Connect with us

    LATEST NEWS

    ಸುಳ್ಯ: ಸೇತುವೆಯಿಲ್ಲದೆ ದಲಿತರ ಪರದಾಟ-ದಮನಿತರ ದನಿ ಕೇಳದ ಶಾಸಕ ಹಾಗೂ ಜಿಲ್ಲಾಡಳಿತ

    Published

    on

    ಸುಳ್ಯ: ಮುರಿದು ಹೋಗಿರುವ ತೂಗು ಸೇತುವೆಯನ್ನು ಸರಿ ಮಾಡಿಕೊಡುವಲ್ಲಿ ಸ್ಥಳೀಯ ಶಾಸಕರು ಮುತುವರ್ಜಿ ವಹಿಸದೆ ಇದ್ದುದರಿಂದ ದಲಿತ ಸಮುದಾಯದವರು ಪ್ರತಿನಿತ್ಯ ಎದುರಿಸುತ್ತಿರುವ ಜೀವಭಯದ ಬಗ್ಗೆ, ಸಂಕಷ್ಟದ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಮೊರೆ ಹೋದ ಘಟನೆ ಸುಳ್ಯದ ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆ ಗಯ ಎಂಬಲ್ಲಿ ನಡೆದಿದೆ.


    ಈ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿ ’30 ವರ್ಷಗಳಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಒಂದು ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಎಷ್ಟು ಕೇಳಿದರು ಸ್ಪಂದನೆ ಸಿಗಲಿಲ್ಲ ಎಂಬುವುದು ಈ ಭಾಗದ ಜನರ ಅಹವಾಲು. ಆದ್ದರಿಂದ ಈ ಜನರ ಪರವಾಗಿ ಹೋರಾಟ ನಡೆಸಲು ಸ್ಥಳೀಯ ದಲಿತ ಕುಟುಂಬಗಳು ರೆಡಿಯಾಗಿದೆ.

    ಅಲ್ಲಿನ ತೂಗು ಸೇತುವೆಯನ್ನು ಪರಿಶೀಲನೆ ಮಾಡಿ ನೋಡಿದಾಗ ಬಹಳ ಬೇಸರವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಒಂದು ಮೀಸಲಾತಿ ಕ್ಷೇತ್ರ ಒಬ್ಬ ದಲಿತ ಶಾಸಕ ಎಸ್ ಅಂಗಾರರವರು ಕಳೆದ 30 ವರ್ಷಗಳಿಂದ ನಿರಂತರ ಗೆದ್ದು ಈಗ ಸಚಿವರಾಗಿದ್ದಾರೆ.

    ಇವರಿಂದ 30 ವರ್ಷಗಳಿಂದ ಸೇತುವೆ ಮಾಡಿಕೊಡಿ ಎಂದು ಆ ಗ್ರಾಮದ ದಲಿತ ನಿವಾಸಿಗಳು ಹೇಳಿದರು ಓಟುಗಳು ಬರುವಾ ಓಟು ಕಳೆದ ನಂತರ ಮಾಡಿಕೊಡುತ್ತೇವೆ ಎಂದು ಸುಳ್ಳು ಭರವಸೆಯನ್ನು ನೀಡಿ 30 ವರ್ಷಗಳಿಂದ ದಲಿತ ಜನಾಂಗದವರನ್ನು ಮಂಗ ಮಾಡಿ ಓಟು ದಿಟ್ಟಿಸಿಕೊಳ್ಳುತ್ತಾರೆ.

    ಓಟು ಕಳೆದು ಶಾಸಕರಿಗೆ ಫೋನ್ ಮಾಡಿದಾಗ ನಿಮ್ಮ ಓಟು ನನಗೆ ಬೇಕಾಗಿಲ್ಲ ಎಂದು ಶಾಸಕರು ಹೇಳುತ್ತಾರೆ ಎಂದು ಇಲ್ಲಿನ ಜನರು ಹೇಳುತ್ತಿದ್ದು ಜನರು ಓಟು ಕೊಟ್ಟು ಗೆದ್ದ ಮೇಲೆ ನಿಮ್ಮ ಓಟು ಬೇಕಾಗಿಲ್ಲ ಎಂದು ಹೇಳುತ್ತಾರೆ ಒಬ್ಬ ಸಚಿವ ಸ್ಥಾನದಲ್ಲಿ ಕೂತ್ಕೊಂಡು ಈ ರೀತಿ ಮಾತನಾಡುವುದು ಸರಿಯಲ್ಲ.

    ಜನರು ನಿಮ್ಮನ್ನು ಓಟು ಹಾಕಿ ಗೆಲ್ಲಿಸಿದು ಜನರ ಸೇವೆ ಮಾಡಲು ಈ ರೀತಿಯ ಉಡಾಫೆಯ ಮಾತನಾಡಲು ಅಲ್ಲ ಈ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬನಿಗೂ ನ್ಯಾಯ ಕೇಳುವ ಹಕ್ಕು ಇದೆ ಇವತ್ತು ಯಾವುದೇ ಒಬ್ಬ ಶಾಸಕರ ಮಕ್ಕಳಾಗಲಿ ಒಬ್ಬ ಮಂತ್ರಿಯ ಮಕ್ಕಳಾಗಲಿ ದೊಡ್ಡ ಅಧಿಕಾರಿಯ ಮಕ್ಕಳಾಗಲಿ ಶ್ರೀಮಂತರ ಮಕ್ಕಳಾಗಲಿ ಆ ಮುರಿದು ಹೋದ ತೂಗು ಸೇತುವೆಯಲ್ಲಿ ಓಡಾಡುತ್ತಿಲ್ಲ.

    ದಲಿತ ಜನಾಂಗದ ಮಕ್ಕಳು ಜೀವ ಕೈಯಲ್ಲಿ ಹಿಡಿದುಕೊಂಡು ಶಾಲೆಗೆ ಹೋಗುತ್ತಾರೆ ಮತ್ತು ವಯಸ್ಸಾದ ವೃದ್ದರು ಆ ಮುರಿದು ಹೋದ ತೂಗು ಸೇತುವೆಯಲ್ಲಿ ದಾಟುತ್ತಾರೆ ನಿಮ್ಮ ತಂದೆ ತಾಯಿಯಾಗಿದ್ದರೆ ನೀವು ಇದೇ ರೀತಿ ಮಾಡುತ್ತಿದ್ದೀರಾ.

    ದಲಿತ ಜನಾಂಗದವರು ನೀರಿಗೆ ಬಿದ್ದು ಸತ್ರು ಪರವಾಗಿಲ್ಲ ನಿಮಗೆ ಓಟು ಸಿಕ್ಕಿದ್ದರೆ ಸಾಕು ಆದರೆ ಇವತ್ತು ಒಬ್ಬ ಮಂತ್ರಿಯ ಮಗ ಇಲ್ಲದಿದ್ದರೆ ದೊಡ್ಡ ಅಧಿಕಾರಿಯ ಮಗ ಇಲ್ಲದಿದ್ದರೆ ಶ್ರೀಮಂತರ ಮಗ ಇದ್ದಿದ್ರೆ ಈ ಮೊದಲೇ ಸೇತುವೆ ಆಗುತ್ತಿತ್ತು.

    ಇಲ್ಲಿ ಇರುವುದು ದಲಿತರ ಮಕ್ಕಳು ಆದಕಾರಣ ಸೇತುವೆ ನಿರ್ಮಾಣ ಆಗಿಲ್ಲ. ಮೊನ್ನೆ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವಕ್ಕೆ ಬಂದರು ತೂಗು ಸೇತುವೆ ಹತ್ತಿರ ಬರಲಿಲ್ಲ ಜನರ ಕಷ್ಟಕ್ಕೆ ಸ್ಪಂದಿಸಿಲ್ಲ ಮತ್ತೆ ಯಾಕೆ ಗ್ರಾಮ ವಾಸ್ತವ್ಯ ಮಾಡುತ್ತೀರಿ ಜಿಲ್ಲಾಧಿಕಾರಿಯವರೇ ಈ ರೀತಿ ಮಾಡಿದರೆ ದಲಿತ ಜನಾಂಗದವರು ಅವರ ಕಷ್ಟಗಳನ್ನು ಯಾರೊಂದಿಗೆ ಹೇಳಬೇಕು ಎರಡು ವರ್ಷದ ಹಿಂದೆ ಸುಳ್ಯ ತಹಶೀಲ್ದಾರರಾದ ಅನಿತಾಲಕ್ಷ್ಮಿಯವರು ಅರಮನೆ ಗಯ ಸ್ಥಳಕ್ಕೆ ಭೇಟಿ ನೀಡಿ ನಿಮಗೆ ಆದಷ್ಟು ಬೇಗ ಸೇತುವೆ ಮಾಡಿಸಿಕೊಡುತ್ತೇನೆ ಎಂದು ಹೇಳಿ ಹೋದವರು ಎರಡು ವರ್ಷವಾದರೂ ಪತ್ತೆ ಇಲ್ಲ.

    ವೇದಿಕೆಯಲ್ಲಿ ಮಾತ್ರ ಪರಿಶಿಷ್ಟ ಜಾತಿ ಪಂಗಡದವರಿಗೆ ತೊಂದರೆಯಾದಾಗ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಾರೆ ಮತ್ತು ಎಸ್ಸಿ ಎಸ್ಟಿ ಕುಂದು ಕೊರತೆ ಸಭೆಗೆ ಜಿಲ್ಲಾಧಿಕಾರಿಯವರು ಮಂಗಳೂರಿಗೆ ಕರೆಯುತ್ತಾರೆ ಅಲ್ಲಿಗೆ ಹೋಗಿ ಬಿಸ್ಕೆಟ್ ಮತ್ತೆ ಚಾಯ ಕುಡಿದು ಬರುವುದು ಬಿಟ್ಟರೆ ಬೇರೆ ದಲಿತರ ಯಾವ ಕೆಲಸ ಕೂಡ ಆಗುವುದಿಲ್ಲ.

    ಇವತ್ತು ಜನರ ತೆರಿಗೆ ಹಣದಿಂದ ಶಾಸಕರಿಗೆ ಮಂತ್ರಿಗಳಿಗೆ ತಿಂಗಳ ಸಂಬಳ ಬರುತ್ತದೆ ಅನುದಾನ ಯಾರ ಜೇಬಿನಿಂದ ಕೊಡುವುದಲ್ಲ.

    ಈಗ ಅರಮನೆಗಯ ಎಂಬಲ್ಲಿ 30 ದಲಿತ ಮನೆಗಳಿದೆ ಆದಕಾರಣ ಅರಮನೆಗಯ ಎಂಬ ಜಾಗದಲ್ಲಿ ತಕ್ಷಣ ಸೇತುವೆ ನಿರ್ಮಿಸಿ ಕೊಡಬೇಕು ಮತ್ತು ಅಧಿಕಾರಿಗಳು ಮತ್ತು ಸಚಿವರು ಸ್ಥಳಕ್ಕೆ ಭೇಟಿ ನೀಡಿ ದಲಿತ ಜನಾಂಗದವರಿಗೆ ಸ್ಪಂದಿಸಬೇಕು.

    ಮತ್ತು ಆದಷ್ಟು ಬೇಗ ಅಲ್ಲಿ ಸೇತುವೆರಿ ನಿರ್ಮಿಸಿ ಕೊಡಬೇಕು. ಒಂದು ವೇಳೆ ಈ ಎಲ್ಲ ಬೇಡಿಕೆ ಈಡೇರದಿದ್ದಲ್ಲಿ ಸುಳ್ಯ ತಾಲೂಕು ಕಚೇರಿಯ ಮುಂಭಾಗದಲ್ಲಿ ಅಂಬೇಡ್ಕರ್ ರಕ್ಷಣೆ ವೇದಿಕೆ ವತಿಯಿಂದ ಉಗ್ರ ಪ್ರತಿಭಟನೆ ನ್ಯಾಯ ಸಿಗುವವರೆಗೆ ಧರಣಿ ಮಾಡಲಿದ್ದೇವೆ ಎಂದು ಮಾಧ್ಯಮದ ಮೂಲಕ ಎಚ್ಚರಿಕೆಯನ್ನು ಕೊಡುತ್ತಿದ್ದೇನೆ’ ಎಂದು ಹೇಳಿದರು.

    Baindooru

    ಪತಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನು ಕೊಂ*ದ ಪಾಪಿ ತಾಯಿ!

    Published

    on

    ಮಂಗಳೂರು/ಬೆಂಗಳೂರು : ರಾಜ್ಯವೇ ಬೆಚ್ಚಿ ಬೀಳುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ಕ್ರೂ*ರಿ ತಾಯಿಯೊಬ್ಬಳು ತನ್ನ ಪುಟ್ಟ ಕಂದಮ್ಮಗಳನ್ನು ಕೊಂ*ದಿರುವ ಅಮಾನವೀಯ ಘಟನೆ ನಡೆದಿದೆ. ಅಲ್ಲದೇ ಬಳಿಕ ಆಕೆ ಆತ್ಮಹ*ತ್ಯೆಗೂ ಯತ್ನಿಸಿದ್ದಾಳೆ .

    ಎಲ್ಲವೂ ಚೆನ್ನಾಗಿತ್ತು…ಅನುಮಾನ ಶುರುವಾಯ್ತು :

    ಆ ಕುಟುಂಬ ಕಳೆದ ತಿಂಗಳಷ್ಟೇ ಜಾರ್ಖಂಡ್ ನಿಂದ ಬಂದು ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ವಾಸವಾಗಿತ್ತು.  ಪತಿ ಸುನೀಲ್ ಸಾಹೋ, ಪತ್ನಿ ಮಮತಾ ಸಾಹೋ, ಮಕ್ಕಳಾದ ಶಂಭು ಸಾಹೋ, ಶಿಯಾ ಸಾಹೋ…ಪುಟ್ಟ ಸಂಸಾರ…ಸಣ್ಣದೊಂದು ಬಾಡಿಗೆ ಮನೆಯಲ್ಲಿ ವಾಸ…ಆಟೋ ಚಾಲಕನಾಗಿ ದುಡಿಯುತ್ತಿದ್ದ ಸುನೀಲ್ ಸಾಹೋ..ಹೀಗೆ ಸಂಸಾರ ಸಾಗುತ್ತಿತ್ತು. ಎಲ್ಲವೂ ಸರಿಯಾಗಿತ್ತು. ಅದ್ಯಾವಾಗ ಗಂಡನ ಬಗ್ಗೆ ಅ*ನೈತಿಕ ಸಂಬಂಧದ ಅನುಮಾನ ಹುಟ್ಟಿಕೊಂತೋ ಎಲ್ಲವೂ ಎಕ್ಕುಟ್ಹೋಗಿತ್ತು. ಪತಿ ಬೇರೊಂದು ಯುವತಿಯೊಂದಿಗೆ ಮಾತಾಡುತ್ತಿರುವುದನ್ನು ಮಮತಾ ಕೇಳಿಸಿಕೊಂಡಿದ್ದಳಂತೆ. ಇದೇ ದಂಪತಿ ನಡುವೆ ನಿತ್ಯ ಜಗಳಕ್ಕೆ ಬುನಾದಿ ಹಾಕಿತ್ತಂತೆ. ನಿನ್ನೆಯೂ(ನ.21) ಜಗಳ ಮುಂದುವರಿದಾಗ ಸುನೀಲ್ ಆಟೋ ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ.

    ಗಂಡ ಹೊರಹೋದ ಮೇಲೆ ಬಾಗಿಲು ಹಾಕಿ, ಇತ್ತ ಮಕ್ಕಳಿಬ್ಬರನ್ನೂ ಕತ್ತು ಹಿಸುಕಿ ಮಮತಾ ಕೊಂ*ದಿದ್ದಾಳೆ. ಬಳಿಕ ತಾನೂ ಚಾ*ಕುವಿನಿಂದ ಕತ್ತು ಕೊ*ಯ್ದುಕೊಂಡಿದ್ದಾಳೆ. ಎಲ್ಲ ಆದ ಮೇಲೆ ತಪ್ಪಿನ ಅರಿವಾಗಿ ಪತಿಗೆ ಸೆಲ್ಫಿ ಫೋಟೋ ಕಳುಹಿಸಿದ್ದಾಳೆ. ಅಷ್ಟೇ ಅಲ್ಲ,  ‘ಗಲತ್ ಹೋಗಯಾ…ಮಾಫ್ ಕರೋ’ ಅಂತ ಮೆಸೇಜ್ ಬೇರೆ ಹಾಕಿದ್ದಾಳೆ.

    ಇದನ್ನೂ ಓದಿ : ತಮಾಷೆಗಾಗಿ ಕ*ಪಾಳಮೋಕ್ಷ; ಸೋದರ ಮಾವನಿಂದ 3 ವರ್ಷದ ಮಗುವಿನ ಜೀ*ವಾಂತ್ಯ

    ಮೆಸೇಜ್ ನೋಡಿದ ತಕ್ಷಣ ಮನೆಯತ್ತ ದೌಡಾಯಿಸಿದ ಪತಿ ಬಾಗಿಲು ಒಡೆದು ಒಳ ಹೋಗಿ ಹೆಂಡತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದಾನೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ಮಮತಾ ಸಾಹೋ ಪ್ರಾ*ಣಾ*ಪಾಯದಿಂದ ಪಾರಾಗಿದ್ದಾಳೆ. ಆದರೆ, ಏನೂ ಅರಿಯದ ಕಂದಮ್ಮಗಳು ಪತಿ – ಪತ್ನಿ ಜಗಳಕ್ಕೆ ಬ*ಲಿಯಾಗಿವೆ.

    Continue Reading

    LATEST NEWS

    ನೀರಸ ಪ್ರದರ್ಶನ ಮುಂದುವರಿಸಿದ ಭಾರತ: ವಿವದಾತ್ಮಕ ತೀರ್ಪಿಗೆ ರಾಹುಲ್ ಬಲಿ !

    Published

    on

    ಮಂಗಳೂರು/ಆಸ್ಟ್ರೇಲಿಯಾ: ಪರ್ತ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ನಲ್ಲಿ ಪ್ರವಾಸಿ ಭಾರತ ತಂಡ ತನ್ನ ಬ್ಯಾಟಿಂಗ್ ವೈಫಲ್ಯ ಮುಂದುವರಿಸಿದೆ.


    ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಕೆ ಎಲ್ ರಾಹುಲ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ ಸ್ವಲ್ಪ ಹೊತ್ತು ಕ್ರೀಸ್ ನಲ್ಲಿ ನಿಂತಿದ್ದು ಬಿಟ್ಟರೆ, ಉಳಿದವರಿಂದ ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ನೀಡಿದ್ದ ಅದೇ ನೀರಸ ಪ್ರದರ್ಶನ ಮುಂದುವರಿಯಿತು.
    ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆರಂಭದಲ್ಲೇ ಜೊತೆಯಾಟ ಮುಂದುವರಿಸಲು ಸಾಧ್ಯವಾಗಲಿಲ್ಲ. 5 ರನ್ ಅಷ್ಟೇ ಜೊತೆಯಾಟವಾಡಿದ ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್ ರಾಹುಲ್ ಜೋಡಿ, ಜೈಸ್ವಾಲ್ ಶೂನ್ಯಕ್ಕೆ ವಿಕೆಟ್ ಒಪ್ಪಿಸುವುದರ ಮೂಲಕ ಆರಂಭಿಕ ನಿರಾಸೆ ಮೂಡಿಸಿದರು. ನಂತರ ಬಂದ ದೇವದತ್ ಪಡಿಕ್ಕಲ್, ಜೋಶ್ ಹೇಜಲ್ ವುಡ್ ಮಾರಕ ದಾಳಿಗೆ ಖಾತೆ ತೆರೆಯಲು ಕೂಡ ಸಾಧ್ಯವಾಗದೇ ಪೆವಿಲಿಯನ್ ಗೆ ಮರಳಿದರು.

    ಇದನ್ನೂ ಓದಿ:ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್‌..! 6 ಕೋಟಿ ಮೌಲ್ಯದ ಡ್ರ*ಗ್ಸ್‌ ಜಪ್ತಿ..!
    ಅಪಾರ ನಿರೀಕ್ಷೆಗಳ ಸಾಗರವೇ ಹೊತ್ತು ಬ್ಯಾಟಿಂಗ್ ಗೆ ಇಳಿದಿದ್ದ ವಿರಾಟ್ ಕೊಹ್ಲಿ ಮತ್ತೆ ನಿರಾಸೆ ಮೂಡಿಸಿದ್ದಾರೆ, ಕೇವಲ 5 ರನ್ ಗಳಸಿ ಔಟಾದರು. ನಂತರ ಬಂದ ಪಂತ್ ಆಟ ಲಯಕ್ಕೆ ತಂದರಾದರೂ ಇವರಿಗೆ ಯಾರೂ ಕೂಡ ಜೋಡಿಯಾಗಿ ನಿಲ್ಲಲೇ ಇಲ್ಲ. ಧ್ರುವ್ ಜುರೆಲ್ 11 ರನ್ ಗಳಿಗೆ ಔಟಾದರೆ, ವಾಷಿಂಗ್ಟನ್ ಸುಂದರ್ ಕೂಡ ನಾಲ್ಕು ರನ್ ಗೆ ಸುಸ್ತಾದರು. ಆದರೆ 7 ನೇ ವಿಕೆಟ್ ಗೆ ಪಂತ್‌ ಮತ್ತು ನಿತೀಶ್ 48 ರನ್ ಗಳ ಜೊತೆಯಾಟ ನೀಡಿದರು.
    ನಂತರ ಬಂದ ಹರ್ಷಿತ್ ರಾಣಾ 7 ರನ್ ಗಳಿಸಿ ಔಟಾದರು. ಇನ್ನೂ ಬುಮ್ರಾ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಭಾರತದ ಕಳಪೆ ಬ್ಯಾಟಿಂಗ್ ಪ್ರದರ್ಶನ ಮುಂದುವರಿಯಿತು.

    ಅಂಪೈರ್ ತೀರ್ಪು ವಿರುದ್ದ ರಾಹುಲ್ ಅಸಮಾಧಾನ:

    ಮಿಚೆಲ್ ಸ್ಟಾರ್ಕ್ ಎಸೆತವನ್ನು ರಾಹುಲ್ ಹೊಡೆಯಲು ಮುಂದಾದಾಗ, ಅದು ರಾಹುಲ್ ಅವರ ಬ್ಯಾಟ್ ನ ಸಮೀಪ ಹಾದು ಹೋಗಿ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಕ್ಯಾಚ್ ಹಿಡಿದರು. ತಕ್ಷಣವೇ ಫೀಲ್ಡ್ ಅಂಪೈರ್ ಬಳಿ ಮನವಿ ಮಾಡಿದರು. ನಂತರ ಆಸೀಸ್ ತಂಡ ಥರ್ಡ್ ಅಂಪೈರ್ ಮೊರೆ ಹೋದರು. ಇದನ್ನು ಪುರಸ್ಕರಿಸಿದ ಮೂರನೇ ಅಂಪೈರ್ ರಾಹುಲ್ ಔಟ್ ಎಂದು ಘೋಷಿಸಿದರು.
    ಸ್ಟಾರ್ಕ್ ಎಸೆದ ಚೆಂಡು ರಾಹುಲ್ ಬ್ಯಾಟ್ ತಾಗಿದೆಯೇ ಅಥವಾ ಪ್ಯಾಡ್ ಗೆ ತಾಗಿದೆಯೇ ಎಂಬುದು ಸ್ಪಷ್ಟವಾಗಿರಲಿಲ್ಲ. ರೀಪ್ಲೇಯಲ್ಲಿ ವಿವಿಧ ಆಯಾಮಗಳಿಂದ ಪರಿಶೀಲಿಸಿದ ನಂತರ, ಸ್ನಿಕ್ಕೋಮೀಟರ್ ಏರಿಳಿತವನ್ನು ಆಧರಿಸಿ ರಾಹುಲ್ ಔಟ್ ಎಂದು ತೀರ್ಪು ನೀಡಲಾಯಿತು. ಇದರಿಂದ ರಾಹುಲ್ ಅಸಮಾಧಾನದಿಂದಲೇ ಹೊರ ನಡೆದರು.

    Continue Reading

    Baindooru

    ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್‌..! 6 ಕೋಟಿ ಮೌಲ್ಯದ ಡ್ರ*ಗ್ಸ್‌ ಜಪ್ತಿ..!

    Published

    on

    ಬೆಂಗಳೂರು : ಮಾದಕ ವಸ್ತು ಮಾರಾಟ, ಸಾಗಾಟ ಜಾಲದ ಮೇಲೆ ಕಣ್ಣಿಟ್ಟಿರುವ ಸಿಸಿಬಿ ಅಧಿಕಾರಿಗಳು ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಮಾ*ದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಹಾಗೂ ಸಿಸಿಬಿ  ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ  ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಹೊಸ ವರ್ಷಕ್ಕೆ ಗಾಂ*ಜಾ ಸಪ್ಲೈ :
    ಹೊಸ ವರ್ಷಾಚರಣೆಯ ಸಲುವಾಗಿ ಕ್ವಿಂಟಾಲ್ ಗಟ್ಟಲೆ ಗಾಂ*ಜಾ ಸಪ್ಲೈ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಪೆಡ್ಲರ್ ಅಚ್ಚು ಹಾಗೂ ಜಮೀರ್, ರೇಷ್ಮಾ ದಂಪತಿ ಬಂಧಿತರು. ಆರೋಪಿಗಳಿಂದ 3.25 ಕೋಟಿ ರೂಪಾಯಿ ಮೌಲ್ಯದ 318 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

    ಮೂವರು ಆರೋಪಿಗಳು ಒಡಿಶಾ ಮತ್ತು ಆಂಧ್ರದಲ್ಲಿ ಗಾಂ*ಜಾ ಸಂಗ್ರಹಿಸಿದ್ದರು. ಹೊಸ ವರ್ಷಾಚರಣೆ ವೇಳೆ ಬೆಂಗಳೂರು, ಕೇರಳದಲ್ಲಿ ಮಾರಾಟ ಮಾಡಲು ಯೋಜಿಸಿದ್ದರು. ಜಮೀರ್ ಮತ್ತು ರೇಷ್ಮಾ ದಂಪತಿ ಬೆಂಗಳೂರಿನಲ್ಲಿ, ಪೆಡ್ಲರ್ ಅಚ್ಚು ಕೇರಳದಲ್ಲಿ ಗಾಂ*ಜಾ ಮಾರಲು ನಿರ್ಧರಿಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

    ಬೆಂಗಳೂರು ಮತ್ತು ಕೇರಳಕ್ಕೆ ಸಾಗಿಸಲು ಆರೋಪಿಗಳು ಸೆಲ್ಫ್ ಡ್ರೈವಿಂಗ್ ಕಾರು ಬಾಡಿಗೆಗೆ ಪಡೆದಿದ್ದರು. ಬಳಿಕ ಬೆಡ್ ಶೀಟ್ ನಲ್ಲಿ ಗಾಂಜಾ ತುಂಬಿ ಕಾರಿನಲ್ಲಿ ಬೆಂಗಳೂರಿಗೆ ತರುತ್ತಿದ್ದರು . ಗಾಂಜಾ ತರುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗೋವಿಂದಪುರ ಠಾಣೆ ಪೊಲೀಸರು ಹೆಚ್ ಬಿ ಆರ್ ಲೇಔಟ್ ಬಳಿ ಕಾರನ್ನು ಅಡ್ಡ ಹಾಕಿದ್ದಾರೆ. ಪೊಲೀಸರು ಪರಿಶೀಲನೆ ನಡೆಸುವಾಗ ಕಾರಿನಲ್ಲಿ 3 ಕೋಟಿ ರೂ. ಮೌಲ್ಯದ ಗಾಂ*ಜಾ ಪತ್ತೆಯಾಗಿದೆ. ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಅಚ್ಚು ಕೇರಳ ಪೊಲೀಸರಿಗೆ ಬೇಕಾದ ಮೋಸ್ಟ್ ವಾಂಟೆಡ್  ಆರೋಪಿ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದ್ದು, ಆತನ ವಿರುದ್ಧ ಕೇರಳದ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

    ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಸ್ ಅರೆಸ್ಟ್ :

    ಬೆಂಗಳೂರಿನಲ್ಲಿ ವಿದೇಶಿ ಡ್ರ*ಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡ್ರಗ್ಸ್ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾ*ಳಿ ನಡೆಸಿದ ಸಿಸಿಬಿ ಅಧಿಕಾರಿಗಳು,  1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ.

    ಇದನ್ನೂ ಓದಿ : ಏನಾಶ್ಚರ್ಯ ? ಈ ಡಯಟ್​ನಿಂದ ಪತ್ನಿಯ 4ನೇ ಸ್ಟೇಜ್ ಸ್ತನ ಕ್ಯಾನ್ಸರ್ ಮಾಯ !!
    ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ ಡ್ರ*ಗ್ಸ್ ತರಿಸುತ್ತಿದ್ದರು. ಹೊಸ ವರ್ಷಾಚರಣೆಯಂದು ಬೆಂಗಳೂರಿನಲ್ಲಿ ಮಾರಲು ಸಜ್ಜಾಗಿದ್ದರು ಎಂದು ತಿಳಿದು ಬಂದಿದೆ. ಅಲ್ಲದೇ, ಈ ವಿದೇಶಿ ಪೆಡ್ಲರ್ ಗಳು ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದರು ಎಂಬುದು ತನಿಖೆ ವೇಳೆ ಬಹಿರಂಗವಾಗಿದೆ.

    Continue Reading

    LATEST NEWS

    Trending