Connect with us

    DAKSHINA KANNADA

    ಮೃತದೇಹದಲ್ಲಿದ್ದ ವಜ್ರದ ರಿಂಗ್‌ ಕದ್ದ ಸೆಕ್ಯೂರಿಟಿ: ಸಿಕ್ಕಿಬಿದ್ದಾಗ ಹಿಂತಿರುಗಿಸಿದ ಕಳ್ಳ

    Published

    on

    ಮಂಗಳೂರು: ನಗರದ ಬೆಂದೂರ್‌ವೆಲ್‌ನಲ್ಲಿರುವ ಖಾಸಗಿ ಆಸ್ಪತ್ರೆ ಶವಾಗಾರದಲ್ಲಿ ಮೃತದೇಹದಿಂದ ನಾಪತ್ತೆಯಾಗಿದ್ದ ವಜ್ರದ ರಿಂಗನ್ನು ಕದ್ರಿ ಪೊಲೀಸರು ಪತ್ತೆ ಮಾಡಿದ್ದಾರೆ.


    ಸಿಟಿ ಸೆಂಟರ್ ಮಾಲ್‌ನಲ್ಲಿ ಭದ್ರತಾ ವಿಭಾಗದಲ್ಲಿ ಮ್ಯಾನೇಜರ್ ಆಗಿದ್ದ ಮೂಲತಃ ಪಡೀಲ್‌ನ ನಿವಾಸಿ, ಪ್ರಸ್ತುತ ಬಳ್ಳಾಲ್‌ಬಾಗ್‌ನಲ್ಲಿ ವಾಸವಿದ್ದ ಹರೀಶ್ ಶೆಟ್ಟಿ(45) ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದು, ಮೃತದೇಹವನ್ನು ಖಾಸಗಿ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿತ್ತು.

    ಈ ಸಂದರ್ಭ ಅವರ ಕಿವಿಯಲ್ಲಿದ್ದ ವಜ್ರದ ರಿಂಗ್‌ಗಳು ನಾಪತ್ತೆಯಾಗಿದ್ದವು. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ವಿಚಾರಣೆ ನಡೆಸಿದಾಗ ರಿಂಗ್‌ಗಳನ್ನು ಅಲ್ಲಿನ ಭದ್ರತಾ ಸಿಬ್ಬಂದಿ ತೆಗೆದಿರುವುದು ಪತ್ತೆಯಾಗಿದ್ದು,

    ಕುಟುಂಬದವರಿಗೆ ಪೊಲೀಸರ ಸಮ್ಮುಖ ಹಸ್ತಾಂತರಿಸಿದ್ದಾನೆ. ಮುಂದೆ ಇಂತಹ ಕೃತ್ಯ ನಡೆಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

    ‘ಸೆಕ್ಯುರಿಟಿ ಗಾರ್ಡ್ ಮೂರು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದ. ಆತನನ್ನು ಕೆಲಸದಿಂದ ವಜಾಗೊಳಿಸಿದ್ದೇವೆ’ ಎಂದು ಆಸ್ಪತ್ರೆಯ ಮ್ಯಾನೇಜರ್ ಡಾ.ಅರುಣ್ ಕುಮಾರ್ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !

    Published

    on

    ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.

    ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
    ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
    ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.

     

    Continue Reading

    BIG BOSS

    ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ

    Published

    on

    ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್‌ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.

    ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

    ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಂಚು ರೂಪಿಸುತ್ತಿದ್ದಾಗಲೇ ಅರೆಸ್ಟ್‌

    Published

    on

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.

    ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್‌ನನ್ನು ಬಂಧಿಸಲು ಮುಂದಾಗಿದೆ.

    ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್‌ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

    ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .

    Continue Reading

    LATEST NEWS

    Trending