Connect with us

    BANTWAL

    ದಲಿತ ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: 7 ವರ್ಷ ಕಠಿಣ ಸಜೆ, 15 ಸಾವಿರ ದಂಡ

    Published

    on

    ಮಂಗಳೂರು: 2014ರಲ್ಲಿ ನಡೆದ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಏಳು ವರ್ಷಗಳ ಕಠಿಣ ಸಜೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.


    ಅಪ್ರಾಪ್ತ ಬಾಲಕಿಯ ಅಪಹರಣ ಆರೋಪಕ್ಕೆ 3 ವರ್ಷ ಕಠಿಣ ಶಿಕ್ಷೆ ಮತ್ತು 5000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ 15 ದಿನಗಳ ಕಠಿಣ ಶಿಕ್ಷೆ,

    ಅತ್ಯಾಚಾರ ಆರೋಪಕ್ಕೆ 7 ವರ್ಷ ಕಠಿಣ ಸಜೆ ಮತ್ತು 10 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ತಪ್ಪಿದರೆ ಎರಡು ತಿಂಗಳ ಕಠಿಣ ಸಜೆಯನ್ನು ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ನೀರ್ಕಜೆಯ ನಿತಿನ್ (27) ಎಂಬಾತ 2014 ರಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ 17 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದನು. ಆರೋಪಿ ನಿತಿನ್​​, ಖಾಸಗಿ ಬಸ್ಸಿನ ನಿರ್ವಾಹಕನಾಗಿ ಕಾರ್ಯ ನಿರ್ವಹಿಸುತ್ತಿದ್ದನು.

    ಈತನ ಬಸ್‌ನಲ್ಲಿ ಬಾಲಕಿ ಕಾಲೇಜಿಗೆ ಹೋಗಿ ಬರುತ್ತಿದ್ದಳು. ಆರೋಪಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದನು.

    2014 ಜುಲೈ 24ರಂದು ಪುತ್ತೂರಿಗೆ ಬರುವಂತೆ ಹೇಳಿ ನಿನ್ನನ್ನೆ ಮದುವೆಯಾಗುವುದಾಗಿ ನಂಬಿಸಿ ರಾತ್ರಿ ವೇಳೆ ಸ್ಲೀಪರ್ ಬಸ್‌ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾನೆ. ಬಸ್‌ನಲ್ಲಿ ಪ್ರಯಾಣಿಸುವ ನಿತಿನ್​ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.

    ಬೆಂಗಳೂರಿಗೆ ತೆರಳಿದ ಬಳಿಕ ಅಲ್ಲಿ ಎರಡು ದಿನ ಸುತ್ತಾಡಿಸಿದ್ದನು.
    ಈ ನಡುವೆ ಕಾಲೇಜಿಗೆಂದು ಹೋಗಿದ್ದ ಮಗಳು ವಾಪಸ್ ಬರದಿರುವ ಬಗ್ಗೆ ಬಾಲಕಿಯ ಪೋಷಕರು ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

    ತನಿಖೆ ನಡೆಸಿದ ಪೊಲೀಸರಿಗೆ ಬಾಲಕಿಯನ್ನು ನಿತಿನ್ ಬೆಂಗಳೂರಿಗೆ ಕರೆದುಕೊಂಡು ಹೋದ ಸುಳಿವು ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರಿಗೆ ತೆರಳಿ ಇವರನ್ನು ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದರು.ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದು,

    ಆಕೆಯ ಮೇಲೆ ಅತ್ಯಾಚಾರ ಎಸಗಿದ ನಿತಿನ್ ವಿರುದ್ಧ ಪ್ರಕರಣ ದಾಖಲಿಸಿದ್ದ ವಿಟ್ಲ ಪೊಲೀಸರು ಬಳಿಕ ಆರೋಪಿಯನ್ನುಬಂಧಿಸಿದ್ದರು.

    ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಎಸ್ಪಿ ರಾಹುಲ್ ಕುಮಾರ್, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ಅವರು ನಿನ್ನೆ ಅಪರಾಧಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿದರು.

    ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.

    BANTWAL

    ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

    Published

    on

    ಬಂಟ್ವಾಳ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

    ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ.

    ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ನೊಂದ ಯುವತಿಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಳು.

    ಇದೀಗ ಗ್ರಾಮಾಂತರ ಎಸ್.ಐ.ಹರೀಶ್ ಅವರ ಪೋಲೀಸ್ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Continue Reading

    BANTWAL

    ಜುಗಾರಿ ಆಡುತ್ತಿದ್ದ 33 ಜನ ಪೊಲೀಸರ ಕೈ ವಶ : ಓರ್ವ ಪರಾರಿ

    Published

    on

    ಬಂಟ್ವಾಳ: ಅಕ್ರಮವಾಗಿ ಮನೆಯಲ್ಲಿ ಜುಗಾರಿ ಆಟ ಆಡುತ್ತಿದ್ದ ವೇಳೆ ಬಂಟ್ವಾಳ ಪೊಲೀಸರು ದಾಳಿ ನಡೆಸಿ ಒಟ್ಟು 33 ಜನರನ್ನು ಹಾಗೂ ಬರೋಬ್ಬರಿ ಏಳು ಲಕ್ಷಕ್ಕೂ ಅಧಿಕ ಮೌಲ್ಯದ ನಗದು ವಶಪಡಿಸಿಕೊಂಡ ಘಟನೆ ನಿನ್ನೆ (ಡಿ.17) ಮುಂಜಾನೆ ವೇಳೆ ಬಂಟ್ವಾಳ ತಾಲೂಕು, ಬಡಗಬೆಳ್ಳೂರು ಗ್ರಾಮದ, ಬಡಗಬೆಳ್ಳೂರು ಎಂಬಲ್ಲಿ ನಿಶಾಂತ್ ಎಂಬವರ ಮನೆಯಲ್ಲಿ ನಡೆದಿದೆ.

    ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದಾಗ, ಬಂಟ್ವಾಳ ಡಿವೈಎಸ್‌ಪಿ ವಿಜಯ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ, ಸಬ್ ಇನ್ಸ್ಪೆಕ್ಟರ್ ಹರೀಶ್ ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಕಾರ್ಯದಕ್ಷತೆ ಮೆರೆದಿದ್ದಾರೆ. ದಾಳಿ ವೇಳೆ ಸದ್ರಿ ಸ್ಥಳದಲ್ಲಿ ಅಕ್ರಮವಾಗಿ “ಉಲಾಯಿ-ಪಿದಾಯಿ” ಜುಗಾರಿ ಆಟ ಆಡುತ್ತಿರುವುದು ಕಂಡುಬಂದಿರುತ್ತದೆ. ದಾಳಿ ವೇಳೆ ಜುಗಾರಿ ಆಟ ಆಡಿಸುತ್ತಿದ್ದ ಆರೋಪಿತ ನಿಶಾಂತ್ ತಪ್ಪಿಸಿಕೊಂಡಿದ್ದು, ಆಟದಲ್ಲಿ ನಿರತರಾಗಿದ್ದ ಒಟ್ಟು 33 ಜನರನ್ನು ವಶಕ್ಕೆ ಪಡೆದುಕೊಂಡು, ಅಪಾದಿತರಿಂದ ಜುಗಾರಿ ಆಟಕ್ಕೆ ಬಳಸಿದ ನಗದು ರೂ. 7,81,420/-, ಇಸ್ಪೀಟ್ ಎಲೆಗಳು, ಸ್ಟೀಲ್ ಟೇಬಲ್, ಪ್ಲಾಸ್ಟಿಕ್ ಚೆಯರ್ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

    ಬಂಧಿತ ಆರೋಪಿಗಳು :

    ರಾಜೇಶ್‌ (35 ವರ್ಷ), ಆನಂದ ಡಿ.ಸೋಜ (46 ವರ್ಷ), ಚೇತನ್‌ (39 ವರ್ಷ), ನಿತಿನ್‌ (34 ವರ್ಷ), ಪುಷ್ಪರಾಜ್‌ ಬಳ್ಳಾಲ್‌ (52 ವರ್ಷ) ನೌಷಾದ್‌ (37 ವರ್ಷ), ನಾಗೇಶ್‌ (36 ವರ್ಷ), ಅಬ್ದುಲ್‌ ಮಜೀದ್‌ (37 ವರ್ಷ), ಹರೀಶ್‌ (45 ವರ್ಷ), ಉಮೇಶ್‌ (52 ವರ್ಷ), ವಿನಾಯಕ (47 ವರ್ಷ), ಅಜಿತ್‌ ಕುಮಾರ್‌ (36 ವರ್ಷ), ರಾಘವೇಂದ್ರ (34 ವರ್ಷ), ಪ್ರವೀಣ್‌ ಕುಮಾರ್‌ (58 ವರ್ಷ), ಚೆನ್ನಕೇಶವ (42 ವರ್ಷ), ಭಾಸ್ಕರ (36 ವರ್ಷ), ವಿಘ್ನೇಶ (42 ವರ್ಷ), ಸಂಕೇತ್‌ (35 ವರ್ಷ), ಪವನ್‌ ರಾಜ್‌ (37 ವರ್ಷ), ಲೋಹಿತ್‌ (42 ವರ್ಷ), ಸತೀಶ್‌ ಇ., ಧೀರಜ್‌ ಕುಮಾರ್‌ (28 ವರ್ಷ), ಚಿದಾನಂದ (30 ವರ್ಷ), ಪ್ರಸಾದ್‌ (37 ವರ್ಷ), ಸಂದೀಪ್‌ (34 ವರ್ಷ), ಅನಿಲ್‌ ಕುಮಾರ್‌ (30 ವರ್ಷ), ನಿತೀಶ್‌ (21 ವರ್ಷ), ಸತೀಶ್‌ (36 ವರ್ಷ), ಮುಸ್ತಾಫ ಕೆ.ಪಿ. (33 ವರ್ಷ), ಅರುಣ್‌ ಡಿ.ಸೋಜ (50 ವರ್ಷ), ರೋಹಿತಾಶ್ವ ಪೂಜಾರಿ (46 ವರ್ಷ), ವಿಜೇತ್‌ ಕುಮಾರ್‌ (39 ವರ್ಷ), ನಿಖಿಲ್‌ (34 ವರ್ಷ), ನಿಶಾಂತ್ ಪರಾರಿಯಾದ ವ್ಯಕ್ತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಎ.ಸಿ.ಜೆ. & ಜೆ.ಎಂ.ಎಫ್.‌ ಸಿ. ನ್ಯಾಯಾಲಯ, ಬಂಟ್ವಾಳ ಅವರ ಡಿಸ್‌ ನಂ: 1770 /2024 ರ ಆದೇಶದಂತೆ ಪ್ರಕರಣ ದಾಖಲಾಗಿದೆ.

    ಸ್ವಾಧೀನಪಡಿಸಿದ ಸ್ವತ್ತುಗಳ ಒಟ್ಟು ಮೌಲ್ಯ ರೂ.7,90,220/- ಆಗಿರುತ್ತದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 112/2024 ಕಲಂ: 79,80 ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Continue Reading

    BANTWAL

    ಡಿ.19 ರಂದು ಕಡ್ತಾಲಬೆಟ್ಟು ದ.ಕ ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

    Published

    on

    ಬಂಟ್ವಾಳ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕಡ್ತಾಲಬೆಟ್ಟು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಇದರ ಸಹಯೋಗದಲ್ಲಿ ಶಾಲಾ ವಾರ್ಷಿಕೋತ್ಸವವು ಡಿಸೆಂಬರ್ 19 ರಂದು ಸಂಸ್ಥೆಯ ಆವರಣದಲ್ಲಿ ನಡೆಯಲಿದೆ.

    ಬೆಳಿಗ್ಗೆ 9 ಗಂಟೆಗೆ ಪ್ರಗತಿಪರ ಕೃಷಿಕರು ಮತ್ತು ಉದ್ಯಮಿಗಳು ಆದ ಜಯಪ್ರಕಾಶ್ ಶೆಟ್ಟಿ ಬುಳೇರಿ ಉದ್ಘಾಟನೆಯನ್ನು ಮಾಡಲಿದ್ದಾರೆ. ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಭಾರತಿ ರಾಜೇಂದ್ರ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಗತಿಪರ ಕೃಷಿಕ ಕೃಷ್ಣ ಶೆಟ್ಟಿ ಗೋಂಜಗುತ್ತು ಧ್ವಜಾರೋಹಣ ಮಾಡಲಿದ್ದು, ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ಸದಸ್ಯೆ ಮುತ್ತಮ್ಮ, ಪುಷ್ಪಾವತಿ ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

    ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 6.30 ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆ ಬಳಿಕ ಶ್ರೀ ವಿಠಲ ನಾಯಕ್ ಮತ್ತು ಬಳಗದವರಿಂದ ನಿತ್ಯ ನೂತನ ಕಾರ್ಯಕ್ರಮ ಗೀತಾ ಸಾಹಿತ್ಯ ಸಂಭ್ರಮ, ಹಳೇ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶಾಲಾ ಹಳೇ ವಿದ್ಯಾರ್ಥಿ ಭರತ್ ರಾಜ್ ಶೆಟ್ಟಿ ಮತ್ತು ಬಳಗದವರಿಂದ ಯಕ್ಷ-ಗಾನ-ವೈಭವ ನಡೆಯಲಿದೆ.

    Continue Reading

    LATEST NEWS

    Trending