ಮಂಗಳೂರು/ಮೈಸೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ದರ್ಶನ್ ಸೇರಿ ಕೆಲವರು ಜೈಲಿನಿಂದ ರಿಲೀಸ್ ಆಗಿದ್ದಾರೆ. 7 ಮಂದಿ ಆರೋಪಿಗಳಿಗೆ ಸೆರೆವಾಸದಿಂದ ಮುಕ್ತಿ ಸಿಕ್ಕಿದೆ. ಇದರ ಮಧ್ಯೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ದಾಸ ಮೈಸೂರಿನಲ್ಲಿ ರಿಲ್ಯಾಕ್ಸ್ ಮೋಡ್‌ಗೆ ಜಾರಿದ್ದಾರೆ.
ದರ್ಶನ್ ಗೆ ರೆಗ್ಯುಲರ್ ಬೇಲ್ ಸಿಕ್ಕಿದ್ದರೂ ಕೂಡ ಮೈಸೂರಿಗೆ ಹೋಗಲು ಅವಕಾಶ ಇರಲಿಲ್ಲ. ಇದರಿಂದ ದರ್ಶನ್ ಗೆ ಮೈಸೂರಿನ ಫಾರ್ಮ್ ಹೌಸ್ ಕಡೆ ಹೋಗಲು ತುಡಿತ ಹೆಚ್ಚಾಗಿತ್ತು. ಇದೇ ನಿಟ್ಟಿನಲ್ಲಿ ಸೆಷನ್ಸ್ ಕೋರ್ಟ್ ಗೆ ದಾಸ ಅರ್ಜಿ ಸಲ್ಲಿಸಿದರು. ಕೋರ್ಟ್ ಕೂಡ ದರ್ಶನ್ ಗೆ ಅನುಮತಿ ನೀಡಿತ್ತು. ಡಿಸೆಂಬರ್ 20ರಿಂದ ಜನವರಿ 05ರವರೆಗೆ 2ವಾರ ಪಮಿರ್ಷನ್ ಕೊಟ್ಟಿದೆ.
ಫಾರ್ಮ್ ಹೌಸ್ ನಲ್ಲಿ ದಾಸನ ಬೆನ್ನು ನೋವು ಮಾಯಾ !
ದರ್ಶನ್ ಗೆ ಕೋರ್ಟ್ ಅನುಮತಿ ಕೊಟ್ಟ ಬೆನ್ನಲ್ಲೇ ನಿನ್ನೆ ಬೆಳಗ್ಗೆ ದರ್ಶನ್ ಮೈಸೂರಿಗೆ ಪ್ರಯಣಿಸಿದ್ದಾರೆ. ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ವಿನೀಶ್ ಕ್ಯಾಟವೇರಿ ಫಾರ್ಮ್ ಹೌಸ್ನಲ್ಲಿ ರೆಸ್ಟ್ ಮಾಡುತ್ತಿದ್ದಾರೆ. ಫಾರ್ಮ್ ಹೌಸ್ನಲ್ಲಿ ಪ್ರಾಣಿಗಳ ಜೊತೆ ಕಾಲಕಳೆಯುತ್ತ ದರ್ಶನ್ ಓಡಾಡುತ್ತಿದ್ದಾರೆ. ತೋಟದ ಕೆಲಸ ಮಾಡಿಸುತ್ತ ಬೆನ್ನುನೋವನ್ನೇ ಮರೆತಂತೆ ಕಾಣಿಸಿಕೊಂಡಿದ್ದಾರೆ.
ಇಷ್ಟುದಿನ ಜೈಲಿನಲ್ಲಿ ಬಂಧಿಯಾಗಿದ್ದ ದರ್ಶನ್ ಈಗ ರಿಲ್ಯಾಕ್ಸ್ ಆಗಿದ್ದಾರೆ. ಆದರೆ ದಾಸನಿಗೆ ಮತ್ತೆ ಶಾಕ್ ಕೊಡಲು ಪೊಲೀಸ್ ಇಲಾಖೆ ಪ್ರಕರಣವನ್ನು ಸುಪ್ರೀಂಕೋರ್ಟ್ ಗೆ ಕೊಂಡೊಯ್ಯಲು ಸಜ್ಜಾಗಿದೆ.
ಮಂಗಳೂರು/ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್, ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ (One8 Commune) & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.
ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ರೂಪದ ವಿವರಣೆ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.
ಮಂಗಳೂರು/ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಜೈಲಿನಿಂದ ಮುಕ್ತಿ ಸಿಕ್ಕಿದೆ. 7 ಜನ ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ರಿಲೀಸ್ ಆಗಿದ್ದಾರೆ. ಇದೀಗ ಡೆವಿಲ್ ಪಡೆಗೆ ಮತ್ತೊಂದು ಖುಷಿಯ ಸುದ್ದಿ ಸಿಕ್ಕಿದೆ.
ದರ್ಶನ್‌ಗೆ ತಮ್ಮ ತವರಿಗೆ ತೆರಳಲು ಅನುಮತಿ ಸಿಕ್ಕಿದೆ. ಚಿತ್ರದುರ್ಗದ ಆರೋಪಿಗಳು ತಮ್ಮ ಊರಿಗೆ ಪಯಣಿಸಿದ್ದಾರೆ.
ಪ್ರಕರಣದ ಆರೋಪ ಹೊತ್ತು ಜೈಲುವಾಸ ಅನುಭವಿಸಿ ಬಂದಿರುವ ದರ್ಶನ್‌ಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದೆ. ಬೇಲ್ ಸಿಗುತ್ತಿದ್ದಂತೆ ಬೆನ್ನುನೋವು ಅಂತ ಆಸ್ಪತ್ರೆ ಸೇರಿದ್ದ ದಾಸ ಡಿಸ್ಚಾರ್ಜ್ ಆಗಿದ್ದಾರೆ.
ಡಿ.13ರಂದು ಹೈಕೋರ್ಟ್ ದರ್ಶನ್ ಸೇರಿ ಏಳು ಮಂದಿಗೆ ಜಾಮೀನು ನೀಡಿತ್ತು. ಆದರೆ ನ್ಯಾಯಾಲಯದ ವ್ಯಾಪ್ತಿಬಿಟ್ಟು ತೆರಳಕೂಡದು ಎಂದು ಷರತ್ತು ವಿಧಿಸಿತ್ತು. ಈ ಹಿನ್ನೆಲೆಯಲ್ಲಿ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಮೈಸೂರಿಗೆ ತೆರಳಲು ನಾಲ್ಕು ವಾರಗಳ ಕಾಲ ಅನುಮತಿ ಕೇಳಿದ್ದರು. ಅದಕ್ಕೆ ತಕರಾರಿದ್ದರೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ನ್ಯಾಯಾಲಯ ಸೂಚಿಸಿತ್ತು.
ಆದರೆ, ಸರ್ಕಾರಿ ಅಭಿಯೋಜಕರು ಯಾವುದೇ ಆಕ್ಷೇಪಣೆ ಸಲ್ಲಿಸದ ಹಿನ್ನೆಲೆಯಲ್ಲಿ 15 ದಿನಗಳ ಕಾಲ ತೆರಳಲು ಅವಕಾಶ ನೀಡಿದೆ.
ಮೈಸೂರಿನಲ್ಲಿ ದರ್ಶನ್ ಮಾಲೀಕತ್ವದ ಫಾರ್ಮ್ ಹೌಸ್ ಹೊಂದಿದ್ದಾರೆ. ಸಿನಿಮಾ ಶೂಟಿಂಗ್ ಇಲ್ಲದಿದ್ದಾಗ ಮೈಸೂರಿನಲ್ಲೇ ತೋಟದ ಮನೆಯಲ್ಲಿ ಹೆಚ್ಚು ವಾಸ್ತವ್ಯ ಹೂಡುತ್ತಿದ್ದರು. ಕೊಲೆ ಪ್ರಕರಣದ ನಂತರ ದರ್ಶನ್ ಫಾರ್ಮ್ ಹೌಸ್ ಕಡೆ ಹೋಗಿರಲಿಲ್ಲ.
ಜಗದೀಶ್ ಮತ್ತು ಅನುಕುಮಾರ್ ರಿಲೀಸ್
ಇನ್ನೂ ರೇಣುಕಾಸ್ವಾಮಿಯನ್ನ ಕಿಡ್ನಾಪ್ ಮಾಡಿ ಕರೆತಂದಿದ್ದ ಜಗ್ಗ ಮತ್ತು ಅನುಕುಮಾರ್ ಚಿತ್ರದುರ್ಗಕ್ಕೆ ತೆರಳಿದ್ದಾರೆ. ಶಿವಮೊಗ್ಗ ಜೈಲಿಂದ ರಿಲೀಸ್ ಆದ ಜಗದೀಶ್ ಚಿತ್ರದುರ್ಗದ ಅಗಸನಕಲ್ಲು ಏರಿಯಾದ ತಮ್ಮ ಮನೆಗೆ ತೆರಳಿದ್ದಾನೆ. ಮನೆಯ ಮುಂಭಾಗದ ಜೋಡಿ ಮಾರಮ್ಮ ದೇವಸ್ಥಾನದಲ್ಲಿ ಪೂಜೆ ಮಾಡಿ ತೀರ್ಥ, ಪ್ರಸಾದ ಸ್ವೀಕರಿಸಿ ಜಗದೀಶ್ ಮನೆಗೆ ತೆರಳಿದ್ದಾನೆ. ಮಗ ಬಿಡುಗಡೆ ಹಿನ್ನೆಲೆಯಲ್ಲಿ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಪಾಪವನ್ನ ಹೊತ್ತಿದ್ದ ಡಿ ಗ್ಯಾಂಗ್‌ಗೆ ಸದ್ಯ ಬಿಗ್ ರಿಲೀಫ್ ಸಿಕ್ಕಿದೆ. ಇದರ ನಡುವೆ ಪೊಲೀಸ್ ಅಧಿಕಾರಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದ್ದಾರೆ.
ಮಂಗಳೂರು/ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯ ಸಮಿತಿ ಸೇರಿದಂತೆ, ಆರು ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದೆ.
ಡಿಸೆಂಬರ್ 31 ರಿಂದ ರಾಜ್ಯದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ಸುಗಳು ಸಂಚಾರ ಮಾಡುವುದು ಅನುಮಾನವಾಗಿದೆ.
‘ಜನವರಿ ಒಂದರಿಂದ ಬಸ್ ಸಂಚಾರ ಇರುವುದಿಲ್ಲ, ಸಹಕರಿಸಿ’ ಎಂದು ಪ್ರಯಾಣಿಕರಿಗೆ ಮತ್ತು ಸಾರಿಗೆ ನೌಕರರಿಗೆ ಬುಧವಾರ ಕರಪತ್ರ ಹಂಚಿಕೆ ಮಾಡಲಾಗಿದೆ. ಮೆಜೆಸ್ಟಿಕ್ ಬಸ್ ಸ್ಟ್ಯಾಂಡ್, ಡಿಪೋ-7 ವೋಲ್ವೋ ಬಸ್ ಡಿಪೋ, ಡಿಪೋ- 13 ಕತ್ರಿಗುಪ್ಪೆ, ಡಿಪೋ-20 ಬನಶಂಕರಿ ಸೇರಿದಂತೆ ಬಿಎಂಟಿಸಿ ಬಸ್ ಡಿಪೋಗಳಿಗೆ ತೆರಳಿ ಡಿಸೆಂಬರ್ 31 ರಿಂದ ಯಾರೂ ಕರ್ತವ್ಯ ನಿರ್ವಹಿಸಬಾರದು ಎಂದು ಕಂಡಕ್ಟರ್, ಡ್ರೈವರ್, ಮೆಕಾನಿಕ್ಗಳಿಗೆ ಸಾರಿಗೆ ಮುಖಂಡರು ಕರಪತ್ರ ಹಂಚಿದ್ದಾರೆ.
ಈ ವೇಳೆ ಮಾತನಾಡಿದ ಸಾರಿಗೆ ಮುಖಂಡರು, ಶಕ್ತಿ ಯೋಜನೆಯ ಬಾಕಿ ಹಣವೇ ಎರಡು ಸಾವಿರ ಕೋಟಿ ರೂಪಾಯಿಯಷ್ಟು ಇದೆ. ಅದನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಶಕ್ತಿ ಯೋಜನೆ: ಸರ್ಕಾರ ನಿಗಮಗಳಿಗೆ ಬಿಡುಗಡೆ ಮಾಡಬೇಕಿರುವ ಬಾಕಿ ಹಣದ ವಿವರ
ಕೆಎಸ್ಆರ್ಟಿಸಿ -714.39 ಕೋಟಿ ರೂ.
ಬಿಎಂಟಿಸಿ – 290.97 ಕೋಟಿ ರೂ.
ಎನ್ಡಬ್ಲ್ಯುಕೆಆರ್ಟಿಸಿ – 408.42 ಕೋಟಿ ರೂ.
ಕೆಕೆಆರ್ಟಿಸಿ – 347.86 ಕೋಟಿ ರೂ.
ಒಟ್ಟು ಮೊತ್ತ – 1761.64 ಕೋಟಿ ರುಪಾಯಿ ರೂ.
ಸರ್ಕಾರಕ್ಕೆ ಮುಷ್ಕರದ ನೋಟಿಸ್ ನೀಡಿರುವ ಕ್ರಿಯಾ ಸಮಿತಿ
ಮುಷ್ಕರ ನಡೆಸುವ ಬಗ್ಗೆ ನೌಕರರ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 9ರಂದು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕಾರ್ಮಿಕ ಇಲಾಖೆಯ ನಿಯಮಗಳ ಪ್ರಕಾರ, ಮುಷ್ಕರ ಮಾಡುವ ಮುನ್ನ 21 ದಿನಗಳ ಕಾಲ ಮುಂಚಿತವಾಗಿ ನೋಟಿಸ್ ನೀಡಬೇಕು. ಆಹಿನ್ನೆಲೆಯಲ್ಲಿ ಈಗಾಗಲೇ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಒಟ್ಟಿನಲ್ಲಿ ಡಿಸೆಂಬರ್ 31ರಿಂದ ನಾಲ್ಕು ನಿಗಮಗಳ ಬಸ್ ಸಂಚಾರ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.