ಮಂಗಳೂರು ” ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, Diploma/ITI ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೇಳಿದ್ದಾರೆ.
ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.