Connect with us

DAKSHINA KANNADA

ಅವ್ಯವಸ್ಥೆಯೊಂದಿಗೆ ಕತ್ತಲ ಕೂಪದಲ್ಲಿ ಉಳ್ಳಾಲ ಮಡ್ಯಾರು ಸರಕಾರಿ ಹಾಸ್ಟೆಲ್‌ : ಅಪಾಯದಲ್ಲಿ 250 ವಿದ್ಯಾರ್ಥಿನಿಯರು..!

Published

on

ಉಳ್ಳಾಲ : ಕಗ್ಗತ್ತಲು ಆವರಿಸಿದ 500 ಮೀ ಉದ್ದದ ನಿರ್ಜನ ಪ್ರದೇಶದ ದಾರಿಯಲ್ಲಿ  ಮೊಬೈಲ್ ಟಾರ್ಚ್ ಹಿಡಿದುಕೊಂಡೇ ವಿದ್ಯಾರ್ಥಿನಿಯರ ಪ್ರಯಾಣ, ಕೆಂಪು ತೈಲ ಮಿಶ್ರಿತ ಹಾಸ್ಟೆಲ್ ಬಾವಿ ನೀರು, ವಠಾರವಿಡೀ ತುಂಬಿದ ಶೌಚಾಲಯದ ಹೊಂಡದ ನೀರು, ಬಸ್ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿನಿಯರ ನರಕಯಾತನೆ. 

ಇದು ಕೋಟೆಕಾರು ಪಟ್ಟಣ ಪಂಚಾಯತ್‌ವ್ಯಾಪ್ತಿಯ 11ನೇ ವಾರ್ಡಿನ ಮಡ್ಯಾರ್  ಭಾಗದಲ್ಲಿ ಒಂದು ವರ್ಷದ ಹಿಂದೆ ನಿರ್ಮಾಣವಾದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾಗಾಂಧಿ ಮಹಿಳಾ ನರ್ಸಿಂಗ್ ವಿದ್ಯಾರ್ಥಿನಿ ನಿಲಯದ 250 ವಿದ್ಯಾರ್ಥಿನಿಯರ ಕಥೆ ವ್ಯಥೆ.

ಮಡ್ಯಾರ್ ಪೌರ್ಣಮಿ ಗ್ಲಾಸ್ ಹೌಸ್ ಬಳಿ ಮುಖ್ಯ ರಸ್ತೆಯಲ್ಲಿ ಬಸ್ಸಿನಿಂದ ಇಳಿಯುವ ವಿದ್ಯಾರ್ಥಿನಿಯರು 500 ಮೀ. ದೂರದಲ್ಲಿರುವ ಹಾಸ್ಟೆಲ್‌ಗೆ ನಡೆದುಕೊಂಡೇ ಹೋಗ ಬೇಕಿದೆ.

ಸಂಜೆ 6.30 ಬಳಿಕ ಬರುವ ವಿದ್ಯಾರ್ಥಿನಿಯರು ನಿರ್ಜನವಾಗಿರುವ  ರಸ್ತೆಯುದ್ದಕ್ಕೂ ಮೊಬೈಲ್ ಟಾರ್ಚ್ ಹಿಡಿದುಕೊಂಡು, ಆತಂಕದಿಂದಲೇ ನಿಲಯ ತಲುಪ ಬೇಕಿದೆ.

ಮಡ್ಯಾರ್ ನಿರ್ಜನ ಪ್ರದೇಶದಲ್ಲಿ 2022ರ ಜ.24 ರಂದು ಈ ಹಾಸ್ಟೆಲನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಚಿವ ಅಂಗಾರ, ಶಾಸಕ ಯು.ಟಿ ಖಾದರ್ ಉಪಸ್ಥಿತಿಯಲ್ಲಿ ಉದ್ಘಾಟಿಸಿದ್ದರು.

ಎರಡು ಹಾಸ್ಟೆಲ್‌ಕಟ್ಟಡಗಳಲ್ಲಿ  250ಕ್ಕೂ ರಷ್ಟು ವಿದ್ಯಾರ್ಥಿನಿಯರಿದ್ದಾರೆ. ಅವರೆಲ್ಲ ಮಂಗಳೂರಿನ ವಿವಿಧ ಕಾಲೇಜುಗಳಲ್ಲಿ ಮತ್ತು ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವವರು.

ಮಂಗಳೂರಿನಿಂದ 19 ಕಿ.ಮೀ ಹಾಗೂ ಕೊಣಾಜೆಯಿಂದ 8 ಕಿ.ಮೀ ವರೆಗೆ ವಿದ್ಯಾರ್ಥಿನಿಯರು ಪ್ರಯಾಣಿಸ ಬೇಕಿದೆ.

ಆದರೆ ಮಡ್ಯಾರ್ ಪ್ರದೇಶಕ್ಕೆ ಬೆರಳೆಣಿಕೆಯ ಬಸ್ಸುಗಳು ಮಾತ್ರ ಇದ್ದು,  ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿನಿಯರು ಕಾಲೇಜಾಗಲಿ, ವಿದ್ಯಾರ್ಥಿ ನಿಲಯವನ್ನಾಗಲಿ ತಲುಪಲು ಸಾಧ್ಯವಾಗುತ್ತಿಲ್ಲ.

ಮುಖ್ಯ ರಸ್ತೆಯಿಂದ ವಿದ್ಯಾರ್ಥಿನಿ ನಿಲಯದವರೆಗೆ 18 ವಿದ್ಯುತ್ ಕಂಬಗಳಿದ್ದು ಒಂದರಲ್ಲಿಯೂ ದಾರಿ ದೀಪವಿಲ್ಲ. ನಿಲಯದ ಒಳಗಿನ ಬಾವಿಯ ನೀರು ಸಂಪೂರ್ಣ ತೈಲಮಿಶ್ರಿತವಾಗಿದೆ.

ಕೆಂಪು ಬಣ್ಣಕ್ಕೆ ತಿರುಗಿರುವ ನೀರನ್ನು  ಸ್ಥಳೀಯ ಕೌನ್ಸಿಲರ್ ಹರೀಶ್ ರಾವ್ ಮಡ್ಯಾರ್ ನೇತೃತ್ವದಲ್ಲಿ  ಲ್ಯಾಬೊರೇಟರಿಗೆ ಪರೀಕ್ಷೆಗಾಗಿ  ಕಳುಹಿ ಸಿದಾಗ ನೀರಿನಲ್ಲಿ ಅಧಿಕ ಖನಿಜ ಅಂಶ ಇರುವುದರಿಂದ ಕುಡಿಯಲು ಯೋಗ್ಯವಲ್ಲ ಎನ್ನುವ ವರದಿ ಲಭಿಸಿದೆ.

ಆದರೂ ವಿದ್ಯಾರ್ಥಿನಿಯರು ಅದೇ ನೀರು ಕುಡಿದು ದಿನ ಕಳೆಯ ಬೇಕಿದೆ. ಇನ್ನೊಂದೆಡೆ  ಆವರಣದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸಿದ್ದರೂ, ಅದರ ನಿರ್ವಹಣೆ ಅಸಮರ್ಪಕವಾಗಿದ್ದು, ಕೊಳಚೆ ನೀರು ತುಂಬಿ ತುಳುಕಿ ಸ್ಥಳೀಯರ ತೋಟಕ್ಕೆ, ಮನೆ ಅವರಣಕ್ಕೆ ನುಗ್ಗುತ್ತಿದೆ.

ಈ ಬಗ್ಗೆ ಸಾರ್ವಜನಿಕರು ಸ್ಥಳೀಯ ಕೌನ್ಸಿಲರನ್ನು ತರಾಟೆಗೆ ತೆಗೆದುಕೊಂಡು ಸಮಸ್ಯೆ ನಿರ್ವಹಣೆಗೆ ಆಗ್ರಹಿಸಿದ್ದಾರೆ.

ಶೌಚಾಲಯದ ಪಿಟ್ ಗಳು ತುಂಬಿ ಹಾಸ್ಟೆಲ್ ಆವರಣವಿಡೀ ಕೊಳಚೆ ನೀರು ಹರಿದು ಅವ್ಯವಸ್ಥೆಯ ಆಗರವಾಗಿದೆ.

ಪ್ರದೇಶದಲ್ಲಿ ವಿದ್ಯಾರ್ಥಿನಿಯರ ರಕ್ಷಣೆಯ ಪ್ರಶ್ನೆ ಒಂದೆಡೆಯಾದರೆ ಇನ್ನೊಂದೆಡೆ ಆರೋಗ್ಯದ ಕಾಳಜಿಯನ್ನು ಸಂಬಂಧಪಟ್ಟ ಇಲಾಖೆ ಮರೆತಂತೆ ಕಾಣುತ್ತಿದೆ.

ಈ ಕುರಿತು ವಿದ್ಯಾರ್ಥಿನಿಯರು ಸ್ಥಳೀಯ  ಕೌನ್ಸಿಲರ್ ಮೂಲಕ  ಸಮಸ್ಯೆ ಪರಿಹಾರಕ್ಕೆ  ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

`ವಿದ್ಯಾರ್ಥಿನಿ ನಿಲಯದ ಸಮಸ್ಯೆಗಳ ಆಗರವನ್ನು ವಿದ್ಯಾರ್ಥಿನಿಯರು ಸ್ಥಳೀಯ ಜನಪ್ರತಿನಿಧಿಯಾಗಿರುವ ತನ್ನಲ್ಲಿ ದೂರಿಕೊಂಡರು.

ಅದರಂತೆ ಕೋಟೆಕಾರು ಪಟ್ಟಣ ಪಂಚಾಯತ್‌ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದೇನೆ. ಪಂಚಾಯತ್‌ ಎಂಜಿನಿಯರ್ ಸ್ಥಳಕ್ಕಾಗಮಿಸಿ  ಪರಿಶೀಲಿಸಿದ್ದಾರೆ.

ಶಾಸಕ ಯು.ಟಿ ಖಾದರ್ ಅವರನ್ನು ಭೇಟಿಯಾಗಿದ್ದು, ಜ.26 ರ ವೇಳೆಗೆ ಸಭೆ ಕರೆದು ಸಮಸ್ಯೆಗಳ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.

ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆ ಆಗ ಬಾರದು. ಅಪಾಯವಾದಲ್ಲಿ ಊರು ಮತ್ತು ಗ್ರಾಮಕ್ಕೆ ಕೆಟ್ಟ ಹೆಸರು.

ವಾರ್ಡಿನಲ್ಲಿ ಯಾವುದೇ ಸಮಸ್ಯೆಯಾಗ ಬಾರದು ಎನ್ನುವುದು ಜನಪ್ರತಿನಿಧಿಯಾದ ನನ್ನ ಅಭಿಪ್ರಾಯ. ಕೂಡಲೇ ಸಂಬಂಧಪಟ್ಟ  ಇಲಾಖೆಯವರು ಎಚ್ಚೆತ್ತು ತುರ್ತು ಪರಿಹಾರ ಕಂಡುಕೊಳ್ಳಬೇಕಿದೆ’ ಎನ್ನುತ್ತಾರೆ ಕೌನ್ಸಿಲರ್ ಹರೀಶ್ ರಾವ್ ಮಡ್ಯಾರ್.

ಈ ಸಮಾಜದಲ್ಲಿ ಹೆಣ್ಮಕ್ಕಳಿಗೆ ಅಭದ್ರತೆ ಕಾಡುವ ಕಾಲಘಟ್ಟದಲ್ಲಿ 250 ವಿದ್ಯಾರ್ಥಿನಿಯರು ವಾಸಿಸುವ ಈ ಸರ್ಕಾರಿ ಹಾಸ್ಟೆಲ್‌ ವ್ಯವಸ್ಥೆ ತುರ್ತಾಗಿ ಸರಿಪಡಿಸಿಕೊಳಬೇಕಾದ ಅಗತ್ಯವಿದೆ.

 

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

DAKSHINA KANNADA

ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ

Published

on

ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್‌ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Continue Reading

LATEST NEWS

Trending