Connect with us

DAKSHINA KANNADA

‘ಪುತ್ತೂರ್ದ ಮುತ್ತು’ ಸದಾನಂದ ಗೌಡರ ರಾಜಕೀಯ ಜೀವನದ ಅಂತ್ಯ..!?

Published

on

ಮಂಗಳೂರು: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದೆ. ಈ ಮೂಲಕ ಶಾಸಕ ಸ್ಥಾನದಿಂದ ಮುಖ್ಯಮಂತ್ರಿ ಗಾದಿಯಿಂದ ಕೇಂದ್ರ ಸಚಿವ ಸ್ಥಾನ ಅಲಂಕರಿಸಿದ ಡಿ.ವಿ ಸದಾನಂದ ಗೌಡ ಇಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಜಕೀಯ ವನವಾಸದತ್ತ ತೆರಳುವ ಮುನ್ಸೂಚನೆ ನೀಡಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ 1994ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿದ ಅವರು ಎರಡನೆ ಅವಧಿಗೆ ರಾಜ್ಯ ವಿರೋಧಪಕ್ಷದ ಉಪನಾಯಕನಾದರು ನಂತರ ವಿವಿಧ ಹುದ್ದೆಗಳನ್ನು ಅಲಂಕರಿಸಿದ ಅವರು 2004ರಲ್ಲಿ ವೀರಪ್ಪ ಮೊಯ್ಲಿ ಅವರನ್ನು ಸೋಲಿಸಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸಿದರು. ನಂತರ ಉಡುಪಿ-ಚಿಕ್ಕಮಗಳೂರು ಸಂಸತ್‌ ಕ್ಷೇತ್ರದಿಂದ ಗೆದ್ದು ಬೀಗಿದರು. 2006ರಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದರು.

2011ರಲ್ಲಿ ಬದಲಾದ ರಾಜಕೀಯದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜೈಲಿಗೆ ಹೋದರು. ಈ ವೇಳೆ ಅನಂತಕುಮಾರ್‌ ಮುಖ್ಯಮಂತ್ರಿಯಾಗಲು ಭಾರೀ ಲಾಭಿ ನಡೆಸಿದರೂ ಯಡಿಯೂರಪ್ಪ ಅವರು ಸದಾನಂದ ಗೌಡ ಅವರನ್ನೇ ಸಿಎಂ ಮಾಡಬೇಕು ಎಂದು ಪಟ್ಟು ಹಿಡಿದು ಸಿಎಂ ಖುರ್ಚಿ ಕೊಟ್ಟುಬಿಟ್ಟರು. ಅದು ಅವರ ಅದೃಷ್ಟದ ಫಲ. ಅದರೆ ಯಾರು ಮುಖ್ಯಮಂತ್ರಿ ಗಾದಿಯಲ್ಲಿ ಕುಳ್ಳಿರಿಸಿದರೋ ಅವರ ಮುಂದೇಯೇ ಡಿವಿಎಸ್‌ ವಿಲನ್‌ ಆದರು. ಆ ಕಾರಣಕ್ಕಾಗಿಯೇ ಒಂದೇ ವರ್ಷದಲ್ಲಿ ಸಿಎಂ ಖುರ್ಚಿ ಬಿಟ್ಟುಕೊಟ್ಟರು.

ನಂತರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತು ಸುಣ್ಣವಾಯಿತು. ಈ ವೇಳೆ ವಿಧಾನಪರಿಷತ್‌ನ ವಿರೋಧಪಕ್ಷದ ನಾಯಕನಾದರು. ನಂತರ 2014ರಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಗೆದ್ದರು. ಕೇಂದ್ರದ ದಿವಂಗತ ಅರುಣ್ ಜೇಟ್ಲಿ ಅವರ ‘ಬ್ಲೂಐಡ್‌ ಬಾಯ್‌’ ಆಗಿ ಕಾಣಿಸಿಕೊಂಡಿದ್ದರು. ಈ ವೇಳೆ ಕೇಂದ್ರದಲ್ಲಿ ಹಿರಿಯರಾಗಿದ್ದ ಮತ್ತು ಹೆಚ್ಚು ಪ್ರಭಾವಿಯಾಗಿದ್ದ ದಿ.ಅನಂತಕುಮಾರ್‌ ಅವರನ್ನು ಹಿಂದಿಕ್ಕಿದ್ದರು. ಈ ವೇಳೆ ಅನಂತಕುಮಾರ್‌ ಅವರಿಗಿಂತ ಮೊದಲು ಅಂದರೆ 6ನೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜೊತೆಗೆ ಅತ್ಯಂತ ಪ್ರಭಾವಿ ಖಾತೆಯಾದ ರೈಲ್ವೇ ಖಾತೆಯನ್ನು ಪಡೆದಿದ್ದರು. ಆದರೆ ರೈಲ್ವೇ ಖಾತೆಯಲ್ಲಿ ಸಮರ್ಪಕವಾಗಿ ಕೆಲಸ ನಿರ್ವಹಿಸದ ಕಾರಣ ಯೋಜನಾ ಮತ್ತು ಸಾಂಖ್ಯಿಕ ಖಾತೆಗೆ ವರ್ಗಾವಣೆಯಾಗುತ್ತಾರೆ.

2018ರಲ್ಲಿ ಅನಂತಕುಮಾರ್‌ ಅವರ ನಿಧನದ ನಂತರ ಅನಂಕುಮಾರ್‌ ಅವರ ಕೇಂದ್ರ ರಸಗೊಬ್ಬರ ಖಾತೆ ನಿರ್ವಹಿಸಿದರು. ಆದರೆ ಈ ಎಲ್ಲಾ ಖಾತೆಗಳಲ್ಲಿ ನಿರೀಕ್ಷೆಯನ್ನು ತಲುಪಲಿಲ್ಲ ಎಂಬ ಕಾರಣದಿಂದ ಅವರಿಗೆ ಸಚಿವ ಸ್ಥಾನದಿಂದ ಕೊಕ್‌ ನೀಡಲಾಗಿದೆ. ಈವರೆಗೂ ರಾಜ್ಯ ಹಾಗೂ ಕೇಂದ್ರದಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಈ ಮೂಲಕ ಮೋದಿ ಅವರ ಮುನಿಸಿಗೆ ಕಾರಣವಾಗಿದ್ದಾರೆ. ಇಷ್ಟೆಲ್ಲಾ ಕಾರಣದಿಂದ ಅವರ ರಾಜಕೀಯ ಜೀವನ ಅಂತ್ಯವಾಯಿತೆ ಎಂಬ ಪ್ರಶ್ನೆ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

DAKSHINA KANNADA

ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

Published

on

ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Continue Reading

DAKSHINA KANNADA

15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!

Published

on

ಮಂಗಳೂರು ( ಜಾರ್ಖಂಡ್‌ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು ಜಾರ್ಖಂಡ್‌ನಲ್ಲಿ ನಡೆದ ಘಟನೆಯಾಗಿದ್ದು, ಹತ್ತು ಸಾವಿರ ಲಂಚ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಇಡಿ  ಸಾಮಾನ್ಯ ನೌಕರನ ಮನಗೆ ದಾಳಿ ಮಾಡಿತ್ತು. ಅಲ್ಲಿ ಅಡಗಿಸಿಟ್ಟಿದ್ದ ಹಣ ನೋಡಿ ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಣ ಎಣಿಸಲು ಮೆಷಿನ್ ಹಾಗೂ ಹೆಚ್ಚುವರಿ ನೌಕರರನ್ನು ಮನೆಗೆ ಕರೆಸಿಕೊಂಡಿದ್ದಾರೆ.

ನೌಕರನ ಮನೆಗೆ ಲಂಚದ ಹಣ…!

ಜಾರ್ಖಂಡ್‌ ನ ಸಚಿವ ಅಲಂಗೀರ್ ಆಲಂ ಅವರ ಖಾಸಗಿ ಕಾರ್ಯದರ್ಶಿ ಮನೆ ಮೇಲೆ ರಾಂಚಿಯ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಲಂಗೀರ್ ಆಲಂ ಅವರ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಲ್ಲಿನ ಲಂಚದ ಹಣ ನೌಕರನ ಮನೆಗೆ ಹೋಗುತ್ತದೆ ಅನ್ನೋ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಚಿವರ ಆಪ್ತ ಕಾರ್ಯದರ್ಶಿಯ ಅಡಿಯಲ್ಲಿ ಮಾಸಿಕ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ನೌಕರನ ಮನೆಗೆ ದಾಳಿ ಮಾಡಿದಾಗ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ.

ವಿಡಿಯೋ ನೋಡಿ :

ಹತ್ತು ಸಾವಿರ ಲಂಚದ ಹಿಂದೆ ಬಿದ್ದಿದ್ದ ಇಡಿ..!

ಕಳೆದ ವರ್ಷ ಹತ್ತು ಸಾವಿರ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಇಂಜೀನಿಯರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಇಂಜೀನಿಯರ್ ಅವರ ಹೇಳಿಕೆಯನ್ನು ದಾಖಲಿಸಿದಾಗ ಲಂಚದ ಹಣ ಸಚಿವರಿಗೆ ತಲುಪಿಸಲಾಗುತ್ತದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಜಾರ್ಖಂಡ್‌ನ ಗ್ರಾಮೀಣ ಅಭಿವೃದ್ದಿ ಸಚಿವ ಅಲಂಗೀರ್ ಆಲಂ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹೆಸರು ಮುನ್ನಲೆಗೆ ಬಂದಿತ್ತು . ಹೀಗಾಗಿ ಸಂಜೀವ್‌ ಲಾಲ್ ಅವರ ಬಳಿ ನೌಕರನಾಗಿದ್ದ ವ್ಯಕ್ತಿಯ ಮನೆಗೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

ಜಾರ್ಖಂಡ್ ಕಾಂಗ್ರೆಸ್ ಸರ್ಕಾರದ ಸಚಿವ…!

ಅಲಂಗೀರ್ ಆಲಂ ಜಾರ್ಖಂಡ್‌ನ ಪಾಕುರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾರೆ. ಈ ಹಿಂದೆ 2006 ರಿಂದ 2009 ರ ವರೆಗೆ ಅವರು ಸ್ಪೀಕರ್ ಕೂಡಾ ಆಗಿದ್ದರು. 2023ರ ಡಿಸೆಂಬರ್‌ ತಿಂಗಳಲ್ಲಿ ಜಾರ್ಖಂಡ್‌ನ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಉದ್ಯಮಿ ಧೀರಜ್ ಸಾಹು ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲಿ 350 ಕೋಟಿಯಷ್ಟು ಹಣ ಪತ್ತೆಯಾಗಿತ್ತು. ಈ ವೇಳೆ ಧೀರಜ್ ಸಾಹು ಅದು ಮದ್ಯದ ವ್ಯವಹಾರದ ಹಣವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.

Continue Reading

DAKSHINA KANNADA

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

Published

on

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.

nethravathi river

ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ  ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Continue Reading

LATEST NEWS

Trending