ದೇಶದೆಲ್ಲೆಡೆ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು, ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.15ರಂದು ಧ್ವಜಾರೋಹಣ ನೆರವೇರಿಸಿದರು.
ಮಂಗಳೂರು: ದೇಶದೆಲ್ಲೆಡೆ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು, ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.15ರಂದು ಧ್ವಜಾರೋಹಣ ನೆರವೇರಿಸಿದರು.
ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.
ಬಳಿಕ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ನಾಯಕರ ಆಶಯಗಳು, ಅವರ ಧ್ಯೇಯೋದ್ಧೇಶಗಳನ್ನು ಈಡೇರಿಸಲು ನಾವು ಪ್ರಯತ್ನಿಸೋಣ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸ್ವಾತಂತ್ರ್ಯ ಸಂಗ್ರಾಮದ ಅಡಿಗಲ್ಲು ನೂರಾರು ಮಂದಿಯ ತ್ಯಾಗ, ಬಲಿದಾನಗಳಿಂದ ಮೇಲೇರಿದೆ. ತುಳುನಾಡಿನ ಜನತೆ ಸ್ವಾತಂತ್ರ್ಯ ಹೋರಾಟದಲ್ಲೂ ಪ್ರಮುಖ ಸ್ಥಾನವಿದೆ.
ಉಳ್ಳಾಲದ ಅಬ್ಬಕ್ಕ ರಾಣಿ ಹೋರಾಟಕ್ಕೆ ಸ್ಪೂರ್ತಿ ನೀಡಿದ್ದಳು. ಅಮ್ಮೆಂಬಳ ಬಾಳಪ್ಪ, ದೇವಪ್ಪ ಸೇರಿದಂತೆ ಕಾರ್ಮಿಕ ಸಂಘಟನೆಗಳು ಇದರಲ್ಲಿ ಭಾಗವಹಿಸಿವೆ ಎಂದರು.
ಪೊಲೀಸ್, ಅಗ್ನಿಶಾಮಕ ದಳ, ಎನ್‌ಸಿಸಿ, ಸ್ಕೌಟ್ಸ್ ಗೈಡ್ಸ್ ಹೀಗೆ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಪೊಲೀಸ್ ವಾದ್ಯತಂಡದೊಂದಿಗೆ ಮುನ್ನಡೆಯಿತು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಮಂಗಳೂರು ಮೇಯರ್ ಜಯಾನಂದ ಅಂಚನ್, ಎಂಎಲ್‌ಸಿ ಹರೀಶ್ ಕುಮಾರ್, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಸರ್ವ ಪಕ್ಷದ ನಾಯಕರು, ಸಂಘಸಂಸ್ಥೆಗಳ ಪದಾಧಿಕಾರಿಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಜಿಲ್ಲಾಧೀಕಾರಿ ಮುಲೈಮುಹಿಲನ್, ನಗರ ಪೊಲೀಸ್ ಕಮಿಷನರ್ ಕುಲದೀಪ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.