇಕು ಎಂದು ಸಲಹೆ ನೀಡಿದರು.

ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದ ಜಿಲ್ಲಾಧಿಕಾರಿಯವರು ಮೀನುಗಾರಿಕೆ ಇಲಾಖೆಯಿಂದ ಬಂದರು ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿದ್ದು ಅಲ್ಲಿ ತಂಗಿರುವ ಬೋಟ್‍ಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತದೆ ಈ ಬಗ್ಗೆ ಬೋಟ್ ಮಾಲೀಕರು ಮತ್ತು ಮೀನುಗಾರರಿಗೆ ಕೀಟಜನ್ಯ ರೋಗ ನಿಯಂತ್ರಣದ ಮಾಹಿತಿ ನೀಡುವಂತೆ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರು ಶಾಲೆಗಳು ಪ್ರಾರಂಭವಾಗುವ ಮುನ್ನ ಶಾಲೆಗೆ ಭೇಟಿ ನೀಡಿ ಶಾಲೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರವನ್ನು ಶುಚಿಯಾಗಿಡಬೇಕು ಎಲ್ಲಿಯೂ ನೀರು ನಿಲ್ಲದಂತೆ, ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಾರದ ಹಾಗೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಜ್ವರ ಸಮೀಕ್ಷೆ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಭಾಗಿಯಾಗಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸತಿ ನಿಲಯ, ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಐ.ಆರ್.ಎಸ್ ಮಾಡಿಸಬೇಕು.

ಜಿಲ್ಲೆಯ ಕಲ್ಲುಕೋರೆಗಳ ಮಾಲೀಕರು ಕೀಟಜನ್ಯ ರೋಗ ನಿಯಂತ್ರಣ ಹಾಗೂ ಕೋರೆಗಳಲ್ಲಿ ಗಪ್ಪಿ ಮೀನುಗಳನ್ನು ಬಿಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಸೂಚನೆ ನೀಡಬೇಕು.

ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಕಾಮಗಾರಿಗಳಿಗೆ ಬಳಸುವ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಲೋಕೋಪಯೋಗಿ ಇಲಾಖೆಯವರು ಕ್ರಮ ವಹಿಸಬೇಕು ಎಂದವರು ಹೇಳಿದರು.

ವೈದ್ಯಕೀಯ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ ಮಲೇರಿಯಾ ರಕ್ತಲೇಪನ ಪರೀಕ್ಷೆ ನಡೆಸುವಂತೆ ಅವರು ಸೂಚಿಸಿದರು.

ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು, ವಾಕರಿಕೆ, ವಾಂತಿ, ಮೈಮೇಲೆ ಚಿಕ್ಕ ಚಿಕ್ಕ ಗುಳ್ಳೆಯ ಲಕ್ಷಣಗಳು ಕಂಡುಬಂದಲ್ಲಿ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಅವರು ತಿಳಿಸಿದರು.

ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕರು ಹಾಗೂ ಅಧೀಕ್ಷಕ ಡಾ. ಸದಾಶಿವ ಶಾನುಭೋಗ, ಲೇಡಿಘೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗ ಪ್ರಸಾದ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಹಾಗೂ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending