Connect with us

    ಬೆಂಬಿಡದ ಭೂತ ಕೊರೊನಾ: ಮಾರ್ಚ್ 28ರಂದು ದ.ಕ. ಜಿಲ್ಲೆ ಸಂಪೂರ್ಣ ಬಂದ್.!

    Published

    on

    ಬೆಂಬಿಡದ ಭೂತ ಕೊರೊನಾ: ನಾಳೆ ದ.ಕ. ಜಿಲ್ಲೆ ಸಂಪೂರ್ಣ ಬಂದ್.!

    ಮಂಗಳೂರು: ಕೊರೊನಾ ಎಂಬ ಮಹಾಮಾರಿ ಬೆಂಬಿಡದ ಭೂತದಂತೆ ಎಲ್ಲರನ್ನೂ ಕಾಡುತ್ತಿದೆ. ಇದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನಲೆಯಲ್ಲಿ ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳು ಸಂಪೂರ್ಣ ಸ್ಥಗಿತಗೊಳ್ಳಲಿದೆ.

    ಇಂದು (ಮಾರ್ಚ್ 27) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

    ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 7 ಪ್ರಕರಣಗಳು ವರದಿಯಾಗಿವೆ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕೊರೊನಾ ಪಾಸಿಟಿವ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿವೆ.

     

    ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸದಿದ್ದರೆ, ಮುಂದಿನ ದಿನಗಳು ಇನ್ನಷ್ಟು ಅಪಾಯಕಾರಿಯಾಗಲಿದೆ ಎಂಬ ಅತಂಕ ಶುರುವಾಗಿದೆ.

    ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಿ ಖಡ್ಡಾಯವಾಗಿ ಪಾಲಿಸಬೇಕು.

    ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಧೃಡ ನಿರ್ಧಾರ ತೆಗೆದುಕೊಳ್ಳಬೇಕಿದೆ. ಪ್ರತಿಯೊಬ್ಬರೂ ಮನೆಯೊಳಗೆ ಕೂತು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

    ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಚಟುವಟಿಕೆ, ವಾಣಿಜ್ಯ ವ್ಯವಹಾರಗಳನ್ನು, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

    ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರು, ಜಿ.ಪಂ. ಅಧ್ಯಕ್ಷರು, ಮೇಯರ್‌, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಇನ್ನು ನಾಳೆಯ ಪರಿಸ್ಥಿತಿ ನೋಡಿಕೊಂಡು ಬಂದ್ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ದಸರಾ ಆನೆಗಳ ಕಾದಾಟ..! ಬೆಚ್ಚಿಬಿದ್ದ ಜನರು, ಅಧಿಕಾರಿಗಳು..!!

    Published

    on

    ಮೈಸೂರು/ಮಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ(ಸೆ.20) ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

    ದಸರಾ ಹಬ್ಬದ ಪ್ರಯುಕ್ತ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದೆ. ಮಳೆಯಿರುವ ಕಾರಣ ಅರಮನೆ ಮೈದಾನದಲ್ಲೇ ಆನೆಗಳಿಗೆ ತಾಲೀಮನ್ನು ಕೈಗೊಳ್ಳಲಾಗಿತ್ತು. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಧನುಂಜಯ್ ಹಾಗೂ ಕಂಜನ್ ಆನೆಗಳ ಮಧ್ಯೆ ಗುದ್ದಾಟ ಆಋಂಭವಾಗಿದೆ. ಊಟದ ಸಮಯದಲ್ಲಿ  ಈ ಜಗಳ ಶುರುವಾಗಿದ್ದು ಧನುಂಜಯ್ ಆನೆ ಕಂಜನ್‌ನನ್ನು ಅರಮನೆಯಿಂದ ಹೊರಗೆ ಓಡಿಸಿಕೊಂಡು ಬಂದಿದೆ. ಈ ವೇಳೆ ಕಜನ್ ತನನ್ ಮಾವುತನನನ್ಉ ಕೆಳಗೆ ಬೀಳಿಸಿದೆ. ಧನುಂಜಯ್ ಆನೆ ಕಂಜನ್‌ನನ್ನು ಓಡಿಸಿಕೊಂಡು ಹೋಗಿದ್ದು  ಜಯಮಾರ್ತಾಂಡ ದ್ವಾರದಿಂದ ಹೊರಗೆ ಬಂದಿದೆ.  ಇದರಿಂದ‌ ಕೆಲಕಾಲ ಜನ, ಮಾವುತರು, ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಯಿತು. ಆನೆಗಳು ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿಹೋದರು.

    ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ

    ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿತು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ.  ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ ಬ್ರೇಕ್ ಬಿದ್ದಿದೆ. ಬಳಿಕ ಅರಮನೆಗೆ ಆನೆಗಳನ್ನು ಸಿಬ್ಬಂದಿ ಕರೆತಂದಿದ್ದಾರೆ. ಸದ್ಯ ಕೋಡಿಸೋಮೇಶ್ವರ ದೇವಸ್ಥಾನ ಸಮೀಪ ಇರುವ ಆನೆಗಳು ಬಿಡಾರ ಬಿಟ್ಟಿವೆ.

    Continue Reading

    DAKSHINA KANNADA

    ಮಂಗಳೂರು : ಬೈಕ್‌ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿ ಸಾ*ವು

    Published

    on

    ಮಂಗಳೂರು : ಲಾರಿಯೊಂದು ಬೈಕ್‌ಗೆ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃ*ತಪಟ್ಟ ಘಟನೆ ಕುಂಟಿಕಾನ ಪ್ಲೈಓವರ್‌ನ ಮೇಲೆ ಶುಕ್ರವಾರ(ಸೆ.21) ನಡೆದಿದೆ.

    ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃ*ತಪಟ್ಟ ವಿದ್ಯಾರ್ಥಿ.  ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಎ ಓದುತ್ತಿದ್ದ ಜಾಸಿಮ್ ಶುಕ್ರವಾರ ಸಂಜೆ ಕೂಳೂರಿನಿಂದ ಕೆಪಿಟಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಡಿ*ಕ್ಕಿ ಹೊಡೆಯಿತು ಎನ್ನಲಾಗಿದೆ.

    ಇದನ್ನೂ ಓದಿ : ನಾಲ್ಕನೇ ಮಗುವೂ ಹೆಣ್ಣಾಯಿತೆಂದು ಹಸುಗೂಸನ್ನು ನೆಲಕ್ಕೆ ಬಡಿದು ಕೊಂ*ದ ತಂದೆ

    ಪರಿಣಾಮ ನಿಯಂತ್ರಣ ತಪ್ಪಿದ ಜಾಸಿಮ್ ರಸ್ತೆಗೆ ಬಿದ್ದಿದ್ದರು. ಇದರಿಂದ ಗಂಭೀ*ರ ಗಾ*ಯಗೊಂಡ ಅವರು ಮೃ*ತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ದತ್ತಿ ಇಲಾಖೆ ದೇವಸ್ಥಾನದಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ..!

    Published

    on

    ಮಂಗಳೂರು : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕದ ದತ್ತಿ ಇಲಾಖೆ ಫುಲ್ ಅರ್ಲರ್ಟ್‌ ಆಗಿದೆ. ಕರ್ನಾಟಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.

    ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ದತ್ತಿ ಇಲಾಖೆ ದೇವಸ್ಥಾನದ ಸೇವೆಗಳಿಗೆ , ದೀಪಗಳಿಗೆ, ಪ್ರಸಾದ ತಯಾರಿಗೆ ಮತ್ತು ಅನ್ನಛತ್ರದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚಿಸಿದೆ.

    ತಿರುಪತಿ ದೇವಾಲಯದ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪವೇ ರವಾನೆ ಆಗುತ್ತಿದೆ. ಆದ್ರೆ ಜಗನ್‌ ರೆಡ್ಡಿಯ ಸರ್ಕಾರದ ನಾಲ್ಕು ವರ್ಷ ನಂದಿನಿ ತುಪ್ಪ ತಿರುಪತಿಗೆ ಪೂರೈಕೆ ಮಾಡಿರಲಿಲ್ಲ. ಹೀಗಾಗಿ ತಿರುಪತಿ ಲಡ್ಡುವಿಗೆ ಬಳಕೆ ಮಾಡಿದ ತುಪ್ಪಕ್ಕೂ ನಂದಿನಿ ತುಪ್ಪಕ್ಕೂ ಯಾವುದೇ ಸಂಭಂಧ ಇಲ್ಲ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್‌ ಹೇಳಿದ್ದಾರೆ.

    Continue Reading

    LATEST NEWS

    Trending