ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಅವರಿಗೆ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ.
ಮೂಲತಃ ವೈದ್ಯರಾಗಿರುವ ಡಾ. ರಾಜೇಂದ್ರ ಕೆ.ವಿ 2013 ನೇ ಬ್ಯಾಚಿನ IAS ಅಧಿಕಾರಿಯಾಗಿದ್ದು 2020 ಜುಲೈ ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಮಹಾಮಾರಿ ಕೊರೊನಾ ಜಿಲ್ಲೆಯಲ್ಲಿ ತಾಂಡವ ಆಡುತ್ತಿರುವ ಹೊತ್ತಿಗೆ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿ ಮಾದರಿ ಜಿಲ್ಲಾಧಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಕೀರ್ತಿಗೆ ಪಾತ್ರರಾಗಿದ್ದಾರು.