Connect with us

    DAKSHINA KANNADA

    ಮಲೇರಿಯಾದಲ್ಲಿ ದ.ಕ ಜಿಲ್ಲೆಗೆ ಪ್ರಥಮ ಸ್ಥಾನ..!

    Published

    on

    ಮಂಗಳೂರು: ಕೋವಿಡ್‌ ಸೋಂಕು ಕಡಿಮೆಯಾಗುತ್ತಿದೆಯಂತೆ ನಡುವೆಯೇ ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ಅಬ್ಬರ ಹೆಚ್ಚಾಗಿದ್ದು, ಮಲೇರಿಯಾ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.


    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ ಜೂನ್‌ ತಿಂಗಳಿನಿಂದ ಏರಿಕೆ ಆಗುತ್ತಿವೆ. ಮೇ ತಿಂಗಳ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ 277 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದವು. ಇದರಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿಯೇ 255 ಪ್ರಕರಣ ದಾಖಲಾಗಿವೆ.
    ರಾಜ್ಯದಲ್ಲಿ ಕಳೆದ ವರ್ಷ ಒಟ್ಟು 1,701 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದವು. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲಿಯೇ 1,397 ಪ್ರಕರಣ ಪತ್ತೆಯಾಗಿದ್ದರೆ, ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿಯೇ ದಾಖಲೆಯ 1,306 ಪ್ರಕರಣಗಳು ಪತ್ತೆಯಾಗಿದ್ದವು.

    ಈ ಬಾರಿ ಕೂಡ ಮಲೇರಿಯಾ ಪ್ರಕರಣಗಳು ಹೆಚ್ಚಾಗುವ ಭೀತಿ ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ. ಇದರ ಜತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಅಬ್ಬರ ಕೂಡ ಜೋರಾಗುತ್ತಿದ್ದು ಮೇ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ 122 ಪ್ರಕರಣ ಪತ್ತೆಯಾಗಿವೆ. 2019ರಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿಯೇ 2,593 ಪ್ರಕರಣಗಳು ದಾಖಲಾಗಿದ್ದವು. ಜಿಲ್ಲೆಯಲ್ಲಿ 2,797 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದವು. ಈ ವೇಳೆಯಲ್ಲಿಯೇ ಮಂಗಳೂರಿನ ಆಸ್ಪತ್ರೆಗಳಲ್ಲಿ ಹಾಸಿಗೆ ಪರದಾಟವೂ ಉಂಟಾಗಿತ್ತು. ಹಲವು ಸಾವುಗಳು ಕೂಡ ಸಂಭವಿಸಿದ್ದವು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಪಾಲಿಕೆ ಈ ಬಾರಿ ಕ್ಷೇತ್ರ ಹಾಗೂ ಮನೆ ಭೇಟಿ ನಡೆಸಲಾಗುತ್ತಿದೆ. ವೈದ್ಯಾಧಿಕಾರಿ ನೇತೃತ್ವದಲ್ಲಿ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ.

     


    ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಲೇರಿಯಾ ತಡೆ ಮಾಸಾಚರಣೆ ನಡೆಯುತ್ತಿದೆ. ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ವ್ಯಾಪ್ತಿಯಲ್ಲಿ ಡೆಂಗಿ ಪ್ರಕರಣ ಹೆಚ್ಚಾಗಿವೆ. ಜ್ವರ ಬಂದರೂ ಡೆಂಗಿ, ಮಲೇರಿಯಾ, ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಜನರು ಯಾವ ಕಾರಣಕ್ಕೂ ನಿರ್ಲಕ್ಷ್ಯ ಭಾವನೆ ತಳೆಯಬಾರದು’ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕಿಶೋರ್‌ ಕುಮಾರ್‌ ಹೇಳಿದ್ದಾರೆ.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending