ದ.ಕ. ಜಿಲ್ಲೆಯಲ್ಲಿ ಕೊರೊನಾಕ್ಕೆ ಇಂದು ಮತ್ತೆ ಐದು ಬಲಿ…!
ದ.ಕ. ಜಿಲ್ಲೆಯಲ್ಲಿ ಕೊರೊನಾಕ್ಕೆ ಇಂದು ಮತ್ತೆ ಐದು ಬಲಿ…!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದ ಮರಣ ಮೃದಂಗ ಮುಂದುವರೆದಿದೆ. ಇಂದು ಜಿಲ್ಲೆಯಲ್ಲಿ ಐದು ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 46 ಕ್ಕೇರಿಕೆಯಾಗಿದೆ.
ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ 50 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನಲ್ಲಿ ಈ ಸೋಂಕಿಗೆ ಇದು ಎರಡನೇ ಬಲಿಯಾಗಿದೆ. ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಈ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟಿತ್ತು.
ಮತ್ತೊಂದೆಡೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ನಿವಾಸಿ, ಸುಮಾರು 60 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಜು.12ರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊರೋನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ಎರಡು ದಿನದ ಹಿಂದೆ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಾಗ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು.
ಅದರ ವರದಿ ಇಂದು ಕೈ ಸೇರಿದ್ದು, ಕೊರೋನ ಸೋಂಕು ದೃಢಪಟ್ಟಿದೆ. ಮೃತದೇಹ ಮನೆಯಲ್ಲಿದ್ದು ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಕೋವಿಡ್ ಮಾರ್ಗಸೂಚಿಯಂತೆ ಅಂತ್ಯಸಂಸ್ಕಾರ ನಡೆಸಲು ಕ್ರಮ ಕೈಗೊಂಡಿದ್ದಾರೆ.
ಮತ್ತೊಂದೆಡೆ ಪುತ್ತೂರಿನ ಮೂಲಡ್ಕ 50 ವರ್ಷದ ವ್ಯಕ್ತಿ, ಮಂಗಳೂರಿನ ಉರ್ವಾಸ್ಟೋರ್ ನ 72 ವರ್ಷದ ವೃದ್ಧ, ಮಂಗಳೂರಿನ ಬಳ್ಳಾಲ್ ಭಾಗ್ ನಿವಾಸಿ 60 ವರ್ಷದ ವೃದ್ಧೆ, ಮಂಗಳೂರಿನ ಬಂದರು ನಿವಾಸಿ 68 ವರ್ಷದ ವೃದ್ಧೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಐವರಲ್ಲಿ ನಾಲ್ವರು ಮಂಗಳೂರು ಕೋವಿಡ್ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದರೆ ಪುತ್ತೂರು ಮೂಲದ ಸೋಂಕಿತ ದೇರಳಕಟ್ಟೆ ಖಾಸಗಿ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 46 ಕ್ಕೇರಿಕೆಯಾಗಿದೆ.
LATEST NEWS
ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.
ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!