Saturday, April 1, 2023

‘ಕಾಂತಾರ’ ಮೂಲಕ ವಿಶ್ವ ಮನ್ನಣೆ ಪಡೆದ ನಟ ‘ರಿಷಬ್ ಶೆಟ್ಟಿ’ಗೆ ‘ದಾದಾ ಸಾಹೇಬ್‌ ಫಾಲ್ಕೆ’ ಪ್ರಶಸ್ತಿ ಗೌರವ..!

 ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದು, ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ.

ಮುಂಬೈ : ಕಾಂತಾರ ಚಲನಚಿತ್ರದ ಮೂಲಕ ದೇಶ, ವಿದೇಶಗಳಲ್ಲಿ ತುಳುನಾಡಿನ ಭೂತಾರಾಧನೆಯ , ಜಾನಪದ ಸಂಸ್ಕೃತಿಯ ಸೊಗಡನ್ನು ಪರಿಚಯಿಸಿರುವ ಕರಾವಳಿಯ ಡಿವೈನ್‌ ಸ್ಟಾರ್‌ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದು, ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ.

ಫೆ 20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಮೂಲಕ ವಿಶ್ವದ ಮನ್ನಣೆ ಪಡೆದ ರಿಷಬ್‌ ಶೆಟ್ಟಿ ತಾಜ್‌ ಲ್ಯಾಂಡ್‌ ಎಂಡ್ ಹೋಟೆಲ್‌’ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ.

ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಕಾಂತಾರ ಚಿತ್ರದ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ  ತಮ್ಮದಾಗಿಸಿಕೊಂಡಿದ್ದಾರೆ.

ಕೆಲ ದಿನಗಳ ಹಿಂದೆ ಮಂಗಳೂರಿಗೆ ಬಂದಿದ್ದ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರು ಕುಡಾ ಕಾಂತಾರ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಇಲ್ಲಿನ ದೈವ, ದೇವರ, ಜಾನಪದ ಸಂಸ್ಕೃತಿ ಬಗ್ಗೆ ತಿಳಿದುಕೊಂಡೆ ಎಂದು ಹೇಳಿದ್ದರು.

LEAVE A REPLY

Please enter your comment!
Please enter your name here

Hot Topics