Connect with us

    DAKSHINA KANNADA

    ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಮೂವರ ಅವಿರೋಧ ಆಯ್ಕೆ

    Published

    on

    ಮಂಗಳೂರು: ದ.ಕ‌‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಗೆ ಫೆ.27 ರಂದು ನಡೆಯುವ ಚುನಾವಣೆಗೆ ನಾಮಪತ್ರ ಹಿಂಪಡೆಯುವ ಸಮಯ ಕಳೆದಾಗ 22 ಸ್ಥಾನಕ್ಕೆ 37 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.


    ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿಕಾರಿ ಸ್ಥಾನಕ್ಕೆ ಬಿ.ಎನ್.ಪುಷ್ಪರಾಜ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ಜಗನ್ನಾಥ ಶೆಟ್ಟಿ ಬಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಕೋಶಾಧಿಕಾರಿ ಹಾಗು ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಈ 3 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.

    ಪ್ರಧಾ‌ನ ಕಾರ್ಯದರ್ಶಿ ಒಂದು ಹುದ್ದೆಗೆ 2 ಅಭ್ಯರ್ಥಿಗಳು, 3 ಉಪಾಧ್ಯಕ್ಷ ಸ್ಥಾನಕ್ಕೆ 6 ಅಭ್ಯರ್ಥಿಗಳು, 3 ಕಾರ್ಯದರ್ಶಿ ಸ್ಥಾನಕ್ಕೆ 6 ಅಭ್ಯರ್ಥಿಗಳು, 15 ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ 23 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

    ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಇಬ್ರಾಹಿಂ ಅಡ್ಕಸ್ಥಳ ಮತ್ತು ಜಿತೇಂದ್ರ ಕುಂದೇಶ್ವರ ಕಣದಲ್ಲಿದ್ದಾರೆ.
    ಉಪಾಧ್ಯಕ್ಷ ಸ್ಥಾನಕ್ಕೆ ರವಿಚಂದ್ರ ಭಟ್ (ಆರ್.ಸಿ.ಭಟ್), ಹರೀಶ್ ಮಾಂಬಾಡಿ, ರಾಜೇಶ್ ಪೂಜಾರಿ, ಭಾಸ್ಕರ ರೈ ಕಟ್ಟ, ಆತ್ಮಭೂಷಣ್ ಭಟ್, ಅನ್ಸಾರ್ ಇನೋಳಿ ಅಭ್ಯರ್ಥಿಗಳಾಗಿದ್ದಾರೆ.

    ಕಾರ್ಯದರ್ಶಿ ಸ್ಥಾನಕ್ಕೆ ಗಂಗಾಧರ ಕಲ್ಲಪಳ್ಳಿ ಸುಳ್ಯ ವಿಜಯ್ ಕೋಟ್ಯಾನ್ ಪಡು, ಹರೀಶ್ ಮೋಟುಕಾನ, ಭುವನೇಶ್ವರ ಗೇರುಕಟ್ಟೆ, ಸಿದ್ದಿಕ್ ನೀರಾಜೆ, ಶರತ್ ಶೆಟ್ಟಿ ಕಣದಲ್ಲಿದ್ದಾರೆ.

    ಕಾರ್ಯಕಾರಿ ಸಮಿತಿ ಸದಸ್ಯರ 15 ಸ್ಥಾನಕ್ಕೆ 23 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

    ಅಶೋಕ್ ಶೆಟ್ಟಿ ಬಿ.ಎನ್, ರಾಜೇಶ್ ಕುಮಾರ್ ದಡ್ಡಂಗಡಿ, ಸತೀಶ್ ಇರಾ, ಲೋಕೇಶ್ ಪೆರ್ಲಂಪಾಡಿ, ಹಿಲರಿ ಕ್ರಾಸ್ತಾ ಪಿ, ರಾಜೇಶ್ ಶೆಟ್ಟಿ, ಮೋಹನ್ ಕುತ್ತಾರ್, ಭರತ್ ರಾಜ್, ಸತ್ಯವತಿ, ನರೇಂದ್ರ ಕೆರೆಕಾಡು, ನಿಶಾಂತ್ ಶೆಟ್ಟಿ ಕಿಲೆಂಬೂರು, ನವೀನ್‌ಕುಮಾರ್ ಶೆಟ್ಟಿ, ಸಂದೇಶ್ ಜಾರ,

    ಶೇಕ್ ಜೈನುದ್ದೀನ್ ಪುತ್ತೂರು, ಮಹಮ್ಮದ್ ಆರಿಫ್ ಪಡುಬಿದ್ರೆ, ದೇವಿಪ್ರಸಾದ್ ಬೆಳ್ತಂಗಡಿ, ಸುಖ್‌ಪಾಲ್ ಪೊಳಲಿ, ಶ್ರವಣ್‌ಕುಮಾರ್ ನಾಳ, ವಿಲ್ಫ್‌ರ್ಡ್ ಡಿಸೋಜ, ಗಿರೀಶ್ ಅಡ್ಪಂಗಾಯ ಸುಳ್ಯ, ವಿಧ್ಯಾಧರ ಶೆಟ್ಟಿ, ಹರೀಶ್ ಕುಲ್ಕುಂದ, ವಿನಯಕೃಷ್ಣ ಪಿ ಅಭ್ಯರ್ಥಿಗಳಾಗಿ ಅಂತಿಮ ಕಣದಲ್ಲಿದ್ದಾರೆ.

    BIG BOSS

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಂಚು ರೂಪಿಸುತ್ತಿದ್ದಾಗಲೇ ಅರೆಸ್ಟ್‌

    Published

    on

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.

    ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್‌ನನ್ನು ಬಂಧಿಸಲು ಮುಂದಾಗಿದೆ.

    ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್‌ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

    ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .

    Continue Reading

    BIG BOSS

    ಕೊಣಾಜೆ: 3 ವರ್ಷದ ಬಾಲೆಗೆ ಕಿ*ರುಕುಳ ನೀಡಿದ 70ರ ಅಜ್ಜ ಅರೆಸ್ಟ್

    Published

    on

    ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ,‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.

    ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ

    Published

    on

    ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.

    ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.

    ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending