DAKSHINA KANNADA
ದ.ಕ : ಪ್ರತ್ಯೇಕ ಅಪ*ಘಾತ ಪ್ರಕರಣ; ಇಬ್ಬರು ಬೈಕ್ ಸವಾರರು ಸಾ*ವು
Published
10 hours agoon
By
NEWS DESK4ಮಂಗಳೂರು/ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಬೈಕೊಂದು ಉರುಳಿಬಿದ್ದ ಪರಿಣಾಮ ಯುವಕ ಸಾ*ವನ್ನಪ್ಪಿರುವ ಘಟನೆ ಕಲ್ಮಂಜ ನಿಡಿಗಲ್ ಬಳಿ ಸಂಭವಿಸಿದೆ. ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ, ಮಿಥುನ್ ಕರ್ಕೇರ(25) ಮೃ*ತ ಬೈಕ್ ಸವಾರ.
ಮಿಥುನ್, ಮಂಗಳೂರಿಗೆ ಕಾರ್ಯಕ್ರಮಕ್ಕೆಂದು ತೆರಳಿ ಅಲ್ಲಿಂದ ತನ್ನ ಊರಿಗೆ ಬೈಕ್‌ನಲ್ಲಿ ವಾಪಾಸಾಗುತ್ತಿದ್ದಾಗ ಈ ದುರಂ*ತ ಸಂಭವಿಸಿದೆ. ಬೈಕ್ ಸ್ಕಿ*ಡ್ ಆಗಿ ಗಂಭೀ*ರ ಗಾ*ಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಕೊಣಾಜೆ : ಸ್ಕೂಟರ್ – ಟೆಂಪೋ ನಡುವೆ ಅಪ*ಘಾತ; ಸವಾರ ಸಾವು
ಓವರ್ ಟೇಕ್‌ಗೆ ಬ*ಲಿ :
ಇನ್ನು ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರ ಲಾರಿಯ ಅಡಿಗೆ ಬಿದ್ದು ಮೃ*ತಪಟ್ಟ ಘಟನೆ ಮಂಗಳೂರಿನ ಬಂಗ್ರ ಕೂಳೂರು ಎಂಬಲ್ಲಿ ನಡೆದಿದೆ. ಸುರತ್ಕಲ್ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ವೇಳೆ ಈ ಅಪ*ಘಾತ ಸಂಭವಿಸಿದ್ದು, ಬೈಕ್ ಚಾಲಕ ಸ್ಥಳದಲ್ಲೇ ಮೃ*ತ ಪಟ್ಟಿದ್ದಾರೆ.
DAKSHINA KANNADA
ತಡೆಬೇಲಿಗೆ ಡಿಕ್ಕಿ ಹೊಡೆದು ಅಂಡರ್‌ಪಾಸ್ ಗೆ ಉರುಳಿದ ವಾಹನ; ಹಲವರಿಗೆ ಗಾಯ
Published
6 hours agoon
17/01/2025By
NEWS DESK3ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಅಂಡರ್ ಪಾಸ್ ಬಳಿ ಬೈಕ್ ಗೆ ಬೋಲೇರೋ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೊಲೆರೋ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಹಾಗೂ ಪಿಕಪ್ ಹೆದ್ದಾರಿ ಬದಿಯ ಅಪಘಾತ ತಡೆಗೆ ಹಾಕಿದ್ದ ತಡೆ ಬೇಲಿಗೆ ಡಿಕ್ಕಿ ಹೊಡೆದು ಸುಮಾರು 12 ಅಡಿ ಆಳದ ಅಂಡರ್ ಪಾಸ್ ಕೆಳಗಡೆ ಬಿದ್ದಿದೆ.
ಇದನ್ನೂ ಓದಿ: ಕೊಣಾಜೆ : ಸ್ಕೂಟರ್ – ಟೆಂಪೋ ನಡುವೆ ಅಪ*ಘಾತ; ಸವಾರ ಸಾವು
ಅಪಘಾತದಿಂದ ಬೈಕ್ ಸವಾರ ಸಹಿತ ಬೊಲೆರೋ ಪಿಕಪ್ ನಲ್ಲಿದ್ದ ವಾಹನದ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕ್ರೇನ್ ಮೂಲಕ ಎರಡು ವಾಹನಗಳನ್ನು ತೆರವುಗೊಳಿಸಲಾಯಿತು. ಅಪಘಾತದ ಗಾಯಾಳುಗಳ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
DAKSHINA KANNADA
ಮಂಗಳೂರು : ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಶಿಲಾನ್ಯಾಸ
Published
6 hours agoon
17/01/2025By
NEWS DESK4ಮಂಗಳೂರು : ಸುಮಾರು 50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಲಾನ್ಯಾಸ ನೆರವೇರಿಸಿದ್ದಾರೆ. ಮೇರಿ ಹಿಲ್‌ನಲ್ಲಿ ನಿರ್ಮಾಣವಾಗಲಿರುವ ಈ ಪ್ರಾದೇಶಿಕ ಕೇಂದ್ರ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರಗಳಿಗೆ ಪೂರಕವಾಗಲಿರುವ ವ್ಯವಸ್ಥೆಗಳು ಈ ಕೇಂದ್ರದಲ್ಲಿ ಇರಲಿದೆ. ಇದು ವಿದ್ಯಾರ್ಥಿಗಳಿಂದ ಹಿಡಿದು ಸಂಶೋಧನೆ ನಡೆಸುವ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಏಷ್ಯಾದಲ್ಲೇ ಅತೀ ದೊಡ್ಡ ಸಂಸ್ಥೆಯಾಗಿದ್ದು, ಮಂಗಳೂರಿನಲ್ಲಿ ನಿರ್ಮಾಣವಾಗುವ ಪ್ರಾದೇಶಿಕ ಕೇಂದ್ರ ದೇಶದಲ್ಲೇ ದೊಡ್ಡ ಕೇಂದ್ರವಾಗಲಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಕೇಂದ್ರ ಸ್ಥಾಪನೆಗೆ 2024-25ರ ಬಜೆಟ್‌ನಲ್ಲಿ ಅನುದಾನ ನೀಡಲಾಗಿದ್ದು, ಈಗ ಚಾಲನೆ ನೀಡಲಾಗುತ್ತಿದೆ. ಈ ಕೇಂದ್ರ ಸ್ಥಾಪನೆ ಬಳಿಕ ಕರಾವಳಿ ಭಾಗದ ಜನರಿಗೆ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರವಾಗಿ ಬೆಂಗಳೂರಿಗೆ ಹೋಗುವುದು ತಪ್ಪಲಿದೆ ಎಂದು ಹೇಳಿದ್ದಾರೆ.
ಬಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಬೇಕು ಎಂಬ ಚಿಂತನೆ ಸರ್ಕಾರಕ್ಕೆ ಇದೆ. ಇದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ
ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಿದ್ದರು.
DAKSHINA KANNADA
ಉಳ್ಳಾಲ : ಬಂದೂಕು ತೋರಿಸಿ ಬ್ಯಾಂಕ್ ದರೋಡೆ; ನಗ, ನಗದು ದೋಚಿ ಪರಾರಿಯಾದ ಖದೀಮರು
Published
8 hours agoon
17/01/2025By
NEWS DESK4ಉಳ್ಳಾಲ : ಕೋಟೆಕಾರ್ ಬ್ಯಾಂಕ್‌ನ ಕೆ.ಸಿ.ರೋಡ್ ಶಾಖೆಯಿಂದ ಭಾರೀ ದರೋಡೆ ನಡೆದಿದೆ. ಹಾಡಹಗಲೇ ಐದು ಮಂದಿ ಆಗಂತುಕರು ಬಂದೂಕು ತೋರಿಸಿ ಕೃತ್ಯ ಎಸಗಿದ್ದಾರೆ. ಫಿಯೇಟ್ ಕಾರಿನಲ್ಲಿ ಬಂದ ತಂಡ ಚಿನ್ನ, ನಗದುಗಳನ್ನು ದೋಚಿ ಪರಾರಿಯಾಗಿದೆ.
ಬ್ಯಾಂಕಿನಿಂದ 15 ಕೋಟಿ ರೂ.ಗೂ ಮಿಕ್ಕಿದ ಚಿನ್ನ ಹಾಗೂ ಐದು ಲಕ್ಷದಷ್ಟು ನಗದನ್ನು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ದರೋಡೆ ನಡೆಸಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಬ್ಯಾಂಕಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಓರ್ವ ಪುರುಷ ಸಿಬ್ಬಂದಿ, ಮತ್ತೋರ್ವ ಸಿಸಿಟಿವಿ ಟೆಕ್ನೀಷಿಯನ್‌ಗೆ ಬಂದೂಕು ಹಾಗೂ ತಲವಾರು ತೋರಿಸಿದ ಮಾಸ್ಕ್ ಧರಿಸಿದ್ದ ತಂಡ ಸುಮ್ಮನಿರುವಂತೆ ಬೆದರಿಸಿ, ಇಲ್ಲವಾದಲ್ಲಿ ಕೊಲ್ಲುವ ಬೆದರಿಕೆಯನ್ನು ಒಡ್ಡಿ ಲಾಕರ್ ನಲ್ಲಿದ್ದ 15 ಕೋಟಿ ರೂ. ಚಿನ್ನ ಹಾಗೂ 5 ಲಕ್ಷ ರೂ ನಷ್ಟು ನಗದು ದೋಚಿ ಗ್ರೇ ಬಣ್ಣದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದಾರೆ. ಸದಾ ಜನಜಂಗುಳಿಯಿಂದ ಕೂಡಿರುವ ಕೆ.ಸಿ ರೋಡ್ ಜಂಕ್ಷನ್ ಶುಕ್ರವಾರವಾದ ಹಿನ್ನೆಲೆಯಲ್ಲಿ ಹೆಚ್ಚು ಜನರಿರಲಿಲ್ಲ.
ಇನ್ನು ಸ್ಪೀಕರ್ ಯುಟಿ ಖಾದರ್ ಕೂಡ ತಮ್ಮ ಕ್ಷೇತ್ರದ ಬ್ಯಾಂಕ್‌ನಲ್ಲಿ ನಡೆದ ಘಟನೆ ಗಮನಕ್ಕೆ ಬರುತ್ತಿದ್ದಂತೆ, ಬ್ಯಾಂಕ್ ಗೆ ಭೇಟಿ ನೀಡಿ, ಪ್ರತ್ಯಕ್ಷದರ್ಶಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
LATEST NEWS
ಮೂರನೇ ದಾಖಲೆ ಬರೆದ ಉಡುಪಿಯ ಕಲಾವಿದ; ವರ್ಲ್ಡ್ ರೆಕಾರ್ಡ್ ಸೇರಿದ ಅಪೂರ್ವ ಕಲಾಕೃತಿ
ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್
ತಾವೇ ಮಾರಾಟ ಮಾಡಿದ್ದ ಬಸ್ಸನ್ನು ಕದ್ದು ತಂದು ಸಿಕ್ಕಿ ಬಿದ್ದ ಅಪ್ಪ -ಮಗ!
ಉಳ್ಳಾಲ : ಬಂದೂಕು ತೋರಿಸಿ ಬ್ಯಾಂಕ್ ದರೋಡೆ; ನಗ, ನಗದು ದೋಚಿ ಪರಾರಿಯಾದ ಖದೀಮರು
ಈ ವಾರಾಂತ್ಯಕ್ಕೆ ಬಿಗ್ ಬಾಸ್ ಮನೆಯಲ್ಲಿ ಡಬಲ್ ಧಮಾಕ
ದ.ಕ : ಪ್ರತ್ಯೇಕ ಅಪ*ಘಾತ ಪ್ರಕರಣ; ಇಬ್ಬರು ಬೈಕ್ ಸವಾರರು ಸಾ*ವು
Trending
- BIG BOSS6 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- BIG BOSS5 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS3 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS3 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?