ದಲಿತ ಮಹಿಳೆಯ ಮನೆ ಧ್ವಂಸ;ದೃಶ್ಯ ಸೆರೆಹಿಡಿದು ಅಟ್ಟಹಾಸ ಮೆರೆದ ಕಿಡಿಗೇಡಿಗಳು..!
ಸುಳ್ಯ:ದಲಿತ ಮಹಿಳೆಯೊಬ್ಬರ ಮನೆಯನ್ನು ಕಿಡಿಗೇಡಿಗಳ ತಂಡವೊಂದು ಏಕಾಏಕಿ ಆಗಮಿಸಿ ಧ್ವಂಸ ಮಾಡಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಡಮಂಗಲದಲ್ಲಿ ಮಾ.3 ರಂದು ನಡೆದಿದೆ.
ಕಜೆತ್ತಡ್ಕದ ಬಾಲಕಿ ಎಂಬವರ ಮನೆಯನ್ನು ಧ್ವಂಸ ಮಾಡಲಾಗಿದ್ದು ಛಾವಣಿಯ ಸೀಟು ಸಹಿತ ಮನೆಯ ವಸ್ತುಗಳನ್ನು ಎಸೆಯುವ ಅಮಾನವೀಯ ದೃಶ್ಯಗಳು ಧ್ವಂಸ ಮಾಡಿದವರೇ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಇದರಲ್ಲಿ ಇವರು ನಾವು ಬೆಳ್ಳಾರೆ ಪೊಲೀಸರಿಗೆ ಹೇಳಿಯೇ ಈ ಕೆಲಸ ಮಾಡುತ್ತಿದ್ದೇವೆ ಎನ್ನುವುದು ಗೋಚರಿಸುತ್ತದೆ. ಈ ಘಟನೆಗೆ ಸಂಬಂಧಿಸಿದಂತೆ ರವಿ ಶೆಟ್ಟಿ, ವಿದ್ಯಾ ಸಹಿತ ನಾಲ್ವರ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್. ಐ.ಆರ್ ದಾಖಲಾಗಿದೆ.
ಬಾಲಕಿಯವರು ನೀಡಿರುವ ದೂರಿನಲ್ಲಿ ಜಾತಿ ನಿಂದನೆ ಮತ್ತು ಮಾಂಗಲ್ಯ ಸರ ಕಿತ್ತು, ಸೀರೆ ರವಿಕೆ ಹರಿದು ದೈಹಿಕ ಹಲ್ಲೆ ಹಾಗೂ ಮಾನಸಿಕ ಕಿರುಕುಳ ನೀಡಿರುವುದಾಗಿ ವಿವರಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸದ ಹಿನ್ನೆಲೆಯಲ್ಲಿ ಸುಳ್ಯ ಅಂಬೇಡ್ಕರ್ ರಕ್ಷಣಾ ವೇದಿಕೆಯ ಪದಾಧಿಕಾರಿಗಳು, ಮತ್ತು ದಲಿತ ಸೇವಾ ಸಮಿತಿಯ ಪದಾಧಿಕಾರಿಗಳು ಭೇಟಿ ನೀಡಿ,ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಪುತ್ತೂರು ಡಿವೈಎಸ್ ಪಿ ಗಾನ, ಬೆಳ್ಳಾರೆ ಠಾಣೆ ಎಸ್. ಐ ಅಂಜನೇಯ ರೆಡ್ದಿ ಆಗಮಿಸಿ ಮಹಜರು ನಡೆಸಿದರು. ಈ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಗಳನ್ನು ಬಂಧಿಸಿರುವ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.
ಸಂತ್ರಸ್ತೆ ಬಾಲಕಿ ಅವರು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಲಿತ ಸಂಘಟನೆಗಳ ಪದಾಧಿಕಾರಿಗಳು ಪ್ರಕರಣ ದಾಖಲಿಸದ ಬೆಳ್ಳಾರೆ ಪೋಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.
ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಎಫ್ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.
ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್ನನ್ನು ಬಂಧಿಸಲು ಮುಂದಾಗಿದೆ.
ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .
ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.
ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.