Connect with us

    BANTWAL

    ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

    Published

    on

    ಮಂಗಳೂರು: ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅರು ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending