Connect with us

    DAKSHINA KANNADA

    ಮಳೆ, ಪ್ರವಾಹಕ್ಕೆ ದ.ಕ. ಜಿಲ್ಲೆಯಲ್ಲಿ 167.73 ಕೋ.ರೂ ನಷ್ಟ..! 234 ಮಂದಿ ಸಂತ್ರಸ್ತರಿಗೆ ಆಶ್ರಯ-ಗುಂಡೂರಾವ್‌

    Published

    on

    ಮಂಗಳೂರು: ದ.ಕ ಜಿಲ್ಲೆಯಾದ್ಯಂತ ನೆರೆಹಾನಿ ಹಾಗೂ ಮಳೆಯಿಂದಾಗಿ ಅಪಾರ ನಷ್ಟ ಉಂಟಾಗಿದ್ದು ಈ ಪ್ರದೇಶಗಳಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ರವರು ಭೇಟಿ ನೀಡಿ ಹಾನಿಗೊಳಗಾದ ಪ್ರದೇಶಗಳನ್ನು ಆ.2ರಂದು ವೀಕ್ಷಣೆ ಮಾಡಿದ್ದಾರೆ.

    ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ಸುರಿದ ಭಾರೀ ಮಳೆ, ಗಾಳಿ ಮತ್ತು ಪ್ರವಾಹದಿಂದಾಗಿ ಇದುವರೆಗೆ ಒಟ್ಟು 167.73 ಕೋ.ರೂ. ನಷ್ಟವಾಗಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆ ಬಳಕೆಗಾಗಿ ಜಿಲ್ಲಾ ವಿಪತ್ತು ಪರಿಹಾರ ನಿಧಿಯಲ್ಲಿ 14.22 ಕೋ.ರೂ. ಹಾಗೂ ತಾಲೂಕುಗಳಲ್ಲಿ ಒಟ್ಟು 4.14 ಕೋ.ರೂ. ಲಭ್ಯವಿದೆ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಈವರೆಗೆ ಒಟ್ಟು 11 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ. 154 ಮನೆಗಳು ಸಂಪೂರ್ಣ ಹಾಗೂ 484 ಭಾಗಶಃ ಹಾನಿಗೀಡಾಗಿವೆ. 18 ಪ್ರಾಣಿಗಳು ಮೃತಪಟ್ಟಿವೆ ಎಂದರು. ಮಂಗಳೂರು, ಉಳ್ಳಾಲ ಹಾಗೂ ಕಡಬ ಸೇರಿದಂತೆ 3 ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಒಟ್ಟು 234 ಮಂದಿ ಸಂತ್ರಸ್ತರು ಆಶ್ರಯ ಪಡೆದಿದ್ದಾರೆ. ರಾಜ್ಯ ಸರಕಾರದ ಹೊಸ ಆದೇಶದ ಪ್ರಕಾರ ಪೂರ್ಣ ಹಾನಿಯಾದ ಮನೆಗಳಿಗೆ 1.20 ಲಕ್ಷ ರೂ. ಪರಿಹಾರದ ಜತೆಗೆ ದೇವರಾಜ್‌ ಅರಸು ವಸತಿ ಯೋಜನೆಯಡಿ ಹೆಚ್ಚುವರಿಯಾಗಿ 1.20 ಲಕ್ಷ ರೂ., ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ವರ್ಗಗಳಿಗೆ 1.50 ಲಕ್ಷ ರೂ. ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅನಧಿಕೃತ ಜಮೀನಿನಲ್ಲಿ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ಒಂದು ಬಾರಿ ಪರಿಹಾರವಾಗಿ 1 ಲಕ್ಷ ರೂ. ಒದಗಿಸಲಾಗುತ್ತದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ದುರಸ್ತಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 6,500 ರೂ.ಜತೆಗೆ ರಾಜ್ಯ ಸರಕಾರ ಹೆಚ್ಚುವರಿಯಾಗಿ 43,500 ರೂ. ಸೇರಿಸಿ ಒಟ್ಟು 50 ಸಾ. ರೂ. ಒದಗಿಸಲಿದೆ. ಪ್ರವಾಹದಿಂದ ಬಟ್ಟೆಬರೆ ಕಳೆದುಕೊಂಡರೆ 2,500 ರೂ., ಗೃಹೋಪಯೋಗಿ ವಸ್ತುಗಳು ಹಾನಿಯಾದರೆ 2,500 ರೂ.ಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದರು.

    ನೆರೆ ಪೀಡಿತ ಪ್ರದೇಶಕ್ಕೆ ಸಚಿವ ಗುಂಡೂರಾವ್ ಭೇಟಿ; ನೆರೆಗೆ ಶಾಶ್ವತ ಪರಿಹಾರದ ಭರವಸೆ

    ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್‌, ಡಿ.ಸಿ. ಮುಲ್ಲೆ„ ಮುಗಿಲನ್‌, ಜಿ.ಪಂ. ಸಿಇಒ ಡಾ| ಆನಂದ್‌, ಮೆಸ್ಕಾಂ ಎಂಡಿ ಪದ್ಮಾವತಿ, ಪಾಲಿಕೆ ಆಯುಕ್ತ ಆನಂದ್‌ ಉಪಸ್ಥಿತರಿದ್ದರು.

    ಸಚಿವರು ಮಂಗಳೂರಿನ ಅದ್ಯಪಾಡಿ, ಕೆತ್ತಿಕಲ್‌ಗ‌ುಡ್ಡೆ, ಬಂಟ್ವಾಳದ ಅಮ್ಮುಂಜೆ ಹೊಳೆ ಬದಿ, ಗೂಡಿನಬಳಿ, ಆಲಡ್ಕ, ನಾವೂರಿನ ಕಡವಿನ ಬಾಗಿಲು, ನೇತ್ರಾವತಿ ಸೇತುವೆ, ಅಣೆಜ ರಸ್ತೆ ಬದಿ, ಕಂಚಿಕಾರ ಪೇಟೆ ರಸ್ತೆ ಹಾನಿ ಪ್ರದೇಶ, ಅಜಿಲಮೊಗರು ಮಸೀದಿ, ಬೆಳ್ತಂಗಡಿಯ ಮಾಲಾಡಿ ಹಾಗೂ ಲಾಯಿಲಕ್ಕೆ ಭೇಟಿ ನೀಡಿದ ಸಚಿವರು ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡರು.

     

    DAKSHINA KANNADA

    ನೆಲ್ಯಾಡಿಯಲ್ಲಿ ವರುಣತಾಂಡವ ; 4 ಮನೆ, 2 ವಿದ್ಯುತ್ ಕಂಬಗಳಿಗೆ ಹಾನಿ

    Published

    on

    ಉಪ್ಪಿನಂಗಡಿ: ಕರಾವಳಿ ಭಾಗದಲ್ಲಿ ಮಳೆಗಾಲ ಜೂನ್ ತಿಂಗಳಿನಿಂದಲೇ ಆರಂಭವಾಗಿದೆ. ಆದರೆ ಮಳೆ ಮಾತ್ರ ಬೇಕೋ ಬೇಡವೋ ಎಂಬಂತೆ ಬರುತ್ತಿದೆ. ಇತ್ತ ಬಿಸಿಲಿದ್ದು, ಅತ್ತ ಕಣ್ಣು ಹಾಯಿಸುವಾಗ ಮಳೆ ಬರುತ್ತದೆ. ಯಾವ ಸಮಯದಲ್ಲಿ ಏನಾಗುವುದು ಎಂದು ಊಹಿಸಲೂ ಅಸಾದ್ಯ. ನಿನ್ನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯ ಜನತಾ ಕಾಲನಿ ಪರಿಸರದಲ್ಲಿ ಬೀಸಿದ ಭಾರೀ ಮಳೆಗೆ 4 ಮನೆಗಳ ಛಾವಣಿ ಹಾನಿಗೀಡಾಗಿ 2 ವಿದ್ಯುತ್ ಕಂಬಗಳು ಮುರಿದಿದೆ.

    ನೆಲ್ಯಾಡಿಯ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಬಳಿ ಇರುವ ಕಾಲನಿಯ ನಿವಾಸಿಗರಾದ ಐತ್ತಪ್ಪ, ಐಸುಬು, ಬಾಬು ಆಚಾರಿ, ಲೋಕೇಶ್ ಅವರ ಮನೆಯ ಮೇಲ್ಛಾವಣಿಯು ಗಾಳಿಯ ವೇಗಕ್ಕೆ ಸಿಲುಕಿ ಹಾನಗೀಡಾಗಿದ್ದು, ಸಮೀಪದಲ್ಲಿದ್ದ ಎರಡು ವಿದ್ಯುತ್ ಕಂಬಗಳು ಮುರಿದಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ , ಕಂದಾಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Continue Reading

    DAKSHINA KANNADA

    ಅಬ್ಬರದ ಹೆಜ್ಜೆಯಿಟ್ಟುಕೊಂಡು ಬರುತ್ತಿದೆ ”ಕಲ್ಜಿಗ”

    Published

    on

    ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್‌ನಡಿ ನಿರ್ಮಾಣಗೊಂಡಿರುವ “ಕಲ್ಜಿಗ” ಕನ್ನಡ ಸಿನಿಮಾ ಸೆ.13 ರಂದು ರಾಜ್ಯಾದಂತ್ಯ ತೆರೆಕಾಣಲಿದೆ. ಕುತೂಹಲಕಾರಿಯಾಗಿರುವ ಶೀರ್ಷಿಕೆಯಲ್ಲೇ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಿರುವ ಈ ಚಿತ್ರದ ಟ್ರೈಲರ್ ಭಾರತ್ ಮಾಲ್‌ನ ಭಾರತ್ ಸಿನಿಮಾಸ್ ನಲ್ಲಿ ಅನಾವರಣಗೊಂಡಿತ್ತು. ಚಿತ್ರದ ಟ್ರೈಲರ್ ಎ2 ಫಿಲ್ಮ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಬೆಡುಗಡೆಯಾಗಿದ್ದು, ಜನರಿಂದ ಅದ್ಬುತ ಪ್ತತಿಕ್ರಿಯೆ ದೊರಕಿದೆ ಎಂದು ನಿರ್ದೇಶಕ ಸುಮನ್ ಸುವರ್ಣ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.

    ಶರತ್ ಕುಮಾರ್ ಎ.ಕೆ ಈ ಚಿತ್ರದ ನಿರ್ಮಾಪಕರಾಗಿದ್ದಾರೆ. “ಕಲ್ಜಿಗ” ದ ಕಥೆ ಚಿತ್ರಕಥೆ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದು, ಹಂಸಲೇಖ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ನಟ ಅರ್ಜುನ್ ಕಾಪಿಕಾಡ್ ನಾಯಕನಾಗಿ ಹಾಗೂ ಸುಶ್ಮಿತಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ನಟರಾದ ಗೋಪಿನಾಥ್ ಭಟ್, ಜ್ಯೋತಿಷ್ ಶೆಟ್ಟಿ, ಮಾನಸಿ ಸುಧೀರ್, ವಿಜಯ್ ಶೋಭರಾಜ್ ಪಾವೂರ್, ಶ್ಲಾಘಾ ಸಾಲಿಗ್ರಾಮ ಮುಖ್ಯ ಭೂಮಿಕೆಯಲ್ಲಿದ್ದಾರೆ. ಪ್ರಸಾದ್ ಕೆ. ಶೆಟ್ಟಿ ಹಿನ್ನಲೆ ಸಂಗೀತ ನೀಡಿದ್ದಾರೆ.

    ಮಂಗಳೂರು, ಉಡುಪಿ ಸುತ್ತಮುತ್ತಲಿನ ಪ್ರದೆಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸೆ. 13 ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಡಿಕೇರಿ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಮುಂಬಾಯಿ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಟ್ರೈಲರನ್ನು 14 ಲಕ್ಷಕ್ಕಿಂತಲೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಮಂಗಳೂರು ಕನ್ನಡ ಭಾಷಾ ಶೈಲಿಯಲ್ಲಿ ಚಿತ್ರ ತಯಾರಾಗಿದೆ. ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ಬಳಿಕ ಘಟಿಸುವ ರೋಚಕ ಕಥನ “ಕಲ್ಜಿಗ”ದಲ್ಲಿದೆ. ಸಚಿನ್ ಶಟ್ಟಿ ಛಾಯಗ್ರಹಣ, ಯಶ್ವಿನ್ ಕೆ. ಶೆಟ್ಟಿಗಾರ್‌ನ ಸಂಕಲನ ಈ ಚಿತ್ರಕ್ಕಿದೆ. ಕಾಂತಾರ ಖ್ಯಾತಿಯ ಸನಲ್ ಗುರು ಕ್ರಿಯೇಟಿವ್ ಹೆಡ್ ಆಗಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ರಾಧಾಕೃಷ್ಣ ಮಾಣಿಲ, ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಂದೀಪ್ ಶೆಟ್ಟಿ ಇದ್ದಾರೆ. ಗಿರ್ಗಿಟ್, ಸರ್ಕಸ್, ಗಮ್ಜಾಲ್ ಚಿತ್ರಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದ ಸುಮನ್ ಸುವರ್ಣ “ಕಲ್ಜಿಗ” ದ ಮೂಲಕ ಸ್ವತಂತ್ರ್ಯ ನಿರ್ದೇಶಕರಾಗಿದ್ದಾರೆ.

    Continue Reading

    DAKSHINA KANNADA

    ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಗೆ ಗೌರವ ಡಾಕ್ಟರೇಟ್ ಪ್ರದಾನ

    Published

    on

    ಮಂಗಳೂರು : ಕರಾವಳಿ ಮೂಲದ ಕನ್ನಡ ಚಲನ ಚಿತ್ರ ರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ.

    ಬೆಂಗಳೂರು ವಿವಿಯು ಈ ಗೌರವ ಡಾಕ್ಟರೇಟ್ ನೀಡಿ ಗುರುಕಿರಣ್ ಅವರನ್ನು ನೀಡಿ ಗೌರವಿಸಿದೆ. ಸೆಪ್ಟಂಬರ್ 10 ರಂದು ನಡೆದಿದ್ದ ವಿವಿ ಘಟಿಕೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

    ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಬೆಂಗಳೂರು ವಿವಿಯ ಈ ಪ್ರಶಸ್ತಿಯಿಂದ  ಗುರು ಕಿರಣ್ ಇನ್ನು ಮುಂದೆ ಡಾಕ್ಟರ್ ಗುರುಕಿರಣ್ ಆಗಲಿದ್ದಾರೆ.

    Continue Reading

    LATEST NEWS

    Trending