Connect with us

    LATEST NEWS

    ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

    Published

    on

    ಮಂಗಳೂರು/ನವದೆಹಲಿ : ದೆಹಲಿ ವಿಧಾನಸಭೆಗೆ ಕೇಂದ್ರ ಚುನಾವಣಾ ಆಯೋಗವು ಮಂಗಳವಾರ ಚುನಾವಣೆಗೆ ದಿನಾಂಕ ಘೋಷಿಸಿದೆ.

    2025ರ ಫೆಬ್ರವರಿ 23ಕ್ಕೆ ವಿಧಾನಸಭೆಯ ಅವಧಿಯು ಕೊನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘ಮತದಾನಕ್ಕೆ ಫೆ. 5ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಫೆ. 8ಕ್ಕೆ ಎಣಿಕೆ ನಡೆಯಲಿದೆ’ ಎಂದು ತಿಳಿಸಿದರು.

    ಇದನ್ನೂ ಓದಿ: ದೆಹಲಿಯಲ್ಲಿ ದಟ್ಟ ಮಂಜು: 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ

    ‘ಒಟ್ಟು 70 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದರಲ್ಲಿ 58 ಸಾಮಾನ್ಯ ಹಾಗೂ 12 ಮೀಸಲು ಕ್ಷೇತ್ರಗಳಿವೆ. ಇದಕ್ಕಾಗಿ 13,033 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶೇ. 100ರಷ್ಟು ವೆಬ್ ಕಾಸ್ಟಿಂಗ್ ನಡೆಸಲಾಗುವುದು’ ಎಂದು ತಿಳಿಸಿದರು.

    ದೆಹಲಿ ವಿಧಾನಸಭೆಯ 70 ಕ್ಷೇತ್ರಗಳಲ್ಲಿ 12 ಮೀಸಲು ಕ್ಷೇತ್ರವಾಗಿದೆ. ಒಟ್ಟು 1.55 ಕೋಟಿ ಮತದಾರರಿದ್ದು, ಇದರಲ್ಲಿ ಪುರುಷ ಮತದಾರರು 85,49,645, ಮಹಿಳಾ ಮತದಾರರು 71,73,952 ಇದ್ದಾರೆ. 1262 ತೃತೀಯಲಿಂಗಿಗಳಿದ್ದಾರೆ.

    ಚುನಾವಣೆಗೂ ಮುನ್ನ ಮತದಾರರು ತಮ್ಮ ಹೆಸರನ್ನು ಆನ್ ಲೈನ್ ನಲ್ಲಿ ಪರಿಶೀಲಿಸಿಕೊಳ್ಳಬೇಕು ಎಂದು ಆಯೋಗ ಮನವಿ ಮಾಡಿಕೊಂಡಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಜಾತ್ರೆಯಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಆನೆ; 29 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

    Published

    on

    ತಿರುವನಂತಪುರಂ: ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಏಕಾಏಕಿ ಜನರ ಗುಂಪಿನ ಮೇಲೆ ದಾಳಿ ನಡೆಸಿದ ಪರಿಣಾಮ 29 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತಿರೂರಿನಲ್ಲಿ ನಡೆದಿದೆ.

    ವಾದ್ಯಗಳ ಸದ್ದು, ಜನರ ಗದ್ದಲದ ನಡುವೆ ನಿಯಂತ್ರಣ ಕಳೆದುಕೊಂಡ ಪಾಕ್ಕಾತು ಶ್ರೀಕುಟ್ಟನ್ ಹೆಸರಿನ ಆನೆ, ವ್ಯಕ್ತಿಯೊಬ್ಬನನ್ನ ಎತ್ತಿ ಎಸೆದಿದೆ. ಈ ವೇಳೆ ಗುಂಪಿನಲ್ಲಿದ್ದ ಜನ ಎದ್ನೋ ಬಿದ್ನೋ ಅಂತ ಓಡಿದ್ದಾರೆ. ಕೆಲವರು ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

    ನಸುಕಿನ 2:30ರ ಸುಮಾರಿಗೆ ಮಾವುತ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರಿಂದ ಹೆಚ್ಚಿನ ಹಾನಿ ತಪ್ಪಿದೆ. ಘಟನೆಯಲ್ಲಿ ಸುಮಾರು 29 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

    ತಿರೂರಿನಲ್ಲಿ ನಡೆದ ಪುತಿಯಂಗಡಿ ಉತ್ಸವದಲ್ಲಿ ನೂರಾರು ಮಂದಿ ನೆರೆದಿದ್ದರು. ಉತ್ಸವದಲ್ಲಿ ಕನಿಷ್ಠ ಐದು ಆನೆಗಳು ಅಲಂಕಾರಭೂಷಿತವಾಗಿ ಪಾಲ್ಗೊಂಡಿದ್ದವು. ಈ ವೇಳೆ ಹಠಾತ್ತನೆ ಜನರ ಕಡೆಗೆ ನುಗ್ಗಿದ್ದ ಪಾಕ್ಕಾತು ಶ್ರೀಕುಟ್ಟನ್ ಹೆಸರಿನ ಆನೆ ದಾಳಿ ನಡೆಸಿದೆ. ಈ ಕುರಿತ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಮೂಲಗಳ ಪ್ರಕಾರ, ಆನೆ ದಾಳಿಗೆ ಒಳಗಾದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಕೋಟಕ್ಕಲ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

    Continue Reading

    LATEST NEWS

    ಆಯ್ಕೆ ಸಮಿತಿಗೆ ಎಚ್ಚರಿಕೆ ನೀಡಿದ ಬಿಸಿಸಿಐ ಕಾರ್ಯದರ್ಶಿ

    Published

    on

    ಮಂಗಳೂರು/ಮುಂಬೈ : ಕಳೆದ 8 ಟೆಸ್ಟ್ ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಗೆದ್ದಿರುವ ಟೀಂ ಇಂಡಿಯಾದ ಸ್ಥಿತಿ ಚಿಂತಾಜನಕವಾಗಿದೆ.

    ನ್ಯೂಜಿಲೆಂಡ್ ವಿರುದ್ದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯನ್ನು ಬಿಟ್ಟುಕೊಟ್ಟಿತು. ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು 3-1 ಅಂತರದಿಂದ ಗೆದ್ದುಕೊಂಡಿತು. ಇದು ಬಿಸಿಸಿಐ ಅಸಮಾಧಾನಕ್ಕೆ ಕಾರಣವಾಗಿದ್ದು, ಆಯ್ಕೆ ಸಮಿತಿಗೆ ಸರಿಯಾದ ತಂಡವನ್ನು ಆಯ್ಕೆ ಮಾಡುವಂತೆ ಸೂಚನೆ ಕೊಟ್ಟಿದೆ. ಜಯ್ ಶಾ ಬದಲಿಗೆ ಬಿಸಿಸಿಐನಲ್ಲಿ ಕಾರ್ಯದರ್ಶಿ ಹುದ್ದೆ ಅಲಂಕರಿಸಿರುವ ದೇವಜಿತ್ ಸೈಕಿಯಾ, ಆಯ್ಕೆ ಸಮಿತಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ.

    ಇದನ್ನೂ ಓದಿ: ಶಾರುಖ್ ಪತ್ನಿ ಗೌರಿ ಮತಾಂತರ? 

    ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟೀಕೆಗಳನ್ನು ಎದುರಿಸಿದ್ದರು. ಪರ್ತ್ ಟೆಸ್ಟ್ ನಲ್ಲಿ ಕೊಹ್ಲಿ ಶತಕ ಬಾರಿಸಿ ಮಿಂಚಿದರು. ಇದರ ಹೊರತಾಗಿ ಇಡೀ ಸರಣಿಯಲ್ಲಿ ಕೇವಲ 190 ರನ್ ಗಳಿಸಿದರು. ರೋಹಿತ್ ಶರ್ಮಾ ಸ್ಥಿತಿ ಅದಕ್ಕಿಂತ ಕೆಟ್ಟದಾಗಿತ್ತು. 5 ಇನ್ನಿಂಗ್ಸ್ ಗಳಲ್ಲಿ ಕೇವಲ 31 ರನ್ ಗಳಿಸಿದರು. ಸೆಪ್ಟೆಂಬರ್ ನಿಂದ ಆಡಿದ 8 ಟೆಸ್ಟ್ ಪಂದ್ಯಗಳಲ್ಲಿ ಅವರು ಕೇವಲ 164 ರನ್ ಗಳಿಸಿದ್ದಾರೆ.

    ಬಿಸಿಸಿಐನ ವಿಶೇಷ ಸಾಮಾನ್ಯ ಸಭೆ ಜನವರಿ 12 ರಂದು ನಡೆಯಲಿದೆ. ಕ್ರಿಕೆಟ್ ಜಗತ್ತಿಗೆ ತುಂಬಾ ತಪ್ಪು ಸಂದೇಶ ರವಾನೆ ಆಗುತ್ತಿದೆ. ಬಿಸಿಸಿಐ ಕ್ರಿಕೆಟ್ ಅನ್ನು ಎತ್ತರಕ್ಕೆ ಕೊಂಡೊಯ್ಯಬೇಕು. ಈಗ ಅದಕ್ಕೆ ಸಮಯ ಬಂದಿದೆ. ಆಟಗಾರರಿಗೆ ಬಿಸಿಸಿಐನ ಕಟ್ಟುನಿಟ್ಟಿನ ಸಂದೇಶ ನೀಡಬೇಕು. ಯಾವುದೇ ಆಟಗಾರ ಆಟಕ್ಕಿಂತ ಮೇಲ್ಪಟ್ಟವನಲ್ಲ. ಅದಕ್ಕೆ ಹೊಸ ತಂಡವನ್ನು ಆಯ್ಕೆ ಮಾಡುವ ಅವಶ್ಯಕತೆ ಇದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    Continue Reading

    DAKSHINA KANNADA

    ನಕ್ಸಲರ ಶರಣಾಗತಿ; ಈ ಪ್ರಕ್ರಿಯೆ ಮೊದಲೇ ನಡೆಯಬೇಕಿತ್ತು ಎಂದ ವಿಕ್ರಂ ಗೌಡನ ಸಹೋದರ

    Published

    on

    ನವೆಂಬರ್ 18 ರಂದು ನಡೆದಿದ್ದ ನಕ್ಸಲ್ ವಿಕ್ರಮ್ ಗೌಡ ಎನ್ಕೌಂಟರ್ ಬಳಿಕ ನಡೆದ ಬೆಳವಣಿಗೆಯಲ್ಲಿ ಇದೀಗ ಆರು ಜನ ನಕ್ಸಲರು ಮುಖ್ಯವಾಹಿನಿಗೆ ಕಾಲಿಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶರಣಾಗತಿ ಆಗುವ ಮೂಲಕ ನಕ್ಸಲ್ ಹೋರಾಟಕ್ಕೆ ಅಂತ್ಯ ಹಾಡಿದ್ದಾರೆ.

    ನಾಗರಿಕ ಸಮಿತಿ ಮತ್ತು ಶರಣಾಗತಿ ಸಮಿತಿ ಸರ್ಕಾರದ ಜೊತೆ ಮಾತುಕತೆ ನಡೆಸಿ ಈ ಶರಣಾಗತಿ ಮಾಡಿಸಿದ್ದಾರೆ. ಆದರೆ ಇದು ವಿಕ್ರಂ ಗೌಡ ಅವರ ಸಹೋದರ ಹಾಗೂ ಸಹೋದರಿಯರಿಗೆ ಬೇಸರ ತರಿಸಿದ್ದು, ನಮ್ಮ ಅಣ್ಣ ಜೀವಂತವಾಗಿದ್ದಾಗ ಈ ಪ್ರಕ್ರಿಯೆ ನಡೆಯಬೇಕಿತ್ತು ಎಂದಿದ್ದಾರೆ. ನಕ್ಸಲರು ಶರಣಾಗುತ್ತಿರುವುದು ಒಳ್ಳೆಯ ವಿಚಾರವಾಗಿದ್ದು, ಅವರೂ ನಮ್ಮಂತೆ ಜೀವಿಸಲಿ ಎಂದಿರುವ ಸಹೋದರ ಸುರೇಶ್ ಗೌಡ ಈ ಯೋಜನೆ ಮೊದಲೇ ತಂದಿದ್ದರೆ ನನ್ನ ಅಣ್ಣ ಕೂಡಾ ಬದುಕಿ ಉಳಿಯುತ್ತಿದ್ದ ಎಂದು ಹೇಳಿದ್ದಾರೆ.

    ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ವಿಕ್ರಂ ಗೌಡ ಸಹೋದರಿ ಸುಗುಣ ನಕ್ಸಲ್ ಶರಣಾಗತಿ ಪ್ಯಾಕೇಜ್ ನಮಗೂ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಶರಣಾಗತಿಗೆ ಸಮಿತಿಯವರು ಮೊದಲೇ ಪ್ರಯತ್ನಿಸಿದ್ದರೆ ನನ್ನ ಅಣ್ಣನ ಜೀವ ಉಳಿಯುತ್ತಿತ್ತು. ಜೈಲಿನಲ್ಲಿಯಾದರೂ ಆತ ಇರುತ್ತಿದ್ದ. ಆದರೆ ಆತನನ್ನು ಎನ್ಕೌಂಟರ್ ಮಾಡಿದ ಕಾರಣ ಇಂದು ಆತ ನಮ್ಮೊಂದಿಗಿಲ್ಲ. ನಾವು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಷ್ಟದ ಜೀವನ ನಡೆಸುತ್ತಿದ್ದೇವೆ. ನಮ್ಮನ್ನು ಯಾವ ಸಮಿತಿಯೂ ಬಂದು ಭೇಟಿ ಮಾಡಿಲ್ಲ. ನಮಗೂ ನಕ್ಸಲ್ ಶರಣಾಗತಿಯ ಪ್ಯಾಕೇಜ್ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    Continue Reading

    LATEST NEWS

    Trending