Monday, October 18, 2021

ಪಶುಸಂಗೋಪನಾ ಸಚಿವರಾದ ಪ್ರಭು ಚೌಹಾನರನ್ನು ಭೇಟಿಯಾದ ದ.ಕ. ಹಾಲು ಉತ್ಪಾದಕರ ಒಕ್ಕೂಟ..!

ಪಶುಸಂಗೋಪನಾ ಸಚಿವರಾದ ಪ್ರಭು ಚೌಹಾನರನ್ನು ಭೇಟಿಯಾದ ದ.ಕ. ಹಾಲು ಉತ್ಪಾದಕರ ಒಕ್ಕೂಟ..!

ಮಂಗಳೂರು :ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೊಡವೂರು ರವಿರಾಜ ಹೆಗ್ಡೆ  ಕರ್ನಾಟಕದ ಸನ್ಮಾನ್ಯ ಪಶುಸಂಗೋಪನಾ ಸಚಿವರಾದ ಪ್ರಭು ಚೌಹಾನ್ ರವರನ್ನು ಭೇಟಿಯಾಗಿ ಒಕ್ಕೂಟದ ವತಿಯಿಂದ ಸನ್ಮಾನಿಸಿದರು.

ಮಂಗಳೂರಿಗೆ ಸಚಿವರು ಆಗಮಿಸಿದ ಸಂದರ್ಭ ನಗರದ ಸರ್ಕಿಟ್ ಹೌಸಿನಲ್ಲಿ ಭೇಟಿಯಾಗಿ ಸನ್ಮಾನಿಸಿ ಮಾತುಕತೆ ನಡೆಸಿದರು.

ರಾಜ್ಯ ಸರಕಾರವು ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಗೋ ಸಂರಕ್ಷಣಾ ಕಾಯ್ದೆಯನ್ನು ಅನುಷ್ಠಾನಗೊಳಿಸಿ,ರಾಜ್ಯದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಗೋಕಳ್ಳತನ, ಗೋ ಸಾಗಾಣಿಕೆ ಮತ್ತು ಅಕ್ರಮ ಕಸಾಯಿಖಾನೆಯ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ರಾಜ್ಯದ ಹೈನುಗಾರರ ಹಿತವನ್ನು ರಕ್ಷಿಸಬೇಕೆಂದು ವಿನಂತಿಸಿದರು.

ರಾಜ್ಯದ ಎಲ್ಲಾ ಸಹಕಾರಿ ಸಂಸ್ಥೆಗಳ ವಾರ್ಷಿಕ ಲಾಭಾಂಶದಲ್ಲಿ ಕನಿಷ್ಠ  2% ಹಣವನ್ನು ಗೋಶಾಲೆಗಳ ನಿರ್ವಹಣೆ ಮತ್ತು ದೇಶೀಯ ತಳಿಗಳ ಅಭಿವೃದ್ಧಿ, ಗೋ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವುದಕ್ಕಾಗಿ ಮೀಸಲಿಡಬೇಕೆಂದೂ ಸಲಹೆ ನೀಡಿದರು.

ಇನ್ನು ಒಕ್ಕೂಟದ ಮನವಿಗೆ ಸ್ಪಂದಿಸಿದ ಸಚಿವರು ಈ ಬಗ್ಗೆ ಸಕಾರಾತ್ಮಕವಾಗ ಸ್ಪಂದಿಸಿ,ಅನುಷ್ಠಾನಗೊಳಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸುರೇಶ್, ನಿರ್ದೇಶಕರುಗಳಾದ ಸಾಣೂರು ನರಸಿಂಹ ಕಾಮತ್, ಸುಧಾಕರ ರೈ, ವ್ಯವಸ್ಥಾಪಕರಾದ ಡಾ. ನಿತ್ಯಾನಂದ ಭಕ್ತ, ಸತೀಶ್ ಶೆಟ್ಟಿಯವರು ಉಪಸ್ಥಿತರಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...