Monday, January 24, 2022

ಸಾಗರಮಾಲಾ ಯೋಜನೆಯಡಿ ಜಿಲ್ಲೆಗೆ 880 ಕೋಟಿ ರೂ. ಅನುದಾನಕ್ಕೆ ಮನವಿ ಮಾಡಿದ ಸಂಸದ ನಳಿನ್

ಮಂಗಳೂರು: ಸಾಗರಮಾಲಾ ಯೋಜನೆಯಡಿ ಸುಮಾರು ರೂಪಾಯಿ 880 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಮೋದಿಸುವಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಜಲ ಸಾರಿಗೆ ಮಂತ್ರಿ ಸರ್ಬಾನಂದ ಸೋನೋವಾಲ್‌ರಿಗೆ ವಿನಂತಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂದರು, ಜಲಾಯಾನ, ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಕ್ಷೇತ್ರಗಳನ್ನು ಒಳಗೊಂಡಂತೆ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು

ಸಾಗರಮಾಲಾ ಯೋಜನೆಯಡಿ ಸುಮಾರು ರೂಪಾಯಿ 880 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಮೋದಿಸುವಂತೆ

ಕೇಂದ್ರ ಬಂದರು ಹಾಗೂ ಜಲ ಸಾರಿಗೆ ಮಂತ್ರಿ  ಸರ್ಬಾನಂದ ಸೋನೋವಾಲ್ ಇವರನ್ನು  ದಕ್ಷಿಣ ಕನ್ನಡ ಸಂಸದ  ನಳಿನ್ ಕುಮಾರ್ ಕಟೀಲು ಮನವಿ ಮಾಡಿದ್ದಾರೆ.

ಇದಕ್ಕೆ ಸ್ಪಂದಿಸಿರುವ ಮಾನ್ಯ ಕೇಂದ್ರ ಸಚಿವರು ಲಕ್ಷದ್ವೀಪಕ್ಕೆ ಮೀಸಲಾದ ಜೆಟ್ಟಿ, ಕಾರ್ಗೋ ಹಾಗೂ ಕ್ರೂಸ್ ಟರ್ಮಿನಲ್ ನಿರ್ಮಾಣ ಯೋಜನೆಗೆ ರೂ. 350.00 ಕೋಟಿ, ಹಳೆ ಮಂಗಳೂರು ಬಂದರು ಸಂಪರ್ಕ ರಸ್ತೆಗೆ ರೂ.98.00 ಕೋಟಿ, ಗುರುಪುರ ನದಿಯ ನಡುಗಡ್ಡೆಗಳ ಅಭಿವೃದ್ಧಿಗೆ ರೂ. 30.50 ಕೋಟಿ

ಹಾಗೂ ಬಹು ಉಪಯೋಗಿ ಹಾರ್ಬರ್ ನಿರ್ಮಾಣಕ್ಕೆ ರೂ.100.00 ಕೋಟಿ, ಬೆಂಗ್ರೆಯಲ್ಲಿ ಬೀಚ್ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ರೂ. 10.00 ಕೋಟಿ, ಮತ್ತು ತೇಲುವ ಜೆಟ್ಟಿ ಅಳವಡಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗೆ ರೂ.10.68 ಕೋಟಿ,

ನೇತ್ರಾವತಿ ಹಾಗೂ ಗುರುಪುರ ನದಿಗಳಲ್ಲಿ ವಾಟರ್ ವೇ ಅಭಿವೃದ್ಧಿ ಯೋಜನೆಗೆ ರೂ. 280.58 ಕೋಟಿ ಅನುದಾನವನ್ನು ಶೀಘ್ರವಾಗಿ  ನೀಡುವುದಾಗಿ ಭರವಸೆ ನೀಡಿದ್ದಾರೆ.

Hot Topics

ಕುಂಪಲ: ಪ್ರಯಾಣಿಕರನ್ನು ಇಳಿಸುವ ವೇಳೆ ಖಾಸಗಿ ಸಿಟಿ ಬಸ್‌ಗಳ ಢಿಕ್ಕಿ

ಮಂಗಳೂರು: ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್‌ಗೆ ಮತ್ತೊಂದು ಬಸ್‌ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ಇಂದು ನಡೆದಿದೆ.ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ...

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ...