Connect with us

DAKSHINA KANNADA

DAKSHINA KANNADA : ಅತ್ತ ಬಿಜೆಪಿಗೆ ಬಂಡಾಯದ ಬಿಸಿ; ಇತ್ತ ಕಾಂಗ್ರೆಸ್‌ನಿಂದ ಹೊಸ ಮುಖ ಕಣಕ್ಕೆ!?

Published

on

ಮಂಗಳೂರು : ಚುನಾವಣೆ ಘೋಷಣೆಗೆ ಮುನ್ನವೇ ಲೋಕಸಭಾ ಮತ ಸಮರಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಸಜ್ಜಾಗುತ್ತಿದೆ. ಒಂದೆಡೆ ಬಿಜೆಪಿಗೆ ಬಂಡಾಯದ ಬಿಸಿ ಸೋಕಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಪಾರ್ಟಿ ಹೊಸ ಮುಖವನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್ ನಿಂದ ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ನಲ್ಲಿ ಅಚ್ಚರಿ ಆಯ್ಕೆ ಸಾಧ್ಯತೆಯೊಂದು ಕಂಡು ಬಂದಿದ್ದು, ಯುವ ನಾಯಕನಿಗೆ ಮಣೆ ಹಾಕೋ ಭರ್ಜರಿ ಪ್ಲ್ಯಾನ್ ಕಾಂಗ್ರೆಸ್ ಮಾಡುತ್ತಿದೆ. ಈ ಬಾರಿ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಿರಣ್ ಬುಡ್ಲೆಗುತ್ತುವಿಗೆ ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ಸಾಧ್ಯತೆ ಕಂಡು ಬರುತ್ತಿದೆ.

ಮೂಲತಃ ಸುಳ್ಯ ಮೂಲದ ಯುವ ನಾಯಕ ಕಿರಣ್ ಬುಡ್ಲೆಗುತ್ತು ಡಿಕೆಶಿ ಆಪ್ತರಾಗಿದ್ದು, ಇವರಿಗೆ ಹೈಕಮಾಂಡ್ ಕೃಪಕಟಾಕ್ಷ ಇದೆ ಎನ್ನಲಾಗಿದೆ. ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಪದ್ಮರಾಜ್ ನಡುವೆ ಪ್ರಸ್ತುತ ಕಿರಣ್ ಬುಡ್ಲುಗುತ್ತೆ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪುತ್ತೂರಿನಲ್ಲಾದ ಮ್ಯಾಜಿಕ್ ಲೋಕಸಭಾ ಚುನಾವಣೆಯಲ್ಲೂ ಮಾಡೋ ಪ್ಲ್ಯಾನ್ ನಲ್ಲಿದ್ದಾರೆ ನಾಯಕರು.

ಬಿಜೆಪಿಯಲ್ಲಿ ಬಂಡಾಯ; ಕಾಂಗ್ರೆಸ್ ಗೆ ಲಾಭ?

ಪುತ್ತೂರಿನಲ್ಲಿ ಅರುಣ್ ಪುತ್ತಿಲ ಬಂಡಾಯದಿಂದ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದು ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. ಇದೇ ಪ್ಲ್ಯಾನ್‌ನಲ್ಲಿ ಲೋಕಸಭಾ ಚುನವಣೆಯಲ್ಲಿ ಒಕ್ಕಲಿಗ ಸಮುದಾಯದ ಕಿರಣ್ ಬುಡ್ಲೆಗುತ್ತುವಿಗೆ ಟಿಕೆಟ್ ನೀಡುವ ಸಾಧ್ಯತೆ ಕಂಡು ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ಅರುಣ್ ಪುತ್ತಿಲ, ಸತ್ಯಜಿತ್ ಸುರತ್ಕಲ್ ಬಂಡಾಯ ಕಂಡು ಬಂದಿದೆ. ಹಿಂದೂ ನಾಯಕರ ಬಂಡಾಯದಿಂದ ಬಿಜೆಪಿಗೆ ತಲೆನೋವು ಉಂಟಾಗುತ್ತಿದೆ. ಇಬ್ಬರು ಹಿಂದೂ ನಾಯಕರ ಬಂಡಾಯದಿಂದ ಕಾಂಗ್ರೆಸ್ ಗೆ ಲಾಭ ಆಗೋ ಲೆಕ್ಕಾಚಾರವನ್ನು ಕಾಂಗ್ರೆಸ್‌ನ ಹಿರಿ ತಲೆಗಳು ಹೆಣೆದಿವೆ. ಈ ಹಿನ್ನೆಲೆಯಲ್ಲಿ ಯುವ ನಾಯಕನಿಗೆ ಮಣೆ ಹಾಕಿ ದ.ಕ. ದಲ್ಲಿ ಕಾಂಗ್ರೆಸ್ ಗೆಲುವಿನ ಲೆಕ್ಕಾಚಾರದಲ್ಲಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ಅಭ್ಯರ್ಥಿ‌ ಆಯ್ಕೆ ವಿಚಾರದಲ್ಲಿ ನಡೆದ ಸಭೆಯಲ್ಲೂ ಕಿರಣ್‌ ಬುಡ್ಲೆಗುತ್ತು ಹೆಸರು ಪರಿಗಣನೆಗೆ ಬಂದಿದೆ ಎಂದು ತಿಳಿದು ಬಂದಿದೆ. ವೀಕ್ಷಕರಾಗಿ ಬಂದಿದ್ದ ಸಚಿವ ಮಧು ಬಂಗಾರಪ್ಪ ಅವರು ಕಿರಣ್ ಬುಡ್ಲೆಗುತ್ತು ಪರ ಬ್ಯಾಟಿಂಗ್ ಮಾಡಿದ್ದಾರೆ ಎನ್ನಲಾಗಿದೆ.

ಯುವ ನಾಯಕರ ಪರಿಗಣನೆಗೆ ಸಭೆಯಲ್ಲೂ ತೀರ್ಮಾನವಾಗಿದೆ. ಅದರಂತೆ ದ.ಕ‌. ಲೋಕಸಭಾ ಟಿಕೆಟ್ ಕಾಂಗ್ರೆಸ್ ನಿಂದ ಅಚ್ಚರಿ ಆಯ್ಕೆ ಸಾಧ್ಯತೆ ಕಂಡು ಬರುತ್ತಿದೆ. ಇನ್ನೊಂದೆಡೆ ಕಿರಣ್‌ ಟಿಕೆಟ್‌ಗೆ ಕೆಲವು ಕಾಂಗ್ರೆಸ್‌ನ ಹಿರಿಯರು ಕೂಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ನಾನೂ ಪ್ರಬಲ ಆಕಾಂಕ್ಷಿ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಿರಣ್‌ , ಈ ಬಾರಿಯ ಟಿಕೆಟ್‌ಗಾಗಿ ನಾನೂ ಕೂಡಾ ಪ್ರಬಲ ಆಕಾಂಕ್ಷಿ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕಳೆದ 23 ವರ್ಷಗಳಿಂದ ದುಡಿಯುತ್ತಿದ್ದೇನೆ. ಎನ್‌ಎಸ್‌ಯುಐನಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಮಂಗಳೂರು ಲೋಕಸಭಾ ಕ್ಷೇತ್ರ ಯುವಕರಿಗೆ ಅವಕಾಶ ಕಲ್ಪಿಸಿಕೊಡಲಿದೆ. ಒಕ್ಕಲಿಗ ಸಮಾಜಕ್ಕೆ ಅವಕಾಶ ಕಲ್ಪಿಸಲಿದೆ ಎನ್ನುವ ಉನ್ನತ ಮೂಲಗಳ ಮಾಹಿತಿ ಇದ್ದು, ಒಕ್ಕಲಿಗ ಸಮಾಜದ ಸಕ್ರಿಯ ಕಾರ್ಯಕರ್ತನಾಗಿ ನಾನು ಎಲ್ಲಾ ಜಾತಿ, ಧರ್ಮ, ವರ್ಗದವರನ್ನು ಗೌರವಿಸಿ, ಪ್ರೀತಿಸುತ್ತಿರುವುದರಿಂದ ನನ್ನನ್ನು ಅಭ್ಯರ್ಥಿಯಾಗಿ ಪರಿಗಣಿಸುತ್ತಾರೆ ಎನ್ನುವ ನಂಬಿಕೆ ಇದೆ. ವೀಕ್ಷಕ ಮಧು ಬಂಗಾರಪ್ಪ ಅವರು ಕೂಡಾ ನನ್ನ ಹೆಸರನ್ನು ಪರಿಗಣಿಸಿದ್ದಾರೆ ಎಂದು ಹೇಳಿದರು.

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

DAKSHINA KANNADA

ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ

Published

on

ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿತು.

3 ಅಡಿ ಎತ್ತರ ದ ಪಂಚಲೋಹದ ಇಪ್ಪತ್ತನಾಲ್ಕು ತೀರ್ಥಂಕರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ ಬೆಳಿಗ್ಗೆ 7.30 ರಿಂದ 9.00ರ ವರೆಗೆ ಮೋಕ್ಷ ಕಲ್ಯಾಣ ಪೂಜೆ, ದೆಹಲಿ ವಿಶ್ವವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣ ಹಾಗೂ ಮೆರವಣಿಗೆ ಮೂಲಕ ಮೂರ್ತಿ 3 ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆ 11.00ರಿಂದ ಮಧ್ಯಾಹ್ನ 1 ಗಂಟೆ ವರೆಗೂ ಮೂರ್ತಿ ಸ್ಥಾಪನೆ ದೆಹಲಿ ರಾಣಾ ಪತ್ ನಗರ ಬಸದಿಯಲ್ಲಿ ಜರುಗಿತು.


ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಾಮೀಜಿ, ಜಿನ ಬಿಂಬ ಸ್ಥಾಪನೆಯಿಂದ ಆತ್ಮ ಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ನುಡಿದರು. ಈ ಸಂದರ್ಭ ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಲಾಯಿತು.


ರಾಷ್ಟ್ರ ಸಂತ 108 ಗುಪ್ತಿ ಸಾಗರ ಮುನಿ ರಾಜ್ ಮೂಡು ಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ 108 ರಾಷ್ಟ್ರ ಸಂತ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜ್, ಮೂಡುಬಿದಿರೆ ಶ್ರೀಗಳಿಗೆ ಗೌರವಾನ್ವಿತ ಪ್ರಧಾನಮಂತ್ರಿಗಳಿಂದ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂ. 100 ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದ ಕ್ಷೇತ್ರ ಫಸ್ಟ್ ಡೇ ಕವರ್ ನೀಡಿ ಹರಸಿ ಆಶೀರ್ವಾದ ಮಾಡಿದರು.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿ ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಆಚಾರ್ಯ ಶತಾಬ್ದಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣ ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.

Continue Reading

LATEST NEWS

Trending