Connect with us

    DAKSHINA KANNADA

    ದ.ಕ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನಿಲುವು ಅವೈಜ್ಞಾನಿಕ, ಖಂಡನೀಯ-ಮುನೀರ್ ಕಾಟಿಪಳ್ಳ

    Published

    on

    ಮಂಗಳೂರು: ‘ಇದೀಗ ಮುಚ್ಚಲಾಗಿರುವ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕವನ್ನು ಹೆಜಮಾಡಿ ನವಯುಗ್ ಟೋಲ್ ಪ್ಲಾಜಾದಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶದ ಕುರಿತು ಉಡುಪಿ ಜಿಲ್ಲಾಡಳಿತ ನಡೆಸಿದ ಸಭೆಯ ತೀರ್ಮಾನದ ಕುರಿತಂತೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರು ನೀಡಿರುವ ಮಾಹಿತಿ ಕುರಿತು ಹೋರಾಟ ಸಮಿತಿ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುತ್ತದೆ’ ಎಂದು ಟೋಲ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.


    ಹೆಜಮಾಡಿ ಟೋಲ್ ಗೇಟ್ ನಲ್ಲಿ ಉಡುಪಿ ನೊಂದಾವಣೆಯ ಕೆ ಎ 20 ವಾಹನಗಳಿಗೆ ಮಾತ್ರ ಸುರತ್ಕಲ್ ಟೋಲ್ ಸುಂಕದಿಂದ ಪೂರ್ಣ ವಿನಾಯತಿ ಕೊಡಬೇಕು, ಆ ವಾಹನಗಳ ಓಡಾಟಕ್ಕೆ ಪ್ರತ್ಯೇಕ ಲೇನ್ ನಿರ್ಮಿಸಬೇಕು ಎಂಬ ಪ್ರಸ್ತಾವನೆ ಅವೈಜ್ಞಾನಿಕ ಮಾತ್ರ ಅಲ್ಲ. ತೀವ್ರವಾದ ತಾರತಮ್ಯದಿಂದ ಕೂಡಿದೆ.

    ಸುರತ್ಕಲ್ ಅಕ್ರಮ ಟೋಲ್ ಸುಂಕವನ್ನು ಉಡುಪಿ, ದ.ಕ ವಾಹನಗಳು ಮಾತ್ರವಲ್ಲ, ಹೆಜಮಾಡಿ ಟೋಲ್ ಪ್ಲಾಜಾ ದಾಟುವ ಯಾವುದೇ ರಾಜ್ಯಗಳ ವಾಹನಗಳಿಂದ ಸಂಗ್ರಹಿಸಿದರೂ ಅದು ಸುಲಿಗೆಯೇ ಆಗುತ್ತದೆ. ಸುರತ್ಕಲ್ ನಲ್ಲಿ ಮಂಗಳೂರು ನೊಂದಾವಣೆಯ ಖಾಸಗಿ ವಾಹನಗಳಿಗೆ ಉಚಿತ ಓಡಾಟದ ಅವಕಾಶ ಇದ್ದರೂ ಟೋಲ್ ಸುಲಿಗೆಯ ವಿರುದ್ದ ಹೋರಾಟ ನಡೆಸಿರುವುದು ಇಂತಹ ವಿಶಾಲ ಮನೋಭಾವದಿಂದ, ನ್ಯಾಯಪ್ರಜ್ಞೆಯಿಂದ‌. ಇದು ಬಿಜೆಪಿ ಜನಪ್ರತಿನಿಧಿಗಳಿಗೆ, ಉಡುಪಿ ಜಿಲ್ಲಾಡಳಿತಕ್ಕೆ ಅರ್ಥ ಆಗದಿರುವುದು ದುರದೃಷ್ಟಕರ.

    ಮಾನ್ಯ ಸುನಿಲ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು. ಅವರಿಗೆ ದಕ್ಷಿಣ ಕ‌ನ್ನಡ ಜಿಲ್ಲೆಯ ಜನತೆಯ, ಆಡಳಿತದ ಹಿತಾಸಕ್ತಿಗಳನ್ನು ಎತ್ತಿಹಿಡಿಯುವ ಕರ್ತವ್ಯ ಇದೆ.

    ಹಾಗಿರುತ್ತಾ ಅವರು ಉಡುಪಿ ಜಿಲ್ಲಾಡಳಿತದ ಸಭೆಯಲ್ಲಿ ಭಾಗಿಯಾಗಿ ಮಂಗಳೂರು ವಾಹನಗಳ ಹಿತಾಸಕ್ತಿಯನ್ನು ಕಡೆಗಣಿಸಿರುವುದು, ಉಚಿತ ಪ್ರಯಾಣದ ಅವಕಾಶವನ್ನು ನಿರಾಕರಿಸಿರುವುದು ಖಂಡನೀಯ. ಆ ಮೂಲಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಉಡಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಾನ್ಯ ಅಂಗಾರ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರೂ ಈ ಚರ್ಚೆಗಳ ಸಂದರ್ಭ ಮೂಕ ಪ್ರೇಕ್ಷಕರಾಗಿದ್ದದ್ದು ದುರದೃಷ್ಟಕರ.

    ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವು ಸಂಬಂಧ ಹೆದ್ದಾರಿ ಪ್ರಾಧಿಕಾರದ ಮಹತ್ವದ ಸಭೆ ಅಕ್ಟೋಬರ್ 14, 2022 ರಂದು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು.

    ಆ ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಎಮ್ ಕೆ ವತಾರೆ ಸ್ವತಹ ಭಾಗಿಯಾಗಿದ್ದರು. ವಿಲೀನದ ಕುರಿತು ನಿರ್ಣಾಯಕ ಪ್ರಸ್ಥಾಪಗಳು ಆ ಸಭೆಯಲ್ಲಿ ತೀರ್ಮಾನಗೊಂಡಿದ್ದವು.

    ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ, ಸುರತ್ಕಲ್ ಟೋಲ್ ನಿಂದ ಅತಿ ಹೆಚ್ಚು ಭಾದಿತ ಉಡುಪಿ ಜಿಲ್ಲೆಗೆ ಸೇರಿದ ಶಾಸಕರಾಗಿ ಸುನಿಲ್ ಕುಮಾರ್ ಆ ಸಭೆಯಲ್ಲಿ ಭಾಗಿಯಾಗದಿರುವುದು, ಜಿಲ್ಲೆಯ ಉಳಿದ ಶಾಸಕರು ಭಾಗವಹಿಸುವಂತೆ ಮಾಡದಿರುವುದು ಯಾಕೆ ?

    ಅಂದಿನ ಸಭೆಯಲ್ಲಿ ಉಸ್ತುವಾರಿ ಸಚಿವರು ಭಾಗಿಗಳಾಗಿದ್ದರೆ ಸಭೆಯ ಅಧ್ಯಕ್ಷತೆ ಸುನಿಲ್ ಕುಮಾರ್ ಅವರದ್ದೇ ಆಗಿರುತ್ತಿತ್ತು ಅಲ್ಲವೇ? ಅಂದು ಸಭೆಯಲ್ಲಿ ಭಾಗಿಗಳಾಗಿದ್ದರೆ ಈಗ ಅವೈಜ್ಞಾನಿಕ ಎಂದು ಹೇಳುವ ತೀರ್ಮಾನಕ್ಕೆ ಆಗಲೆ ತಡೆ ಬೀಳುತ್ತಿತ್ತು.

    ಅಕ್ಟೋಬರ್ 17 ರಂದು ಮುಕ್ಕ, ಬಿಸಿ ರೋಡ್ ಹೆದ್ದಾರಿ ನಿರ್ಮಾಣಕ್ಕೆ ಹಣಕಾಸು ಒದಗಿಸಿರುವ ಬ್ಯಾಂಕರ್ ಗಳ ಸಭೆ ಮಂಗಳೂರಿನಲ್ಲಿ ನಡೆದಿತ್ತು. ಆಗಲೂ ಉಸ್ತುವಾರಿ ಸಚಿವರಾದ ಮಾನ್ಯ ಸು‌ನಿಲ್ ಕುಮಾರ್ ಸಭೆಯಲ್ಲಿ ಭಾಗಿಯಾಗಿ ವಿವರಗಳನ್ನು ಪಡೆದುಕೊಳ್ಳದಿದ್ದದ್ದು ಯಾಕೆ ?

    ಈ ಎಲ್ಲಾ ಸಭೆಗಳ ನಡಾವಳಿ, ಪ್ರಸ್ತಾವನೆಗಳ ಆಧಾರದಲ್ಲಿ ಹೆದ್ದಾರಿ ಪ್ರಾಧಿಕಾರವು ಹೆಜಮಾಡಿ ನವಯುಗ್ ಟೋಲ್ ಗೇಟ್ ನೊಂದಿಗೆ ವಿಲೀನ ಹಾಗೂ ಪರಿಷ್ಕೃತ ದರಪಟ್ಟಿಯೊಂದಿಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕಳುಹಿಸಿಕೊಟ್ಟಿತ್ತು.

    ಆ ಪ್ರಸ್ತಾವನೆಯ ಕುರಿತು ತೀರ್ಮಾನ ಕೈಗೊಳ್ಳಲು ಅಕ್ಟೋಬರ್ 28 ರಂದು ರಾಜ್ಯ ಸರಕಾರ ಬೆಂಗಳೂರಿನಲ್ಲಿ ಹೆದ್ದಾರಿ ಪ್ರಾಧಿಕಾರದ ಸಭೆ ನಡೆಸಿ ಯಾವುದೇ ತಕರಾರು, ಅಕ್ಷೇಪಗಳನ್ನು ಎತ್ತದೆ ಪ್ರಸ್ತಾವನೆಗೆ ಅನುಮೋದನೆಯನ್ನು ನೀಡಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುದೊಡ್ಡ ಸಮಸ್ಯೆಯ ಕುರಿತಾದ ರಾಜ್ಯ ಸರಕಾರದ ಮಟ್ಟದ ಸಭೆ ನಡೆಯುವಾಗ ಸಂಪುಟ ದರ್ಜೆಯ ಸಚಿವರಾಗಿ, ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುನಿಲ್ ಕುಮಾರ್ ಅವರ ಪಾತ್ರ ಏನಿತ್ತು ? ಸಭೆ ನಡೆಯುವ ಮಾಹಿತಿಯೇ ಅವರಿಗೆ ಇರಲಿಲ್ಲವೆ ?

    ಈ ಎಲ್ಲಾ ಸಂದರ್ಭದಲ್ಲಿ ತಮಗೂ, ಸುರತ್ಕಲ್ ಅಕ್ರಮ ಟೋಲ್ ಗೇಟ್ ಸಮಸ್ಯೆಗೂ ಯಾವುದೇ ಸಂಬಂಧ ಇಲ್ಲ ಎಂದು ಮೌನ ವಹಿಸಿದ್ದು ಈಗ ತಾವು ಹೇಳುತ್ತಿರುವ “ಅವೈಜ್ಞಾನಿಕ” ಎಂಬ ಆದೇಶಗಳು ಹೊರಡಲು ಕಾರಣವಲ್ಲವೆ ?

    ಇನ್ನು ಸುರತ್ಕಲ್ ಟೋಲ್ ಸುಂಕದ ಬಾಕಿ ಮೊತ್ತ ಸಂಗ್ರಹಕ್ಕೆ ತಾವು ಸೂಚಿಸುತ್ತಿರುವ “ಮೂರು ಟೋಲ್ ಗೇಟ್ ಗಳಲ್ಲಿ ಹಂಚಿಕೆ ಮಾಡಿ ಸಂಗ್ರಹಿಸುವ” ಪರಿಹಾರವೇ ಅವೈಜ್ಞಾನಿಕತೆಯಿಂದ ಕೂಡಿದೆ ಮಾನ್ಯ ಸುನಿಲ್ ಕುಮಾರ್ ಅವರೆ.

    ಮಂಜೇಶ್ವರ ಭಾಗದಿಂದ ಮಂಗಳೂರು ಕಡೆಗೆ ತೆರಳುವ 90 ಶೇಕಡಾ ವಾಹನಗಳು ನಂತೂರು ಸುರತ್ಕಲ್ ರಸ್ತೆಯನ್ನು ಪ್ರವೇಶಿಸುವುದಿಲ್ಲ, ಹಾಗೆಯೆ ಮಂಗಳೂರು, ತೊಕ್ಕೊಟು ಭಾಗದಿಂದ ತಲಪಾಡಿ ಟೋಲ್ ಗೇಟ್ ದಾಟುವ ವಾಹನಗಳು ನಂತೂರು, ಸುರತ್ಕಲ್ ರಸ್ತೆಯನ್ನು ಬಳಸಿರುವುದಿಲ್ಲ. ಬಿಸಿ ರೋಡ್ ನಲ್ಲಿರುವ ಬ್ರಹ್ಮರ ಕೂಟ್ಲು ಟೋಲ್ ಗೇಟ್ ದಾಟುವ ವಾಹನಗಳ ಸ್ಥಿತಿಯೂ ಸರಾಸಾರಿ ಹೀಗೆಯೆ ಇದೆ.

    ನಿಮ್ಮ ಹಂಚಿಕೆ ನೀತಿಯನ್ನು ಹೆದ್ದಾರಿ ಪ್ರಾಧಿಕಾರ ಒಪ್ಪಿಕೊಂಡರೆ ಈ ವಾಹನ ಸವಾರರು ತಾವು ಬಳಸದೇ ಇರುವ ಸುರತ್ಕಲ್, ನಂತೂರು ರಸ್ತೆಗೆ ಅನ್ಯಾಯವಾಗಿ ಬ್ರಹ್ಮರ ಕೂಟ್ಲು, ತಲಪಾಡಿ ಟೋಲ್ ಪ್ಲಾಜಾದಲ್ಲಿ ಹೆಚ್ಚುವರಿ ಸುಂಕ ಕಟ್ಟಬೇಕಾಗುತ್ತದೆ.

    ಇದು ಅವೈಜ್ಞಾನಿಕ ಮಾತ್ರ ಅಲ್ಲ, ಬಲವಂತದ ಸುಲಿಗೆಯೂ ಆಗುತ್ತದೆ ಎಂಬುದನ್ನು ತಮ್ಮ ಗಮನಕ್ಕೆ ತರುತ್ತಿದ್ದೇವೆ.

    ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಇರುವುದು ಒಂದೇ ದಾರಿ. ತಪ್ಪು ಮಾಡಿರುವುದು ಅಕ್ರಮ ಟೋಲ್ ಗೇಟ್ ಹಾಕಿರುವ ಹೆದ್ದಾರಿ ಪ್ರಾಧಿಕಾರ. ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಸರಕಾರ ಸೇರಿಕೊಂಡು ತಾವು ಹೇಳುತ್ತಿರುವ ಕೆಲವು ಕೋಟಿ ರೂಪಾಯಿ ಉಳಿಕೆ ಮೊತ್ತವನ್ನು ಭರಿಸುವುದು, ನಂತೂರು, ಸುರತ್ಕಲ್ ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆ ಎಂದು ಘೋಷಿಸುವುದು’ ಎಂದು ಹೇಳಿದ್ದಾರೆ.

     

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending