LATEST NEWS
Udupi: ನಿಲ್ಲಿಸಿದ್ದ ರಿಕ್ಷಾಕ್ಕೆ ಹಾನಿ- ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ..!
Published
12 months agoon
By
Adminಉಡುಪಿ: ಮನೆ ಸಮೀಪ ನಿಲ್ಲಿಸಿದ್ದ ರಿಕ್ಷಾದ ಬಿಡಿಭಾಗಗಳನ್ನು ಹಾನಿ ಮಾಡುತ್ತಿದ್ದ ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಡುಪಿ ಪಾಡಿಗಾರಿನ ಎಸ್ ಟಿ ಕಾಲನಿಯಲ್ಲಿ ನಡೆದಿದೆ.
ಗೋಪಾಲಕೃಷ್ಣ ಸಾಮಗ ಎಂಬವರ ಜಾಗದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿರುವ ಬಾದಾಮಿ ಮೂಲದ ವಲಸೆ ಕಾರ್ಮಿಕ ಕುಟುಂಬದ ಅಭಿಷೇಕ್ ಎಂಬ ವ್ಯಕ್ತಿ ಸಧ್ಯ ಕೃತ್ಯ ನಡೆಸುವಾಗಲೇ ಸಿಕ್ಕಿಬಿದ್ದಿದ್ದಾನೆ. ಕಳೆದ ಮೂರು ತಿಂಗಳಿಂದ ಈ ಕಾಲನಿಯಲ್ಲಿ ನಿಲ್ಲಿಸಿದ್ದ ರಿಕ್ಷಾದ ಬಿಡಿಭಾಗಗಳು ಹಾನಿಯಾಗುತ್ತಿತ್ತು. ಈ ಬಗ್ಗೆ ಎಷ್ಟೇ ಗಮನ ಇಟ್ರೂ ಸಾಧ್ಯವಾಗುತ್ತಿರಲಿಲ್ಲ. ಆದರೆ ಆರೋಪಿಗಾಗಿ ಕಾದು ಕುಳಿತಿದ್ದ ಆಟೋ ಚಾಲಕರು ಹಾಗೂ ಕಾಲನಿ ನಿವಾಸಿಗಳ ಕೈಗೆ ಈತ ಸಿಕ್ಕಿಬಿದ್ದಿದ್ದಾನೆ. ಸ್ಥಳೀಯ ಮನೆಯೊಂದರ ಮಹಡಿ ಮೇಲೆ ಅಡಗಿ ಕುಳಿತಿದ್ದ ರಿಕ್ಷಾ ಚಾಲಕರ ಕಣ್ಣೆದುರೇ ಆತ ಕೈಯಿಂದ ನಂಬರ್ ಪ್ಲೇಟ್ ಹಾನಿ ಮಾಡಿ ಹೋಗುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಾನೆ. ಕೂಡಲೇ ಆತನನ್ನ ಹಿಡಿಯಲಾಯಿತು. ಕಳೆದ ಮೂರು ತಿಂಗಳಿನಿಂದ ಸಾವಿರಾರು ರೂಪಾಯಿ ನಷ್ಟವನ್ನು ಎದುರಿಸಿದ ಆಟೊ ಚಾಲಕರು ಹಾಗೂ ತಮ್ಮ ಕಾಲನಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದ ಕಾರಣ ಆರೋಪಿಯ ಮೇಲೆ ಆಕ್ರೋಶ ವ್ಯಕ್ತವಾಗಿ ಪೊಲೀಸರಿಗೆ ಒಪ್ಪಿಸಿ ದೂರು ನೀಡಿದ್ದಾರೆ. ಸಧ್ಯ ನಷ್ಟವನ್ನ ಆರೋಪಿಯ ಪರ ಸಂಬಂಧಿಕರು ಭರಿಸಿದ್ದು ಮತ್ತೊಮ್ಮೆ ಕೃತ್ಯ ನಡೆಸದಂತೆ ಮುಚ್ಚಳಿಕೆ ಬರೆಸಿ ಕಳುಹಿಸಿದ್ದಾರೆ ಪೊಲೀಸರು.
LATEST NEWS
ಬಾಲಕಿಯರಿಬ್ಬರ ಮೇಲೆ ಅ*ತ್ಯಾಚಾ*ರವೆಸಗಿ ಬ್ಲ್ಯಾ*ಕ್‌ಮೇಲ್ ಮಾಡಿದ ಗ್ಯಾಂಗ್ ಅರೆಸ್ಟ್
Published
14 minutes agoon
15/01/2025ಮಂಗಳೂರು/ಬೆಳಗಾವಿ: ಮೂವರು ಸೇರಿಕೊಂಡು ಬಾಲಕಿಯರಿಬ್ಬರ ಮೇಲೆ ಗ್ಯಾಂ*ಗ್ ರೇ*ಪ್ ಮಾಡಿದ ಘಟನೆ ಬೆಳಗಾವಿಯ ರಾಯಭಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ನಡೆದಿದೆ.
ಆರೋಪಿಗಳಾದ ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಎಂಬುವವರನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಮಾತನಾಡಿ, “ಆರೋಪಿ ಅಭಿಷೇಕ್ ಇನ್‌ಸ್ಟಾಗ್ರಾಂ ಮೂಲಕ ಓರ್ವ ಬಾಲಕಿಗೆ ಪರಿಚಯವಾಗಿದ್ದಾನೆ. ಸವದತ್ತಿಗೆ ಹೋಗುತ್ತಿದ್ದೇನೆ ನೀನು ಬಾ ಎಂದು ಬಾಲಕಿಗೆ ಪುಸಲಾಯಿಸಿದ್ದಾನೆ. ಈತನ ಮಾತು ನಂಬಿ, ನೊಂದ ಬಾಲಕಿ ತನ್ನ ಸ್ನೇಹಿತೆಯನ್ನ ಕರೆದುಕೊಂಡು, ಇಬ್ಬರೂ ಒಟ್ಟಾಗಿ ಹಾರೂಗೇರಿ ಬಸ್ ನಿಲ್ದಾಣದಕ್ಕೆ ಹೋಗಿದ್ದಾರೆ. ಅಲ್ಲಿಂದ ಅಭಿಷೇಕ್ ಬಾಲಕಿಯರನ್ನು ಎರ್ಟಿಗಾ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಎರ್ಟಿಗಾ ಕಾರಿನಲ್ಲಿ ಮೂರೂ ಜನ ಆರೋಪಿಗಳಿದ್ದರು. ಸಂತ್ರಸ್ತ ಬಾಲಕಿಯರನ್ನು ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಜನವರಿ 3ರಂದು ಮಧ್ಯಾಹ್ನದ ವೇಳೆಗೆ ಗುಡ್ಡದಲ್ಲಿ ಬಾಲಕಿಯರ ಮೇಲೆ ಅ*ತ್ಯಾಚಾರವೆಸಗಿದ್ದಾರೆ” ಎಂದು ತಿಳಿಸಿದರು.
ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಆರೋಪಿಗಳು ‘ಮುಂದಿನ ವಾರ ಗೋವಾಕ್ಕೆ ಬರಬೇಕು. ಇಲ್ಲವಾದಲ್ಲಿ ವಿಡಿಯೋ ಪಬ್ಲಿಶ್ ಮಾಡುತ್ತೇವೆ. ದೂರು ಕೊಟ್ಟರೆ ಕೊ*ಲೆ ಮಾಡುತ್ತೇವೆ’ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಬಾಲಕಿಯರು ಮನೆಯಲ್ಲಿ ಈ ವಿಚಾರ ತಿಳಿಸಿದ್ದಾರೆ. ಬಳಿಕ, ಸಂತ್ರಸ್ತ ಬಾಲಕಿ ತಮ್ಮ ಸೋದರ ಸಂಬಂಧಿ ಜೊತೆಗೆ ಬಂದು ಜನವರಿ 13ರಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಕೊಟ್ಟ 24 ಗಂಟೆಯೊಳಗೆ ಇಬ್ಬರು ಆರೋಪಿಯನ್ನ ಬಂಧಿಸಲಾಗಿದೆ. ನಂತರ, ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. “ಆರೋಪಿಗಳ ಹಿನ್ನಲೆಯನ್ನು ಪರಿಶೀಲನೆ ಮಾಡುತ್ತೇವೆ. ಇನ್‌ಸ್ಟಾಗ್ರಾಂನಲ್ಲಿ ಹುಡಗಿ ಹಾಕಿದ್ದ ರೀಲ್ಸ್ ಪಾಲೋ ಮಾಡುತ್ತಿದ್ದ. ಅವರ ಮೊಬೈಲ್ಗಳನ್ನು ಜಪ್ತಿ ಮಾಡಿದ್ದು ಅದರಲ್ಲಿ ವಿಡಿಯೋಗಳು ಸಿಕ್ಕಿವೆ. ಗ್ಯಾಂಗ್ ರೇಪ್ ಪ್ರಕರಣ ಅಂತ ಕೇಸ್ ದಾಖಲಿಸಿದ್ದೇವೆ” ಎಂದು ಮಾಹಿತಿ ನೀಡಿದರು.
BIG BOSS
ಫಿನಾಲೆಗೆ ಡೇಟ್ ಫಿಕ್ಸ್; ಈ ಸಲ ಬಿಗ್ ಬಾಸ್ ಗೆಲ್ಲುವವರು ಯಾರು ?
Published
24 minutes agoon
15/01/2025By
NEWS DESK3ಮಂಗಳೂರು/ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 11’ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ. ಇದೇ ವೇಳೆ ಯಾರು ಫಿನಾಲೆ ತಲುಪಬಹುದು ಎನ್ನುವ ಲೆಕ್ಕಾಚಾರ ಸೋಷಿಯಲ್ ಮಿಡಿಯಾದಲ್ಲಿ ಶುರುವಾಗಿದೆ.
ಕನ್ನಡ ಬಿಗ್ ಬಾಸ್ 11ರ ಆರಂಭದಿಂದಲೇ ಹೊಸ ಹೊಸ ಮಾದರಿಯನ್ನು ವಿಕ್ಷಕರಿಗೆ ಪರಿಚಯಿಸಿದ್ದು, ಫಿನಾಲೆ ಕೂಡ ಹೊಸತನಕ್ಕೆ ನಾಂದಿ ಆಡಲಿದೆ.
ಮೂಲಗಳ ಪ್ರಕಾರ ಬಿಗ್ ಬಾಸ್ ಸೀಸನ್ 11 ಫಿನಾಲೆಗೆ ಭರ್ಜರಿ ಪ್ಲಾನ್ ಮಾಡಲಾಗಿದೆ. ಜನವರಿ 25 ಹಾಗೂ 26ರಂದು ಬಿಗ್ ಬಾಸ್ ಸೀಸನ್ 11ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ.
ಜನವರಿ 25ರ ಶನಿವಾರ ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಹೊಸ ಟ್ವಿಸ್ಟ್ ಕೊಟ್ರೆ, ಜನವರಿ 26ರ ಬಿಗ್ ಬಾಸ್ ಸೀಸನ್ ಕಪ್ ಎತ್ತುವವರು ಯಾರು ಅನ್ನೋದು ಗೊತ್ತಾಗಲಿದೆ.
ಸದ್ಯ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ ಬಿಗ್ ಬಾಸ್ ಟಾಪ್ 5 ಸ್ಪರ್ಧಿಗಳಲ್ಲಿ ತ್ರಿವಿಕ್ರಮ್, ಧನರಾಜ್, ಹನುಮಂತ, ಮಂಜು, ಭವ್ಯ ಇರುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಇದರಿಂದ ಈ ವಾರದ ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ಮೋಕ್ಷಿತಾ, ಗೌತಮಿ ಇಲ್ಲವಾದರೇ ರಜತ್ ಹೊರಹೋಗಬಹುದು ಎನ್ನಲಾಗಿದೆ.
ಇದನ್ನೂ ಓದಿ: ಧನರಾಜ್ ಗೆ ಒಲಿದ ಅದೃಷ್ಟ; ಭವ್ಯಾಗೆ ಆಘಾತ !
ಅಂತಿಮವಾಗಿ ಈ ಶನಿವಾರ ಕಿಚ್ಚ ಸುದೀಪ್ ಅವರು ಕೊನೇ ವಾರದ ಪಂಚಾಯ್ತಿಯಲ್ಲಿ ಒಬ್ಬರಿಗೆ ಬಿಗ್ ಶಾಕ್ ಕೊಡಲಿದ್ದಾರೆ. ಉಳಿದ 6 ಸ್ಪರ್ಧಿಗಳಲ್ಲಿ ಬಿಗ್ ಬಾಸ್ ಫಿನಾಲೆ ಟಿಕೆಟ್ ಗಾಗಿ ಟಾಸ್ಕ್ ನಡೆಯಲಿದೆ. ಇದರಲ್ಲಿ ಒಬ್ಬರು ಎಲಿಮಿನೇಟ್ ಆಗುತ್ತಾರೆ. ಅಂತಿಮವಾಗಿ ಟಾಪ್ 5 ಸ್ಪರ್ಧಿಗಳು ಫಿನಾಲೆ ತಲುಪಲಿದ್ದಾರೆ.
ಬಿಗ್ ಬಾಸ್ ವಿನ್ನರ್ ಯಾರು?
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಯಾರೆಂದು ಈಗಗಾಲೇ, ಬಿಗ್ ಬಾಸ್ ವೀಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ಕಳೆದ ವಾರ ಬಿಗ್ ಬಾಸ್ ನೀಡಿದ ಟಿಕೆಟ್ ಟು ಫಿನಾಲೆ ಟಾಸ್ಕ್ ನಲ್ಲಿ ಹನುಮಂತ ಭರ್ಜರಿಯಾಗಿ ಆಟವಾಡಿ ಮೊದಲ ಫೈನಲಿಸ್ಟ್ ಆದರು. ಆ ಪ್ರಕಾರ ಸೋಷಿಯಲ್ ಮೀಡಿಯಾದಲ್ಲಿ ಈ ಬಾರಿ ಬಿಗ್ ಬಾಸ್ ವಿನ್ನರ್ ಹನುಮಂತ ಎಂದು ಚರ್ಚೆಯಾಗುತ್ತಿದೆ..
ಆದರೆ, ವೈಲ್ಡ್ ಕಾರ್ಡ್ ಎಂಟ್ರಿ ಆದವರು ವಿನ್ನರ್ ಆಗುವುದಿಲ್ಲ ಎನ್ನುವುದು ಇನ್ನೂ ಕೆಲವರ ವಾದ. ಅಂತಿಮವಾಗಿ ಫೈನಲ್ ನಲ್ಲಿ ಯಾರು ಕಪ್ ಗೆಲ್ಲುತ್ತಾರೆ ಎಂದು ಕಾದು ನೋಡಬೇಕಿದೆ.
LATEST NEWS
ಗೆಳತಿಯ ಖಾ*ಸಗಿ ಫೊಟೋ, ವಿಡಿಯೋ ಶೇರ್ ಮಾಡಿ ಆ*ತ್ಮಹ*ತ್ಯೆಗೆ ಶರಣಾದ ಯುವಕ
Published
54 minutes agoon
15/01/2025ಮಂಗಳೂರು/ಹುಬ್ಬಳ್ಳಿ: ಯುವಕನೋರ್ವ ಪ್ರೇಯಸಿಯ ಕಾಟದಿಂದ ಬೇಸತ್ತು ಆ*ತ್ಮಹ*ತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ನಡೆದಿದೆ.
ಸಂದೇಶ್ ಉಣಕಲ್ (27) ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶನಿವಾರ ಮನೆಯಿಂದ ನಾ*ಪತ್ತೆಯಾಗಿದ್ದ ಸಂದೇಶ, ಉಣಕಲ್ ಕೆರೆಗೆ ಬಿ*ದ್ದು ಆ*ತ್ಮಹ*ತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮುನ್ನ ತನ್ನ ತಾಯಿಗೆ ವಾಯ್ಸ್ ಮೆಸೇಜ್ ಮಾಡಿ ‘ನನ್ನ ಸಾ*ವಿಗೆ ಸಂಜನಾ(ಪ್ರೇಯಸಿ) ಕಾರಣ’ ಎಂದು ತಿಳಿಸಿದ್ದಾನೆ.
ಮೋಟಾರ್ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಸಂದೇಶ್ ಏಕಾಏಕಿ ಶನಿವಾರ ಮನೆಯಿಂದ ನಾ*ಪತ್ತೆಯಾಗಿದ್ದ. ಈ ಕುರಿತು ಕುಟುಂಬಸ್ಥರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು, ಆದರೆ ಇದೀಗ ಸಂದೇಶ ಶ*ವವಾಗಿ ಪ*ತ್ತೆಯಾಗಿದ್ದಾನೆ. ಆ*ತ್ಮಹ*ತ್ಯೆಗೂ ಮುನ್ನ ತನ್ನ ಪ್ರೇಯಸಿಯ ಜೊತೆಗಿನ ಖಾ*ಸಗಿ ವಿಡಿಯೋ, ವಾಟ್ಸಪ್ ಚಾಟ್, ಸಂಭಾಷಣೆ ಮತ್ತು ಫೋಟೋಗಳನ್ನು ತನ್ನ ಸ್ನೇಹಿತರಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ. ಇನ್ನು ಮಗನನ್ನು ಕ*ಳೆದುಕೊಂಡ ತಾಯಿಯ ಕೂಗು ಮುಗಿಲು ಮುಟ್ಟಿದೆ.
ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಘಟನೆ ಕುರಿತು ಪ್ರಕರಣ ದಾಖಲಾಗಿದೆ, ಏಕಾಏಕಿ ಸಂದೇಶ್ ಆ*ತ್ಮಹ*ತ್ಯೆ ಮಾಡಿಕೊಂಡ ಹಿಂದಿನ ನಿಜವದ ಕಾರಣ ತಿಳಿದಿಲ್ಲ. ಈ ಕುರಿತು ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸ್ ತನಿಖೆಯಲ್ಲಿ ಸಾವಿಗೆ ಕಾರಣ ತಿಳಿದು ಬರಬೇಕಷ್ಟೇ.
LATEST NEWS
ಧನರಾಜ್ ಗೆ ಒಲಿದ ಅದೃಷ್ಟ; ಭವ್ಯಾಗೆ ಆಘಾತ !
ಸರಿಗಮ ವಿಜಿ ಹೆಸರಿಗೆ ‘ಸರಿಗಮ’ ಸೇರಿಕೊಳ್ಳಲು ಆ ಒಂದು ನಾಟಕ ಕಾರಣ !
ಬೈಕ್ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಇ*ನ್ನಿಲ್ಲ
ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ
ಮೃ*ತಪಟ್ಟರೆಂದು ಭಾವಿಸಿ ಶವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವ್ಯಕ್ತಿ
Trending
- BIG BOSS4 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS5 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS2 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- FILM6 days ago
ಮಗುವಿನೊಂದಿಗೆ ಕೊಲ್ಲೂರು ದೇಗುಲಕ್ಕೆ ಹರ್ಷಿಕಾ ದಂಪತಿ ಭೇಟಿ