Thursday, September 29, 2022

ಮೊಗವೀರ ಹಿತಸಾಧನಾ ವೇದಿಕೆ ಯಿಂದ ಶಾಸಕ ಲಾಲಾಜಿ ಮೆಂಡನ್ ಗೆ ಸಚಿವ ಸ್ಥಾನ..! ಕೊಡುವಂತೆ ಒತ್ತಾಯ

 ಮೊಗವೀರ ಹಿತಸಾಧನಾ ವೇದಿಕೆ ಯಿಂದ ಶಾಸಕ ಲಾಲಾಜಿ ಮೆಂಡನ್ ಗೆ ಸಚಿವ ಸ್ಥಾನ ಕೊಡುವಂತೆ ಒತ್ತಾಯ..!

ಉಡುಪಿ:   ದಕ್ಷಿಣ ಕನ್ನಡ ಜಿಲ್ಲಾ  ಮೊಗವೀರ ಹಿತಸಾಧನಾ ವೇದಿಕೆ ಕಾಪು ಶಾಸಕ ಲಾಲಾಜಿ ಮೆಂಡನ್ ರಿಗೆ ಸಚಿವ ಸ್ಥಾನ ಸಿಗಬೇಕೆಂದು  ಆಗ್ರಹಿಸಿದ್ದಾರೆ.. ಗಂಗಾಮತ ಸಮುದಾಯದ ಏಕೈಕ ಪ್ರತಿನಿಧಿ ಲಾಲಾಜಿ ಮೆಂಡನ್ ಆಗಿದ್ದಾರೆ. ಕರ್ನಾಟಕದಲ್ಲಿ ಸುಮಾರು 80 ಲಕ್ಷಕ್ಕೂ ಹೆಚ್ಚು ಗಂಗಾಮತ- ಮೊಗವೀರ ಜನಸಂಖ್ಯೆ ಇದೆ ಹಾಗಿದ್ದರೂ ಸಮುದಾಯಕ್ಕೆ ಪ್ರಾತಿನಿಧ್ಯ ನೀಡದೆ ನಿರ್ಲಕ್ಷ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎಲ್ಲಾ ಸಮುದಾಯಗಳಿಗೂ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆ. ಮೊಗವೀರ- ಗಂಗಾಮತ ಸಮುದಾಯಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ ಎಂದು ಸಮುದಾಯ ಆರೋಪಿಸಿದೆ.

ಸಮುದಾಯದ ಬಹುತೇಕ ಜನರು ಬಿಜೆಪಿಯ ಮತದಾರರಾಗಿದ್ದು, ಕರಾವಳಿ ಜಿಲ್ಲೆಗಳು ಬಿಜೆಪಿ ಭದ್ರಕೋಟೆ ಆಗಲು ಸಮುದಾಯವೇ  ಕಾರಣ ಮೂರು ಬಾರಿ ಶಾಸಕರಾಗಿರುವ ಲಾಲಾಜಿ ಆರ್ ಮೆಂಡನ್  ಕಳಂಕರಹಿತ ರಾಜಕಾರಣಿ ಆದುದರಿಂದ ಅವರಿಗೆ ಸಚಿವ ಸ್ಥಾನ ನೀಡುವಂತೆ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.

ಮೊಗವೀರ ಸಮುದಾಯದ ವಿವಿಧ ಸಂಘಟನೆಗಳಿಂದಲೂ ಈ ಒತ್ತಾಯ ಕೇಳಿ ಬಂದಿದೆ.

LEAVE A REPLY

Please enter your comment!
Please enter your name here

Hot Topics

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...

ದ್ವೇಷದ ಕಿಚ್ಚು ಹಚ್ಚುವ ಸಂಘಟನೆಗಳ ವಿರುದ್ಧ ತಾರತಮ್ಯವಿಲ್ಲದೇ ಕ್ರಮ ಕೈಗೊಳ್ಳಿ: ಖಾದರ್‌ ಕಿಡಿ

ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್‌ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ...

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಎಂದಿಗೂ ಅವಕಾಶವಿಲ್ಲ-CM ಬೊಮ್ಮಾಯಿ

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು...